ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ತಾವು ಪಡೆದಿದ್ದ 14 ನಿವೇಶನಗಳನ್ನು ವಾಪಾಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬರೆದಿದ್ದ ಪತ್ರ ಮುಡಾ ಕಚೇರಿ ತಲುಪಿದೆ.
Also read
ಪತ್ರವನ್ನು ಖುದ್ದಾಗಿ ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುಡಾ ಆಯುಕ್ತ ರಘುನಂದನ್ ಅವರಿಗೆ ತಲುಪಿಸಿದ್ದಾರೆ.ತಾವು ನಿವೇಶನ ಪಡೆದಿರುವ ಹಿನ್ನೆಲೆಯಲ್ಲಿ ತಮ್ಮ ಪತಿ ಸಿದ್ದರಾಮಯ್ಯ ಅವರು ಗೌರವ ಘನತೆಗೆ ಧಕ್ಕೆಯುಂಟಾಗುತ್ತಿದೆ ಎಂದು ಪಾರ್ವತಿ ಅವರು ಭಾವುಕರಾಗಿ ನಿವೇಶನ ಹಿಂದಕ್ಕೆ ನೀಡುತ್ತಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.