LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮುನಿರತ್ನ ವಿರುದ್ಧ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ ತಮಟೆ ಬಾರಿಸಿ, ಅರೆಬೆತ್ತಲೆ ಮೆರವಣಿಗೆ ನಡೆಸಿದ ದಲಿತ ಸಂಘಟನೆಗಳು

ನೆಲಮಂಗಲ: ಪರಿಶಿಷ್ಟ ಜಾತಿ ಮತ್ತು ಮಹಿಳೆಯರ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ದಲಿತ ಸಂಘಟನೆಗಳು ಅರೆಬೆತ್ತಲೆ ಮೆರವಣಿಗೆ ನಡೆಸಿ ಗಡಿಪಾರು ಮಾಡುವಂತೆ ಆಗ್ರಹಿಸಿದರು.

ನಗರದ ಪರಿವೀಕ್ಷಣ ಮಂದಿರದಿಂದ ತಾಲ್ಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಶಾಸಕ ಮುನಿರತ್ನ ಪ್ರಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಿ ತಹಶೀಲ್ದಾರ್ ಅಮೃತ್ ಅತ್ರೆಶ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಗರಸಭೆ ಸದಸ್ಯ ನರಸಿಂಹಮೂರ್ತಿ ಮಾತನಾಡಿ ಪರಿಶಿಷ್ಟ ಜಾತಿಯ ಜನರು ಹಾಗೂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ.

ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಂವಿಧಾನ ವಿರೋಧಿ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು, ಜೀವ ಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದರು.ಅವನು ಮಾತನಾಡಿರುವ ಅಸಂವಿಧಾನಿಕ ಪದಗಳು ಬಿಜೆಪಿಯವರ ಮನಸ್ಥಿತಿಯನ್ನು ತೋರಿಸುತ್ತದೆ. ದಲಿತರ ಹಾಗೂ ಮಹಿಳೆಯರ ಬಗ್ಗೆ ಬಿಜೆಪಿ ಹೊಂದಿರುವ ನಿಲುವು ಏನೆಂಬುದು ಶಾಸಕ ಮುನಿರತ್ನ ಅವರ ನಡವಳಿಕೆಯಿಂದ ಜಗತ್ ಜಾಹಿರಾಗಿದೆ ಎಂದು ಹೇಳಿದರು.

ಡಲೇ ಗೃಹ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆತನ ವಿರುದ್ಧ ಕಠಿಣ ಕ್ರಮ ಜರುಗಿಸಿ ಗಡಿಪಾರು ಮಾಡಬೇಕು, ಇಂತಹ ನೀಚರಿಂದ ಇಡೀ ರಾಜಕೀಯ ವ್ಯವಸ್ಥೆಗೆ ಕಳಂಕ ಬರಲಿದೆ, ಆತನ ವಿರುದ್ಧ ಪೊಲಿಸ್ ಇಲಾಖೆ ಕಠಿಣ ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಹೆಣ್ಣನ್ನು ಪೂಜ್ಯನೀಯವಾಗಿ ಕಾಣುವ ನಾವುಗಳು ಆಕೆಗೆ ವಿಶೇಷ ಸ್ಥಾನಮಾನ ಗೌರವ ನೀಡುತ್ತೇವೆ .ಶಾಸಕ ಮುನಿರತ್ನ ಅವರನ್ನು ಹಡೆದಿರುವುದು ಒಂದು ಹೆಣ್ಣೆ ಎಂದು ಮರೆತಿದ್ದಾರೆ. ಹೆಣ್ಣನ್ನು ತನ್ನ ಕಾಮ ತೃಷೆಗೆ ಆಹ್ವಾನಿಸಿರುವುದು ಹೆಣ್ಣಿನ ಕುಲಕ್ಕೇ ಅಪಮಾನ ಮಾಡಿದ್ದಾರೆ. ಹೊರಗೊಂದು ಒಳಗೊಂದು ಮನಸ್ಥಿತಿಯಿರುವ ಇಂತಹ ಗೋಮುಖ ವ್ಯಾಘ್ರನು ಸಾರ್ವಜನಿಕ ಜೀವನದಲ್ಲಿ ಮುಂದುವರೆಯಲು ಶೋಷಿತ ಸಮಾಜದವರಾದ ನಾವುಗಳು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಈ ಕೂಡಲೇ ಈತನಿಗೆ ಕಠಿಣ ಶಿಕ್ಷೆ ವಿಧಿಸಿ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕು.

ಇಂತಹ ಕಾಮುಕ ಮನಸ್ಥಿತಿಯ ಮುನಿರತ್ನನನ್ನು ಕ್ಷಮಿಸುವ ಪ್ರಮೇಯವೇ ಇಲ್ಲ ಎಂದು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಾಗರತ್ನಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಛಲವಾದಿ ವೇದಿಕೆ ರಾಜ್ಯಾಧ್ಯಕ್ಷ ಗಂಗರಾಜು ಮಾತನಾಡಿ ಮುನಿರತ್ನ ರವರ ವರ್ತನೆ ಸಂವಿಧಾನ ವಿರೋಧಿಯಾಗಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಅವರು ಸ್ಪರ್ಧಿಸದಂತೆ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು ಎಂದರು.

ಕಾಂಗ್ರೆಸ್ ಎಸ್ಸಿ, ಎಸ್‍ಟಿ ಬ್ಲಾಕ್ ಅಧ್ಯಕ್ಷ ಬಿನ್ನಮಂಗಲ ವೆಂಕಟೇಶ್, ನಿವೃತ್ತ ಪೊಲೀಸ್ ಅಧಿಕಾರಿ ಶಿವಣ್ಣ, ನಿವೃತ್ತ ತಹಸೀಲ್ದಾರ್ ಹನುಮಂತ ರಾಯಪ್ಪ, ದಲಿತ ಸ್ವಾಭಿಮಾನಿ ಸೇವಾ ಸಮಿತಿ ಕೇಶವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ದಲಿತ ಮುಖಂಡರಾದ ಬರದಿ ಹನುಮಂತ ರಾಯಪ್ಪ, ಅರಿಶಿನಕುಂಟೆ ಕೃಷ್ಣಮೂರ್ತಿ, ಮಂಜಮ್ಮ,ರಾಜಣ್ಣ, ಅಂಬ್ಯುಲೆನ್ಸ್ ಕೃಷ್ಣ, ತಾಳೇಕೆರೆ ಗಂಗರಾಜು, ರಾಮಾಂಜಿನಪ್ಪ, ಕೇಶವ್, ಕೃಷ್ಣ, ಮಂಜುನಾಥ್, ಗೋಪಿ, ಅನಂತ್‍ಕುಮಾರ್, ಗಂಗಮ್ಮ, ಉಮಾದೇವಿ, ರತ್ನಮ್ಮ, ಲಾವಣ್ಯ ಬಹುಜನ ಚಳುವಳಿ ಅರುಣ್ ಕುಮಾರ್, ಗಂಗಾಧರ್ ಮತ್ತಿತರರು ಉಪಸ್ಥಿತರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು