LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೂರು ಕ್ಷೇತ್ರಗಳಿಗೆ ನಾಳೆ ಜೆಡಿಎಸ್ ಮುಖಂಡರ ಭೇಟಿ

ಬೆಂಗಳೂರು: ಉಪ ಚುನಾವಣೆ ನಿಮಿತ್ತ ಎನ್ ಡಿಎ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಕಾರ್ಯತಂತ್ರದ ಭಾಗವಾಗಿ ನಾಳೆ ರಾಜ್ಯ ಜೆಡಿಎಸ್ ನಾಯಕರು ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರ ಸಭೆ ನಡೆಸಲಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ ಹಾಗೂ ಆಲ್ಕೋಡ್ ಹನುಮಂತಪ್ಪ ಅವರು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಭಾಗವಾಗಿ ಜೆಡಿಎಸ್ ಸ್ಥಳೀಯ ಜೆಡಿಎಸ್ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿ ಸುವ ನಿಟ್ಟಿನಲ್ಲಿ ಈ ಸಭೆಗಳನ್ನು ಆಯೋಜನೆಮಾಡಲಾಗಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡುವ ಅವರ ಸಂಕಲ್ಪದ ಭಾಗವಾಗಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಸಭೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು