LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಾಜಿ ಕೇಂದ್ರ ಸಚಿವ ದಿವಂಗತ ಆರ್.ಎಲ್.ಜಾಲಪ್ಪನವರ 99ನೇ ಹುಟ್ಟುಹಬ್ಬ ಅಂಗವಾಗಿ ವಿವಿಧ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಆರ್.ಎಲ್.ಜಾಲಪ್ಪನವರು ನೇರನಡೆ ಮತ್ತು ನಿಷ್ಠುರ ವ್ಯಕ್ತಿತ್ವದಿಂದಲೇ ಹೆಸರಾದ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.ಇಲ್ಲಿನ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಶನಿವಾರ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.

ಜಾಲಪ್ಪ ಅವರು ಪರಿಸರ, ಶಿಕ್ಷಣ, ಗ್ರಾಮೀಣಾಭಿವೃದ್ದಿ, ಸಹಕಾರ ಸೇರಿದಂತೆ ವಿವಿಧ ವಲಯಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ಜಾರಿಗೆ ತಂದ ಹೆಗ್ಗಳಿಕೆ ಹೊಂದಿದ್ದಾರೆ. ಅವರು ಸ್ಥಾಪಿಸಿರುವ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಹಿಂದುಳಿದ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮಹತ್ವದ ನೀಡುವ ಕೆಲಸ ಮಾಡುತ್ತಿದೆ ಎಂದರು.

ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಜಾಲಪ್ಪ ಅವರ ಒತ್ತಾಸೆಯಿಂದ ರಾಜ್ಯದಲ್ಲಿ ಜಾರಿಗೆ ಬಂದ ಹಲವು ಯೋಜನೆಗಳುಇಂದಿಗೂ ಜನಸ್ನೇಹಿಯಾಗಿವೆ. ದೊಡ್ಡಬಳ್ಳಾಪುರದ ಅಪರೆಲ್ ಪಾರ್ಕ್ ಸಾವಿರಾರು ಜನರಿಗೆ ಉದ್ಯೋಗಾವಕಾಶ ಗಳನ್ನು ನೀಡಿದೆ. ಮುಖ್ಯವಾಗಿ ಮಹಿಳಾ ಉದ್ಯೋಗಿಗಳಿಗೆ ಆಸರೆಯಾಗಿದೆ. ಶೈಕ್ಷಣಿಕವಾಗಿಯೂ ಸಮಾಜವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ಅನೇಕ ವಿದ್ಯಾ ಸಂಸ್ಥೆಗಳನ್ನು ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದಾರೆ ಎಂದರು.

ಪ್ರತಿಭಾ ಪುರಸ್ಕಾರ: ಇದೇ ವೇಳೆ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.ಶ್ರೀದೇವರಾಜ ಅರಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ವಿಜಯಲಕ್ಷ್ಮಿ-ಆರ್.ಎಲ್.ಜಾಲಪ್ಪ ಶೈಕ್ಷಣಿಕ ದತ್ತಿ ಟ್ರಸ್ಟಿ ಎಂ.ಆರ್.ಶ್ರೀನಿವಾಸ್, ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಜೆ.ಆರ್.ರಾಕೇಶ್, ಆರ್‍ಎಲ್ಜೆಐಟಿ ಪ್ರಾಂಶುಪಾಲ ಡಾ.ವಿಜಯ್ಕಾರ್ತಿಕ್, ಅಕಾಡೆಮಿಕ್ ನಿರ್ದೇಶಕ ಡಾ.ಶ್ರೀನಿವಾಸರೆಡ್ಡಿ, ಎಒ ರಮೇಶ್ಕುಮಾರ್, ಕೃಷ್ಣಪ್ಪ, ವಿವಿಧ ಶೈಕ್ಷಣಿಕ ಘಟಕಗಳ ಪ್ರಾಂಶುಪಾಲರು, ಉಪಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

*ರೋಗಿಗಳಿಗೆ ಹಾಲು-ಹಣ್ಣು ವಿತರಣೆ:*
ಜಾಲಪ್ಪ ಹುಟ್ಟುಹಬ್ಬದ ಅಂಗವಾಗಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಸ್ಟಿಟ್ಯೂಷನ್ ಸಹಯೋಗದಲ್ಲಿ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣುಗಳನ್ನು ವಿತರಿಸಲಾಯಿತು. ತೂಬಗೆರೆಯ ಆರ್.ಎಲ್.ಜಾಲಪ್ಪ ವೃದ್ದಾಶ್ರಮದಲ್ಲಿನ ಆಶ್ರಿತರಿಗೆ ಸವಲತ್ತುಗಳ ವಿತರಣೆ ನಡೆಯಿತು. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.ಜಾಲಪ್ಪ ಸ್ಮೃತಿವನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಶೈಕ್ಷಣಿಕ ಘಟಕಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸಿಹಿ ಹಂಚಿಕೆ ನಡೆಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು