LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಮುಡಾ ಮೇಲೆ ಇ.ಡಿ. ರೈಡ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ದಾಖಲೆ ಪತ್ರ ಪರಿಶೀಲನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಕಚೇರಿಗೆ ಭೇಟಿ ನೀಡಿರುವ ಇ.ಡಿ. ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದ ನಂತರ ಜಾರಿ ನಿರ್ದೇಶನಾಲಯಕ್ಕೂ ನಿವೇಶನದ ಹಗರಣಗಳ ಬಗ್ಗೆ ದೂರು ಸಲ್ಲಿಸಲಾಗಿತ್ತು. ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇ.ಡಿ. ಅಧಿಕಾರಿಗಳು ತನಿಖೆ ಆರಂಭಿಸಿದ್ದರು.ಸ್ನೇಹಮಯಿ ಕೃಷ್ಣ ಎಂಬುವರು ಈಗಾಗಲೇ ಲೋಕಾಯುಕ್ತ ದಲ್ಲೂ ದೂರು ಸಲ್ಲಿಸಿದ ನಂತರ ಇ.ಡಿ. ಕಚೇರಿಗೂ ಕೆಲ ದಾಖಲೆಗಳ ಸಮೇತ ದೂರು ನೀಡಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹೆಸರಿನಲ್ಲಿ ಮಂಜುರಾದ 14 ನಿವೇಶನ ಗಳಿಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರಿಂದ ಅಧಿಕಾರ ದುರುಪಯೋಗವಾಗಿದೆ ಎಂಬ ಪ್ರಬಲ ಆರೋಪ ಕೇಳಿಬಂದಿತ್ತು. ದೂರಿನ ನಂತರ ನಡೆದ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿಯವರ ಪತ್ನಿ ಪಾರ್ವತಿಯವರು ತಮಗೆ ಮಂಜೂರಾಗಿದ್ದ 14 ನಿವೇಶನಗಳನ್ನು ಮುಡಾಗೆ ವಾಪಸ್ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೂ ಏನೇ ಆರೋಪ ಕೇಳಿಬಂದರೂ ತಮ್ಮ ಸ್ಥಾನವನ್ನು ತ್ಯಜಿಸುವುದಿಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲವನ್ನು ಕಾನೂನು ಪ್ರಕಾರವೇ ಎದುರಿಸುತ್ತೇನೆ ಎಂದು ಹೇಳಿದ್ದಾರೆ.ಮುಡಾ ಮೇಲೆ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆ ಪತ್ರ ಪರಿಶೀಲನೆ ನಡೆಸಿದರೆ, ಇತ್ತ ಮತ್ತೊಂದು ತಂಡ ಜಮೀನು ಮಾರಾಟ ಮಾಡಲಾಗಿದ್ದ ಎನ್ನುವ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿರುವ ಕೆಂಗೇರಿಯ ದೇವರಾಜು ಅವರ ಮನೆ ಮೇಲೂ ದಾಳಿ ನಡೆಸಿ ದಾಖಲೆ ಪತ್ರ ಪರಿಶೀಲನೆ ನಡೆಸಿದೆ.

ಇದೇ ವೇಳೆ ಇ.ಡಿ. ದಾಳಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ಇಡಿಯವರು ದಾಳಿ ನಡೆಸಿದ್ದಾರೆ. ಆದರೆ ಇದುವರೆಗೂ ತಮ್ಮಿಂದ ಯಾವುದೇ ದಾಖಲೆಗಳನ್ನು ಕೇಳಿಲ್ಲ. ಅವರು ಏನೇ ದಾಖಲೆ ಕೇಳಿದರು ಕೊಟ್ಟು ಸಹಕರಿಸುತ್ತೇವೆ ಎಂದು ತಿಳಿಸಿದ್ದಾರೆ.
ಯಾವುದೇ ಕಾರಣಕ್ಕೂ ತಮ್ಮ ಸ್ಥಾನವನ್ನು ತ್ಯಜಿಸುವುದಿಲ್ಲ. ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು