LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮಿಂಚದ ಸ್ಟಾರ್ ಬ್ಯಾಟರ್‍ಗಳು: ಇಂಗ್ಲೆಂಡ್ ವಿರುದ್ಧದ ಸೋತ ಭಾರತ

ಇಲ್ಲಿನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. ಇಂಗ್ಲೆಂಡ್ ನೀಡಿದ 171 ರನ್‍ಗಳ ಗುರಿಯನ್ನು ತಲುಪುವಲ್ಲಿ ಭಾರತ ವಿಫಲವಾಗಿದೆ.ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತವು, 20 ನಿಗದಿತ ಓವರ್‍ಗಳಲ್ಲಿ 9 ವಿಕೆಟ್ ಕಬಳಿಸಿ ಇಂಗ್ಲೆಂಡ್ ತಂಡವನ್ನು 171 ರನ್‍ಗಳಿಗೆ ಸಿಮೀತಗೊಳಿಸಿತು. ಇಂಗ್ಲೆಂಡ್ ತಂಡದ ಪರವಾಗಿ 51(28) ರನ್‍ಗಳಿಸಿ ಮಿಂಚಿದರು. ಹಾಗೆಯೇ ಲಿಯಾಮ್ ಲಿವಿಂಗ್‍ಸ್ಟೋನ್ ಕೂಡ 43(24) ರನ್ ಗಳಿಸಿ ಗಮನ ಸೆಳೆದರು.

ಭಾರತದ ಪರವಾಗಿ ವರುಣ್ ಚಕ್ರವರ್ತಿ 5 ವಿಕೆಟ್ ಕಬಳಿಸಿ ಮಿಂಚಿದರು. ವರುಣ್ ಚಕ್ರವರ್ತಿ ನಿಗದಿತ 4 ಓವರ್‍ನಲ್ಲಿ ಕೇವಲ 24 ರನ್ ನೀಡಿ ಗಮನ ಸೆಳೆದರು. ಉಳಿದಂತೆ ಹಾರ್ದಿಕ್ ಪಾಂಡ್ಯಾ 2, ರವಿ ಬಿಷ್ಣೋಯಿ ಹಾಗೂ ಅಕ್ಸರ್ ಪಟೇಲ್ ತಲಾ 1 ವಿಕೆಟ್ ಕಬಳಿಸಿದರು. ಸುದೀರ್ಘ ಸಮಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಮರಳಿರವು ಭಾರತ ತಂಡದ ವೇಗಿ ಮೊಹಮ್ಮದ್ ಶಮಿ 3 ಓವರ್‍ನಲ್ಲಿ 25 ರನ್ ನೀಡಿ ಶೂನ್ಯ ವಿಕೆಟ್ ಕಬಳಿಸಿ ನಿರಾಸೆ ಮೂಡಿಸಿದರು.

ಎರಡನೇ ಇನ್ನಿಂಗ್ಸ್‍ನಲ್ಲಿ ಇಂಗ್ಲೆಂಡ್ ತಂಡ ನೀಡಿದ 171 ರನ್‍ಗಳ ಗುರಿ ಬೆನ್ನತ್ತಿದ್ದ ಭಾರತ, ನಿಗದಿತ 20 ಓವರ್‍ನಲ್ಲಿ 9 ವಿಕೆಟ್ ಕಳೆದುಕೊಂಡು ಕೇವಲ 145 ರನ್ ಗಳಿಸಿ ಸೋಲೊಪ್ಪಿಕೊಂಡಿತು.ಭಾರತ ತಂಡದ ಪರವಾಗಿ ಹಾರ್ದಿಕ್ ಪಾಂಡ್ಯಾ ಅತ್ಯಧಿಕ 40(32) ರನ್ ಗಳಿಸಿ ಗಮನ ಸೆಳೆದರು. ಉಳಿದಂತೆ ಯಾವ ಸ್ಟಾರ್ ಆಟಗಾರರು ಗಮನ ಸೆಳೆಯುವ ಪ್ರದರ್ಶನ ನೀಡಲಿಲ್ಲ.

ಮೊದಲೆರಡು ಪಂದ್ಯದಲ್ಲಿ ಮಿಂಚಿದ ಭಾರತ ತಂಡದ ಯುವ ಆಟಗಾರರಾದ ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಮೂರನೇ ಟಿ-20 ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ತೋರುವಲ್ಲಿ ವಿಫಲರಾದರು. ಅಭಿಷೇಕ್ ಶರ್ಮಾ 24(14) ರನ್ ಗಳಿಸಿದರೆ, ತಿಲಕ್ ವರ್ಮಾ 18(14) ರನ್ ಗಳಿಸಿ ಅಬ್ದುಲ್ ರಷೀದ್ ಅವರಿಗೆ ವಿಕೆಟ್ ಒಪ್ಪಿಸಿದರು. ಇನ್ನು ಸಂಜು ಸ್ಯಾಮ್ಸನ್ ಕೇವಲ 3 ರನ್ ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್‍ನಲ್ಲಿ ಅಬ್ದುಲ್ ರಷೀದ್ ಅವರಿಗೆ ಕ್ಯಾಚಿತ್ತು ನಿರ್ಗಮಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು