LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಶೈಕ್ಷಣಿಕ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಏತನ್ಮಧ್ಯೆ, ಮಕ್ಕಳ ಪೋಷಕರು ಹಾಗೂ ಶಾಸಕ ಸಮೃದ್ಧಿ ಮಂಜುನಾಥ್ ಬುಧವಾರ ಮುರುಡೇಶ್ವರ ತಲುಪಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಜಿಲ್ಲಾಡಳಿತದ ನೆರವಿನಿಂದ ಉಳಿದ ಮೂರು ಜನ ವಿದ್ಯಾರ್ಥಿನಿಯರ ಶವಕ್ಕಾಗಿ ಹುಡುಕಾಟ ಸಾಗಿದೆ. ಪ್ರವಾಸಕ್ಕೆ ಹೋಗಿದ್ದ ಇತರ ಮಕ್ಕಳನ್ನು ಮರಳಿ ಊರಿಗೆ ಕಳಿಸಲು ಜಿಲ್ಲಾಡಳಿತ ಹಾಗೂ ಶಾಸಕ ಸಮೃದ್ದಿ ಮಂಜುನಾಥ್ ಸಿದ್ಧತೆ ಮಾಡುತ್ತಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿಯರು ಸಮುದ್ರಪಾಲಾದ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಕಡಲ ತೀರಕ್ಕೆ ತೆರಳದಂತೆ ಪ್ರವಾಸಿಗರಿಗೆ ಪೊಲೀಸರ ಸೂಚನೆ ನೀಡಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಕೊತ್ತುರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದರು. ಸುಮಾರು 54 ವಿದ್ಯಾರ್ಥಿನಿಯರು ಸಂಜೆ ಕಡಲಿನಲ್ಲಿ ಆಟವಾಡಲು ಇಳಿದಿದ್ದರು. ಅಲೆಗಳ ಅಬ್ಬರ ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆ ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಟ ಆಡಲು ಬಿಟ್ಟಿದ್ದಾರೆ. ಈ ವೇಳೆ ಅಲೆಗಳ ಹೊಡೆತಕ್ಕೆ ಏಳು ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕ ನೀರುಪಾಲಾಗಿದ್ದರು. ಈ ಸಂದರ್ಭದಲ್ಲಿ ಲೈಫ್​ ಗಾರ್ಡಗಳು ಯಾವುದೇ ಪರಿಕರ ಸಾಧನ ಇಲ್ಲದಿದ್ದರೂ ಮೂರು ಜನ ವಿದ್ಯಾರ್ಥಿನಿಯರು ಹಾಗೂ ಓರ್ವ ಶಿಕ್ಷಕನನ್ನು ರಕ್ಷಣೆ ಮಾಡಿದ್ದರು. ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮೂವರು ಕಣ್ಣೆದುರೇ ಸಮುದ್ರಪಾಲಾಗಿದ್ದಾರೆ.

ಮುಳಬಾಗಿಲಿನ ಕೊತ್ತೂರು ಮುರಾರ್ಜಿ ದೇಸಾಯಿ ವಸತಿ ಶಾಲೆಯ 9 ನೇ ತರಗತಿಯ ಶಾವಂತಿ (15) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಮುಳಬಾಗಿಲಿನ ಯಶೋಧಾ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಲಾಗಿದೆ. ಇವರಲ್ಲಿ ಓರ್ವಳ ಸ್ಥಿತಿ ಗಂಭೀರವಾಗಿದ್ದು ಮೂವರಿಗೂ ಮುರುಡೇಶ್ವರದ ಆರ್​​ಎನ್​ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ದೀಕ್ಷಾ, ಲಾವಣ್ಯ, ವಂದನ ಸಮುದ್ರಪಾಲಾಗಿದ್ದು ಕಣ್ಮರೆಯಾಗಿದ್ದಾರೆ. ಇವರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು