LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಾಲೂರು ಪತ್ರಕರ್ತರ ಭವನದ ಶಂಕುಸ್ಥಾಪನೆ ನೆರವೇರಿಸಿದ ಕೆವಿಪಿ

ಮಾಲೂರು: ಸಣ್ಣ ಊರಿನ ಪತ್ರಕರ್ತರ ಸಮಸ್ಯೆ ಪರಿಹಾರಕ್ಕೆ ಮೊದಲ ಆಧ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ತಿಳಿಸಿದರು.
ಪತ್ರಿಕಾ ದಿನಾಚರಣೆಯ ಅಂಗವಾಗಿ ಮಾಲೂರು ಪತ್ರಕರ್ತರ ಭವನಕ್ಕೆ ಭೂಮಿಪೂಜೆ ನೆರವೇರಿಸಿ, ಪತ್ರಕರ್ತರಿಗೆ ಅಭಿನಂದಿಸಿ ಮಾತನಾಡಿದರು.

ಪತ್ರಕರ್ತರಿಗೆ ತುಂಬಾ ಅವಶ್ಯಕವಿರುವ ಆರೋಗ್ಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಸಿಗುವಂತಹ ಆರೋಗ್ಯ ವಿಮೆ ಈ ಹಿಂದೆಯೇ ಮಾಡಲಾಗಿತ್ತು. ಅದಕ್ಕಾಗಿ10 ಕೋಟಿ ರೂಗಳನ್ನು ಮೀಸಲಿಡಾಲಾಗಿದೆ. ಆರೋಗ್ಯ ವಿಮೆ ನೀಡಲು ಕೆಲವು ನ್ಯೂನ್ಯತೆಗಳಿದ್ದವು ಅವುಗಳ ಸರಳೀಕರಣಕ್ಕೆ ಇತ್ತೀಚಿಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅದಕ್ಕೊಂದು ಕರಡು ನೀತಿ ರೂಪಿಸಲಾಗಿದೆ. ಅದು ಶೀಘ್ರದಲ್ಲಿ ಎಲ್ಲ ಪತ್ರಕರ್ತರಿಗೆ ಸುಲಭವಾಗಿ ಸಿಗುವಂತಾಗಲಿದೆ ಎಂದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದು ಅದರ ವಿತರಣೆಯ ಕರಡು ನೀತಿ ಸಿದ್ದಗೊಳ್ಳುತ್ತಿದೆ. ತಾಲ್ಲೂಕು ಪತ್ರಕರ್ತರಿಗೆ, ಜಿಲ್ಲಾ ಪತ್ರಕರ್ತರಿಗೆ ಮತ್ತು ಗ್ರಾಮೀಣ ಪತ್ರಿಕೆಗಳಿಗೆ ಆದ್ಯಕೆ ಮೇರೆಗೆ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದರು.
ಮಾಲೂರು ಪತ್ರಕರ್ತರ ಸಂಘದ ಪ್ರಯತ್ನದಿಂದ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಷಯ.

ಭವನ ನಿರ್ಮಾಣ ಮಾಡುವುದು ಸುಲಭದ ಕೆಲಸವಲ್ಲ. ಇದಕ್ಕೆ ಶ್ರಮಿಸಿದ ಪತ್ರಕರ್ತ ಮಿತ್ರರಿಗೂ ಮತ್ತು ವಿಶೇಷವಾಗಿ ಕಾರಣೀಭೂತರಾದ ಶಾಸಕರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಎಂದರು. ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಕಾರ ನೀಡಿ ಅತ್ಯಂತ ಕಡಿಮೆ ಅವಧಿಯಲ್ಲಿ ಮುಗಿಸಿ. ಮುಖ್ಯಮಂತ್ರಿಗಳೇ ಅದನ್ನು ಉದ್ಘಾಟಿಸುತ್ತಾರೆ ಎಂದರು. ಭವನ ನಿರ್ಮಾಣಕ್ಕೆ ನಾನೂ ಶಕ್ತಿ ಮೀರಿ ಸಹಕಾರ ನೀಡುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಮಾಲೂರು ಶಾಸಕರಾದ ನಂಜೇಗೌಡರು, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿ ಕೋಲಾರ ಮತ್ತು ಮಾಲೂರು ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು