LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ: 25 ಮಂದಿಗೆ ಗಾಯ, ನಾಲ್ವರ ದುರ್ಮರಣ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬ್ರೇಕ್ ಫೇಲ್ ಆದ ಪರಿಣಾಮ ಪಾದಚಾರಿಗಳಿಗೆ ಬಸ್ ವೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 25 ಮಂದಿ ಗಂಭೀರವಾಗಿ ಗಾಯಗೊಂಡು, ನಾಲ್ವರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಕುರ್ಲಾದ ಬೃಹನ್‌ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ಪೋರ್ಟ್ (ಬೆಸ್ಟ್) ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ನೋಂದಣಿ ಸಂಖ್ಯೆ MH01-EM-8228 ರ ಬಸ್ ಕುರ್ಲಾ ರೈಲು ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಾರ್ಗ ಸಂಖ್ಯೆ 332 ರ ಬಳಿ ಚಾಲಕ ಬಸ್ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ. ಈ ವೇಳೆ ಬಸ್ ಪಾದಚಾರಿಗಳಿಗೆ ಮತ್ತು ಕೆಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡ 25 ಮಂದಿಯನ್ನು ಸ್ಥಳೀಯ ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿವೆ ಎಂದು ಹೇಳಿದ್ದಾರೆ.

ನಾನು ನನ್ನ ಸ್ನೇಹಿತರೊಂದಿಗೆ ರಾಯಲ್ ಸ್ವೀಟ್ಸ್ ಅಂಗಡಿಯ ಮುಂದೆ ನಿಂತಿದ್ದಾಗ ವೇಗವಾಗಿ ಬಂದ ಬಸ್ ಏಕಾಏಕಿ ಹಲವು ವಾಹನಗಳಿಗೆ ಹಾಗೂ ಪಾದಚಾರಿಗಳಿಗ ಗುದ್ದಿತು. ಬಳಿಕ ಬುದ್ಧ ಕಾಲೋನಿಗೆ ಪ್ರವೇಶಿಸಿತು. ಕೂಡಲೇ ಸ್ಥಳಕ್ಕೆ ತೆರಳಿ ಬಸ್ ಚಾಲಕನನ್ನು ವಾಹನದಿಂದ ಹೊರಗೆ ತಂದೆವು. ಘಟನೆ ಬಳಿಕ ಹಲವರು ರಕ್ತಸಿಕ್ತರಾಗಿ ಕೆಳಗೆ ಬಿದ್ದಿದ್ದರು. ಸಾಕಷ್ಟು ಜನರು ಸ್ಥಳ ಸೇರಿದ್ದರು. ಬಳಿಕ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದವು ಎಂದು ಪ್ರತ್ಯಕ್ಷದರ್ಶಿ ಝೀಶನ್ ಅನ್ಸಾರಿ ಎಂಬುವವರು ಹೇಳಿದ್ದಾರೆ.

ಮನೆಯಿಂದ ರೈಲ್ವೇ ನಿಲ್ದಾಣಕ್ಕೆ ಹೋಗುವಾಗ ಹಲವರು ಕೂಗಾಡುತ್ತಿದ್ದ ಶಬ್ದ ಕೇಳಿಸಿತು. ಸ್ಥಳಕ್ಕೆ ಹೋಗಿ ನೋಡಿದಾಗ ಬಸ್ ಪಾದಚಾರಿಗಳಿಗೆ, ಆಟೋರಿಕ್ಷಾ ಮತ್ತು ಮೂರು ಕಾರುಗಳು ಸೇರಿದಂತೆ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿತು. ನನ್ನ ಕಣ್ಣು ಮುಂದೆ ಕೆಲವು ಮೃತ ಪಟ್ಟಿದ್ದನ್ನು ನೋಡಿದೆವು. ಆಟೋರಿಕ್ಷಾದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಭಾಭಾ ಆಸ್ಪತ್ರೆಗೆ ಕರೆದೊಯ್ದೆವು. ಮತ್ತೊಂದು ವಾಹನದಲ್ಲಿ ನನ್ನ ಸ್ನೇಹಿತರು ಗಾಯಗೊಂಡವರಿಗೆ ಸಹಾಯ ಮಾಡಿದರು ಎಂದು ಮತ್ತೊಬ್ಬ ಪ್ರತ್ಯಕ್ಷದರ್ಶಿ ಅಹ್ಮದ್ ೆಂಬುವವರು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು