LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಮೆಟ್ರೊ ರೈಲ್‌ ಕಾರ್ಪೊರೇಶನ್‌ ಲಿಮಿಟೆಡ್‌ನ 25 ಸಾವಿರ ಸಸಿ ನೆಡುವ ಯೋಜನೆ

ಬೆಂಗಳೂರು: ಪರಿಹಾರ ಅರಣ್ಯೀಕರಣ (CA) ಅಡಿಯಲ್ಲಿ 25,720 ಸಸಿಗಳನ್ನು ಬೆಂಗಳೂರು ಮೆಟ್ರೊ ರೈಲ್‌ ಕಾರ್ಪೊರೇಶನ್‌ ಲಿಮಿಟೆಡ್‌ನ (ಬಿಎಂಆರ್‌ಸಿಎಲ್‌) ನೆಟ್ಟಿದೆ. ಬಿಬಿಎಂಪಿ ಅರಣ್ಯ ವಿಭಾಗದ ಪ್ರಕಾರ, ಈಗ ಬೆಂಗಳೂರು ನಗರದ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಮೆಟ್ರೋ ಮೂಲಕ ಸಂಪರ್ಕ ಕಲ್ಪಿಸಲು ಮುಂದಾಗಿರುವ ಬಿಎಂಆರ್‌ಸಿಎಲ್‌ ಅದಕ್ಕಾಗಿ ಸಾವಿರಾರು ಮರಗಳನ್ನು ಕಡಿಯಬೇಕಾಗಿರುವುದರಿಂದ ಅದಕ್ಕೆ ಪರಿಹಾರವಾಗಿ ಅರಣ್ಯೀಕರಣವನ್ನು ಕೈಗೊಂಡಿದೆ.

ನಗರದಾದ್ಯಂತ ಸ್ಥಳಗಳನ್ನು ಗುರುತಿಸಲಾಗಿದ್ದು ಮೂರು ವಿಭಿನ್ನ ಹಂತಗಳಲ್ಲಿ, ಸ್ಥಳೀಯ ಮತ್ತು ಹವಾಮಾನವನ್ನು ತಡೆದುಕೊಳ್ಳುವ ಮರಗಳನ್ನು ನೆಡಲಾಗಿದೆ. ಬಿಬಿಎಂಪಿ ಅರಣ್ಯ ಇಲಾಖೆಯಿಂದ ಕಾಮಗಾರಿಯನ್ನು ಮೇಲ್ವಿಚಾರಣೆ ಮಾಡಲಾಯಿತು. ಯೋಜನೆಯನ್ನು ಜೂನ್ 2023ರಲ್ಲಿ ಪ್ರಾರಂಭಿಸಲಾಗಿದ್ದು 2023ರ ಸೆಪ್ಟೆಂಬರ್ ವರೆಗೆ 25,000ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗಿದೆ. ಈಗ ಅವು ಉತ್ತಮವಾಗಿ ಬೆಳೆದಿದ್ದು, BMRCL ಅವುಗಳನ್ನು ಇನ್ನೂ ಎರಡು ವರ್ಷಗಳವರೆಗೆ ಮಾತ್ರ ನಿರ್ವಹಿಸುತ್ತದೆ ಎಂದು ಬಿಬಿಎಂಪಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ ಹೇಳಿದರು.

ಇಬ್ಲೂರು, ಸಿ.ಎಂ.ಪಿ. (ತರಬೇತಿ ಪ್ರದೇಶ) ನೀಲಸಂದ್ರ, ನಾಡಪ್ರಭು ಕೆಂಪೇಗೌಡ ಬಡಾವಣೆ, ಹಳೆ ಮಿಲಿಟರಿ ಡೈರಿ ಫಾರಂ, ಹೆಬ್ಬಾಳ ಮತ್ತು ಯುವ ತರಬೇತಿ ಕೇಂದ್ರ ಜೆ.ಪಿ. ನಗರದಂತಹ ಸ್ಥಳಗಳಲ್ಲಿ 17,690 ಸಸಿಗಳನ್ನು ನೆಡಲಾಗಿದೆ. ಅದೇ ರೀತಿ ಹಂತ-2ಎ ಅಡಿಯಲ್ಲಿ ಈ ಪ್ರದೇಶಗಳಲ್ಲಿ 8030 ಸಸಿಗಳನ್ನು ನೆಡಲಾಗಿದೆ. ಅಧಿಕಾರಿಗಳ ಪ್ರಕಾರ ಸಿ.ಎ. ಘಟಕ ಅಡಿಯಲ್ಲಿ 40,050 ಹೆಚ್ಚು ಸಸಿಗಳನ್ನು ನೆಡಲಾಗುವುದು ಮತ್ತು ಈಗ ಬಿ.ಎಂ.ಆರ್.ಸಿ.ಎಲ್. ಬದಲಾಗಿ ಅರಣ್ಯ ಇಲಾಖೆ ಈ ಕೆಲಸ ಮಾಡಲಿದೆ.

ಬಿಎಂಆರ್‌ಸಿಎಲ್‌ನ ಹಣಕಾಸು ವಿಭಾಗವು ಸಿಎ ಮತ್ತು ಅದರ ನಿರ್ವಹಣೆಗೆ ಅಗತ್ಯವಿರುವ ಮೊತ್ತವನ್ನು ಮೂರು ವರ್ಷಗಳವರೆಗೆ ಅರಣ್ಯ ಇಲಾಖೆಗೆ ವರ್ಗಾಯಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಸ್ಯಗಳ ನಿರ್ವಹಣೆಗೆ ಮೀಸಲಾದ ತಂಡವನ್ನು ಹೊಂದಿರುವ ಕಾರಣ ಮೊತ್ತವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗುತ್ತದೆ. 2024ರ ಡಿಸೆಂಬರ್‌ನಲ್ಲಿ ಪತ್ರವ್ಯವಹಾರ ಮತ್ತು ಇತರ ದಾಖಲೆಗಳನ್ನು ಮಾಡಲಾಗುವುದು ಮತ್ತು ಸಿಎ ಸೇರಿದಂತೆ ಮುಂದಿನ ಮಳೆಗಾಲದಲ್ಲಿ ದೊಡ್ಡ ಪ್ರಮಾಣದ ಸಸಿಗಳನ್ನು ನೆಡುವ ಅಭಿಯಾನವನ್ನು ಕೈಗೊಳ್ಳಲಾಗುವುದು ಎಂದು ಬಿಎಂಆರ್‌ಸಿಎಲ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು