LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಮುಡಾ ಹಗರಣ: ಆರ್‍ಟಿಐ ಗಂಗರಾಜು ಗಂಭೀರ ಆರೋಪ

ಮೈಸೂರು: ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿಗಳ ವ್ಯವಹಾರ ನಡೆದಿತ್ತು ಎಂದು ಆರ್‍ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ.ಡೀಲ್ ನಡೆದಿರುವ ಬಗ್ಗೆ ನನ್ನ ಬಳಿ ದಾಖಲೆ ಇದೆ. ಇವತ್ತು ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ವಿಚಾರಣೆಗಾಗಿ ಇಂದು ಇಡಿ ಕಚೇರಿಗೆ ಬರಲು ಹೇಳಿದ್ದಾರೆ ಎಂದು ಅವರು ತಿಳಿಸಿದ್ದು, ವಿಚಾರಣೆಗೆ ಹಾಜರಾಗುವ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ.ಮೈಸೂರು ಮುಡಾ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಲು ಲೋಕಾಯುಕ್ತ ವಾರೆಂಟ್ ಪಡೆದಿತ್ತು. ಆದರೆ, ನಂತರ ಸರ್ಚ್ ಮಾಡದೆ ಸರ್ಚ್ ವಾರೆಂಟ್ ವಾಪಸ್ಸು ಕೊಡಲಾಗಿತ್ತು. ಸರ್ಚ್ ವಾರೆಂಟ್ ಬಗ್ಗೆ ಲೋಕಾಯುಕ್ತ ಡಿವೈಎಸ್‍ಪಿ ಮಾಲ್ತೇಶ್‍ರಿಂದ ಮಾಹಿತಿ ಸೋರಿಕೆಯಾಗಿತ್ತು.

ಸಚಿವ ಬೈರತಿ ಸುರೇಶ್ ಹಿಂದಿನ ಆಯುಕ್ತರಾದ ಜಿಟಿ ದಿನೇಶ್ ಕುಮಾರ್ ಹಾಗೂ ನಟೇಶ್‍ಗೆ ಮಾಹಿತಿ ನೀಡಿದ್ದರು. ಇದಕ್ಕಾಗಿ 8 ಕೋಟಿ ರೂಪಾಯಿ ಹಣದ ಡೀಲ್ ನಡೆದಿದ್ದ ದಾಖಲೆ ನನ್ನ ಬಳಿ ಇದೆ. ಆ ದಾಖಲೆಯನ್ನು ಇಡಿಗೆ ನೀಡುತ್ತೇನೆ. ತನಿಖೆಯ ದೃಷ್ಟಿಯಿಂದ ಮಾಧ್ಯಮಗಳಿಗೆ ನೀಡುವುದಿಲ್ಲ. ಈಗಾಗಲೆ ಈ ಸಂಬಂಧ ರಾಜ್ಯಪಾಲರಿಗೂ ದೂರು ನೀಡಿದ್ದೇನೆ ಎಂದು ಗಂಗರಾಜು ಹೇಳಿದ್ದಾರೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಯಾವುದೇ ಮಾಹಿತಿ ಕೇಳಿದರೂ ನೀಡುವೆ. ಮುಡಾದಲ್ಲಿ ಸಿದ್ದರಾಮಯ್ಯ ಅವರದ್ದು 20 ರಿಂದ 25 ಕೋಟಿ ರೂ. ಅಕ್ರಮ. ಆದರೆ, ಒಟ್ಟಾರೆಯಾಗಿ 5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. 50:50 ಅನುಪಾತದಲ್ಲಿ ಬದಲಿ ಭೂಮಿಯನ್ನು ಖಾತೆ ಕಂದಾಯ ಸೆಟಲ್?ಮೆಂಟ್ ಡೀಡ್‍ಗಳ ಮೂಲಕ ಕಿಕ್ ಬ್ಯಾಕ್ ಪಡೆಯಲಾಗಿದೆ. ಇದರ ದಾಖಲೆ ಹೀಗಾಗಲೇ ಇಡಿಗೆ ನೀಡಿದ್ದೇನೆ. ಈ ತನಿಖೆಗಳು ಏನೇ ಇರಲಿ. ಈ ಪ್ರಕರಣವನ್ನು ಸಿಬಿಐಗೆ ವಹಿಸಲೇಬೇಕು. ಆಗ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದು ಗಂಗರಾಜು ಅಭಿಪ್ರಾಯಪಟ್ಟಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು