LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು ನಮಗೆಲ್ಲ ಪ್ರೇರಣೆ

ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು ನಮಗೆಲ್ಲ ಪ್ರೇರಣೆ ಎಂದು ಮಹಿಳಾ ಜಿಲ್ಲಾಧ್ಯಕ್ಷೆ ಯಾಸ್ಮಿನ್ ತಾಜ್ ಸ್ಮರಿಸಿದರು.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ನಂತರ ಅವರು ಮಾಧ್ಯಮದೊಂದಿಗೆ ಮಾತನಾಡಿ, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು.

ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ. ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು.

ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು. ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ ಎಂದರು.ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಶ್ರೀಯುತರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ. ಅವರ ಸಾವಿನ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ, ಅಭಿಮಾನಿ ಬಳಗದವರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಮನಮೋಹನ್ ಸಿಂಗ್ ದೇಶದಲ್ಲಿ ಮೊದಲ ಬಾರಿಗೆ ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದವರು. ದೇಶದ ಬಡತನವಿದ್ದಿದ್ದರಿಂದ, ಕಡಿಮೆ ದರದಲ್ಲಿ ಆಹಾರ ಲಭಿಸುವಂತಾಗಬೇಕೆಂಬ ಸದುದ್ದೇಶದಿಂದ ಈ ಕಾನೂನನ್ನು ಜಾರಿಗೆ ತರಲಾಯಿತು. ಬಿಪಿಎಲ್ ಕಾರ್ಡ್ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಒಂದು ರೂ. ದರದಲ್ಲಿ ಒಂದು ಕೆಜಿ ಅಕ್ಕಿ ನೀಡುವ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಯಿತು. ನಂತರದ ದಿನಗಳಲ್ಲಿ ಐದು ಕೆಜಿ ಯಿಂದ ಏಳು ಕೆಜಿಯವರೆಗೆ ಹೆಚ್ಚಿಸಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇಂದು ನರೇಂದ್ರ ಮೋದಿಯವರು ನೀಡುತ್ತಿರುವ ಐದು ಕೆಜಿ ಆಹಾರಧಾನ್ಯ ಹಂಚಿಕೆಯ ಯೋಜನೆ ಪ್ರಾರಂಭವಾದದ್ದು ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಿಂದ. ದೇಶದ ಬಡವರು, ನಿರುದ್ಯೋಗಿಗಳ ಕಷ್ಟನಿವಾರಣೆಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಿದ್ದರು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು