LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮುಡಾ ಹಗರಣ: ಸಿದ್ದರಾಮಯ್ಯಗೆ  ಇಂದು ವಿಚಾರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ  ಬುಧವಾರ (ಜನವರಿ 15) ಮಹತ್ವದ ದಿನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ  ವರ್ಗಾಯಿಸುವಂತೆ ಆರ್​ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಲಿದೆ.

ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಅವರು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಾದಿಸಲಿದ್ದಾರೆ. ಸ್ನೇಹಮಯಿ ಕೃಷ್ಣ ಪರವಾಗಿ ಕೆಜಿ ರಾಘವನ್​ ವಾದ ಮಂಡಿಸಲಿದ್ದಾರೆ.

ಲೋಕಾಯುಕ್ತ ಪೊಲೀಸರು ಸಲ್ಲಿಸಬೇಕಿದ್ದ ತನಿಖೆಯ ಅಂತಿಮ ವರದಿ ಗಡುವನ್ನು ಹೈಕೋರ್ಟ್ ಜನವರಿ 28ರವರೆಗೆ ವಿಸ್ತರಿಸಿದೆ.

ಪ್ರಕರಣದ ಬಗ್ಗೆ ಇಂದು ಅಂತಿಮ ತೀರ್ಪು ಬರುವ ವಿಶ್ವಾಸವಿದೆ. ಸಿಬಿಐಗೆ ವಹಿಸಲು ಅವಶ್ಯಕವಿರುವ ದಾಖಲೆಗಳನ್ನು ನೀಡಲಾಗಿದೆ. ಕೋರ್ಟ್​ಗೆ ಮನವಿ ಮಾಡಿದ ನಂತರ ಸಾಕಷ್ಟು ಬೆಳವಣಿಗೆ ಆಗಿದೆ. ನನಗೆ ಆಮಿಷವೊಡ್ಡಲಾಗಿದೆ, ಒತ್ತಡ, ಬೆದರಿಕೆ ಕೂಡ ಹಾಕಲಾಗಿದೆ. ಈ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದೇವೆ. ಲೋಕಾಯುಕ್ತ ತನಿಖೆ ಬಗ್ಗೆ ವಿಶ್ವಾಸವಿಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.

ಸರ್ಕಾರದ ಅಧೀನದಲ್ಲಿರುವ ಸಂಸ್ಥೆಯಿಂದ ಪಾರದರ್ಶಕ ತನಿಖೆ ಸಾಧ್ಯವಿಲ್ಲ. ಸಿಬಿಐ ತನಿಖೆಯಿಂದ ಮಾತ್ರ ನ್ಯಾಯ ಸಿಗುವ ವಿಶ್ವಾಸವಿದೆ. ಸಿಬಿಐಗೆ ಬಹಿ ಸಿಎಂ ಸಿದ್ದರಾಮಯ್ಯ ಪ್ರಕರಣ ವಹಿಸಿದ ಮೇಲೆ ರಾಜೀನಾಮೆ ನೀಡುತ್ತಾರೆ ಅನ್ನೋ‌ ವಿಶ್ವಾಸವಿದೆ. ಆಗ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುವ ಕೆಲಸ‌ ಆಗುತ್ತದೆ. ಗುರಿ ತಲುಪುವವರೆಗೂ ನನ್ನ ಹೋರಾಟ ಮುಂದುವರಿಯುತ್ತದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು