LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಂಬೈ ದಾಳಿಕೋರನ ಹಸ್ತಾಂತರಕ್ಕೆ ಅಮೆರಿಕ ಸಮ್ಮತಿ

ನವದೆಹಲಿ: 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ.ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ರಾಣಾನನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮರು ದಿನವೇ ಅಮೆರಿಕ ಸುಪ್ರೀಂಕೋರ್ಟ್‍ನಿಂದ ಈ ತೀರ್ಪು ಹೊರಬಿದ್ದಿದೆ.

ರಾಣಾ ಹಸ್ತಾಂತರವನ್ನು ಅಮೆರಿಕ ಸುಪ್ರೀಂ ಕೋರ್ಟ್‍ನಲ್ಲಿ ಪ್ರಶ್ನಿಸಲಾಗಿತ್ತು. ಆದರೆ ರಾಣಾ ಮನವಿಯನ್ನು ವಜಗೊಳಿಸಿರುವ ಕೋರ್ಟ್, ಭಾರತಕ್ಕೆ ಹಸ್ತಾಂತರ ಮಾಡಬಹುದು ಎಂದು ತೀರ್ಪು ನೀಡಿದೆ.ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವುದರ ವಿರುದ್ಧ ಕಳೆದ ನವಂಬರ್‍ನಲ್ಲಿ ಅಮೆರಿಕ ಸುಪ್ರೀಂ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಒಂದು ದಿನದ ನಂತರ ಅಮೆರಿಕ ಸುಪ್ರೀಂ ಕೋರ್ಟ್ ರಿಟ್ ಅರ್ಜಿಯನ್ನು ತಿರಸ್ಕರಿಸಿದೆ. ಮುಂಬೈ ದಾಳಿ ಅಪರಾಧಿಯನ್ನು ಭಾರತಕ್ಕೆ ಗಡಿಪಾರು ಮಾಡುವ ಮನವಿಗೆ ಅಮೆರಿಕ ಸರ್ಕಾರ ಬೆಂಬಲ ಸೂಚಿಸಿತ್ತು.

ಭಾರತಕ್ಕೆ ಗಡಿಪಾರಾಗುವುದನ್ನು ತಪ್ಪಿಸಲು ತಹಾವುರ್ ರಾಣಾಗೆ ಇದು ಕೊನೆಯ ಅವಕಾಶವಾಗಿತ್ತು. ಈಗ ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿರುವುದರಿಂದ ಆತನ ಮುಂದಿರುವ ಆಯ್ಕೆಗಳೆಲ್ಲ ಬಂದ್ ಆಗಿದ್ದು, ಭಾರತಕ್ಕೆ ಗಡಿಪಾರಾಗಲೇಬೇಕಿದೆ.ಇದಕ್ಕೂ ಮುನ್ನ ಅಮೆರಿಕ ಸರ್ಕಾರ ರಾಣಾ ಪರ ವಕೀಲರ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿತ್ತು. ಯುಎಸ್ ಸಾಲಿಸಿಟರ್ ಜನರಲ್ ಎಲಿಜಬೆತ್ ಬಿ. ಪ್ರಿಲೋಗರ್ ಅವರು ಡಿಸೆಂಬರ್ 16 ರಂದು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ ದಾಖಲೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ರಾಣಾ ಭಾರತಕ್ಕೆ ಹಸ್ತಾಂತರದಿಂದ ವಿನಾಯಿತಿ ಪಡೆಯಲು ಅರ್ಹನಲ್ಲ ಎಂದು ಅಮೆರಿಕ ಸರ್ಕಾರದ ಪರ ವಕೀಲರು ವಾದಿಸಿದ್ದರು.

ರಾಣಾ ಪರ ವಕೀಲರು ಅಮೆರಿಕ ಸರ್ಕಾರದ ಶಿಫಾರಸನ್ನು ಪ್ರಶ್ನಿಸಿದ್ದರುಮತ್ತು ಅವರ ರಿಟ್ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‍ಗೆ ವಿನಂತಿಸಿದ್ದರು.ಜನವರಿ 17ರಂದು ರಾಣಾ ಅರ್ಜಿ ವಿಚಾರಣೆ ನಡೆದಿತ್ತು. ಅಂತಿಮವಾಗಿ ಇದೀಗ ತೀರ್ಪು ಹೊರಬಿದ್ದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು