LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಘೋಷಣೆ ಮಾಡಲೇಬೇಕು

ದೊಡ್ಡಬಳ್ಳಾಪುರ: ಒಳ ಮೀಸಲಾತಿ ಮುಂದೂಡಲು ಸರ್ಕಾರ ಯಾವುದೇ ತಂತ್ರಗಾರಿಕೆ ಮಾಡದೆ ನ್ಯಾ.ನಾಗಮೋಹನ ದಾಸ್ ಅಧ್ಯಕ್ಷತೆಯ ಏಕ ಸದಸ್ಯ ಆಯೋಗದ ವರದಿಯನ್ನು ಜಾರಿ ಮಾಡಬೇಕು ಎಂದು ಮಾದಿಗ ಸಮುದಾಯದ ಮುಖಂಡ ಎಚ್.ವೆಂಕಟೇಶ್ ದೊಡ್ಡರಿ ಆಗ್ರಹಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಾದಿಗ ಸಮುದಾಯ ಸಂಘಟನೆಗಳ ಒಕ್ಕೂಟದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರುಮಾತನಾಡಿದರು. ವರದಿಯನ್ನು ಬಿಡುಗಡೆಮಾಡಲು
ಆಗದಿದ್ದಲ್ಲಿ ತುರ್ತು ಮಧ್ಯಂತರ ವರದಿಯನ್ನಾದರೂಜಾರಿ ಮಾಡಬೇಕು. ತಮಿಳುನಾಡು ಮಾದರಿಯಲ್ಲಿ ಶೈಕ್ಷಣಿಕರವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಪ್ರತ್ಯೇಕ ಶೇ. 6ರಷ್ಟು ಮೀಸಲಾತಿ ನೀಡಬೇಕು. ಒಳ ಮೀಸಲಾತಿ ಜಾರಿಯಾದರೆ, ಪರಿಶಿಷ್ಟ ಜಾತಿಯಲ್ಲಿರುವ ಎಲ್ಲ ಜಾತಿಗಳಿಗೂ ನ್ಯಾಯ ಸಿಗುತ್ತದೆ.

ಈ ಬಗ್ಗೆ ತಕರಾರು ಇದ್ದಲ್ಲಿ, 2004ರಲ್ಲಿ ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಆರುಂಧತಿಯಾರ್ ಸಮುದಾಯಕ್ಕೆ ನೀಡಿದ ಶೇಕಡಾ 3ರಷ್ಟು ಮೀಸಲಾತಿ ಮಾದರಿಯ ದತ್ತಾಂಶಗಳನ್ನು ಪರಾಮರ್ಶಿಸಬಹುದು ಎಂದರು.ಮಾದಿಗ ಸಮುದಾಯಕ್ಕೆ 6ರಷ್ಟು ಮೀಸಲಾತಿ ಕೊಡುವಂತೆ ಪಕ್ಷಾತೀತ ಹೋರಾಟ ಅಗತ್ಯ. ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾಲಹರಣ ಮಾಡದೆ ಒಳ ಮೀಸಲಾತಿ ಜಾರಿ ಮಾಡಬೇಕು ಎಂದರು. ಮುಖಂಡ ರಾಮಕೃಷ್ಣಪ್ಪ ದೊಡ್ಡತುಮಕೂರು ಮಾತನಾಡಿ, ರಾಜ್ಯದ 31 ಜಿಲ್ಲೆಗಳಲ್ಲಿನ * 13 ಜಿಲ್ಲೆಗಳಲ್ಲಿ ಆದಿಕರ್ನಾಟಕ ಮತ್ತು ಆದಿದ್ರಾವಿಡ ಜಾತಿಗಳ ಬಗ್ಗೆ ಗೊಂದಲವಿದೆ. ಈ ಗೊಂದಲ ಗೊಂದಲ ಪರಿಹಾರಕ್ಕೆ ಪರಿಹಾ ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ ಮಾಡಲಾಗಿದೆ. ನಾವು ನಮ್ಮ ಪಾಲಿನ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.

ಮಾದಿಗ ಸಮುದಾಯದ ಮುಖಂಡರಾದ ವೆಂಕಟೇಶ್ ದೊಡ್ಡತುಮಕೂರು, ಹನುಮಂತಯ್ಯ ಹಳೇಕೋಟೆ, ತಳವಾರ ನಾಗರಾಜು, ಹರ್ಷ ಹಾದ್ರಿ ಪುರ, ವಕೀಲರಾದ ಕಾಂತರಾಜು, ಶಿವಕುಮಾರ್, ತೂಬಗೆರೆ ವೆಂಕಟೇಶ್, ಮಂಜುನಾಥ್, ನಾರಸಿಂಹನಹಳ್ಳಿ ಶಿವಕುಮಾರ್, ಗಂಗರಾಜು, ಕುಂಬಾರಪೇಟೆ ನಾರಾಯಣಪ್ಪ ಮತ್ತಿತರರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು