LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮುಡಾ ಹಗರಣ ಖಂಡಿಸಿ 12ರಂದು ಮೈಸೂರು ಸಿಎಂ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಖಂಡಿಸಿ ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ತಿಂಗಳ 12ರಂದು ಮೈಸೂರಿನಲ್ಲಿರುವ ಮುಖ್ಯಮಂತ್ರಿಗಳ ಮನೆ ಮುಂದೆ ತಾವು ಸೇರಿದಂತೆ ಬಿಜೆಪಿಯ ಮುಖಂಡರಾದ ಆರ್. ಅಶೋಕ್ ಡಾ. ಸಿ.ಎನ್. ಅಶ್ವತ್ಥ್‍ನಾರಾಯಣ ಅವರನ್ನೊಳಗೊಂಡು ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಮುಡಾದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ತಪ್ಪು ಮಾಹಿತಿ ನೀಡುವ ಯತ್ನ ನಡೆಸಿದ್ದಾರೆ. ಇವರಿಂದ ಅವರ ಮುಖವಾಡ ಕಳಚಿದೆ ಎಂದು ಗುಡುಗಿದ್ದಾರೆಮುಡಾದಲ್ಲಿ ಭೂಸ್ವಾಧಿನಗೊಂಡಿದ್ದ ಮುಖ್ಯಮಂತ್ರಿಯವರ ಪತ್ನಿ ಅವರ ಹೆಸರಿನ ಜಮೀನಿಗೆ ಪರ್ಯಾಯವಾಗಿ ಜಮೀನು ನೀಡುವ ವಿಷಯಕ್ಕೆ ಸಂಬಂಧಪಟ್ಟಂತೆ ನಿಯಮಗಳು ಗಾಳಿಗೆ ತೂರಲಾಗಿದೆ.

ಕಾನೂನು ಬಾಹಿರವಾಗಿ ಹೆಚ್ಚು ನಿವೇಶನಗಳನ್ನು ಪಡೆಯಲಾಗಿದೆ. ನಿಯಮಾನುಸಾರ 40 60 ಅಳತೆಯ ಎರಡು ಪರ್ಯಾಯ ನಿವೇಶನಗಳನ್ನು ಪಡೆಯಬೇಕಾಗಿತ್ತು. ಆದರೆ 14 ನಿವೇಶನ ಪಡೆಯಲಾಗಿದೆ.ಈ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರ ಪತ್ನಿ ಅಣ್ಣ ಮಲ್ಲಿಕಾರ್ಜುನ ಸ್ವಾಮಿ ಪರಿವರ್ತಿತ ಜಮೀನನ್ನನು ಕೃಷಿ ಜಮೀನು ಎಂದು ಉಲ್ಲೇಖಿಸಿದ್ದಾರೆ.

ಹೀಗ ಅನೇಕ ಅಕ್ರಮಗಳು ನಡೆದಿದವೆ ಎಂದು ತಾವು ಮಾಡಿದ ಆರೋಪಗಳಿಗೆ ಪೂರಕ ಎನ್ನಲಾದ ಕೆಲ ದಾಖಲೆಗಳನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.12ರಂದು ಮುಖ್ಯಮಂತ್ರಿ ಹಾಗು ಸಚಿವರ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು