LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಾದಪ್ಪನ ಹುಂಡಿಯಲ್ಲಿ 30 ದಿನದಲ್ಲಿ 2.29 ಕೋಟಿ ರೂ. ಸಂಗ್ರಹ

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ  ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 30  ದಿನದ ಅವಧಿಯಲ್ಲಿ 2.29 ಕೋಟಿ ರೂ.ಸಂಗ್ರಹವಾಗಿದೆ.ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ   ಸಾಲೂರು ಬೃಹನ್ಮಾಠಧ್ಯಕ್ಷ ವಿದ್ವಾನ್ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. 

ಅಮಾವಾಸ್ಯೆ, ಹುಣ್ಣಿಮೆ ಹಾಗೂ ಸರ್ಕಾರಿ ರಜಾ ದಿನಗಳಂದು ಬೆಂಗಳೂರು, ಕನಕಪುರ, ಚನ್ನಪಟ್ಟಣ, ರಾಮನಗರ, ಮೈಸೂರು, ಮಂಡ್ಯ, ಚಾ.ನಗರ, ಮಳವಳ್ಳಿ ಸೇರಿದಂತೆ ರಾಜ್ಯದ ಇನ್ನಿತರೆ ಕಡೆಗಳಿಂದ ಸಾವಿರಾರು ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.ಈ ವೇಳೆ ಭಕ್ತರು ಇಷ್ಟಾರ್ಥವಾಗಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು.

ಈ ದಿಸೆಯಲ್ಲಿ  ನಡೆದ ಹುಂಡಿ ಎಣಿಕೆಯಲ್ಲಿ 30 ದಿನದ ಅವಧಿಯಲ್ಲಿ ಈ ಬಾರಿ 2,29,67,216 ರೂ ನಗದು, 18 ಗ್ರಾಂ ಚಿನ್ನ  ಹಾಗೂ 1.200 ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.
ಮಾದಪ್ಪನ ಹುಂಡಿಯಲ್ಲಿ ವಿದೇಶದ ಹಣ: ಕಳೆದ ಹಲವು ಬಾರಿ ಹುಂಡಿ ಎಣಿಕೆಯನ್ನು ಸಂದರ್ಭದಲ್ಲಿ ವಿದೇಶದ ನೋಟುಗಳನ್ನು ಕಾಣಿಕೆ ರೂಪದಲ್ಲಿ ಹಾಕಿದ್ದರು ಈಬಾರಿಯು ಕೂಡ ಅಮೆರಿಕ ನೇಪಾಳ ಇನ್ನಿತರ ವಿದೇಶಿ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ.

ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳು ಹರಕೆ ರೂಪದಲ್ಲಿ ಹುಂಡಿಗೆ  2,000 ಅಮಾನ್ಯ ನೋಟುಗಳನ್ನು ಹಾಕುತ್ತಿದ್ದು,  ಭಕ್ತರಿಗೆ ಹಲವು ಬಾರಿ ಅಮಾನ್ಯ ನೋಟುಗಳನ್ನು ಹಾಕಬಾರದು ಎಂದು  ಮನವಿ ಮಾಡಲಾಗಿದ್ದು ಆದರೂ ಸಹ ಅಮಾನ್ಯ ನೋಟುಗಳನ್ನು ಹಾಕುತ್ತಿದ್ದು  ಈ ಬಾರಿ2000 ರೂ ಮುಖಬೆಲೆಯ 17 ನೋಟುಗಳು ದೊರೆತ್ತಿದೆ.
ಎಣಿಕೆ ಸಂದರ್ಭದಲ್ಲಿ ಶ್ರೀ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಜಿ ಎಲ್ ,  ಲೆಕ್ಕದೀಕ್ಷಕ ಗುರು ಮಲ್ಲಯ್ಯ, ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಸಿಬ್ಬಂದಿ ಶಶಿಕುಮಾರ್ , ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡ ಮುಖ್ಯವ್ಯವಸ್ಥಾಪಕರು,ಪ್ರಾಧಿಕಾರದ ನೌಕರರು ಹಾಗೂ ದೇವಸ್ಥಾನದ ಸಿಬ್ಬಂದಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು