LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಡಾ.ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರವನ್ನು ಶೇಕಡಾ 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‍ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ವಿರೋಧಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಈಗಾಗಲೇ ಮೆಟ್ರೋ ಪ್ರಯಾಣ ದರ ದುಬಾರಿಯಾಗಿದ್ದು, ಈಗ ಮತ್ತೆ ಪ್ರಯಾಣ ದರ ಏರಿಕೆ ಮಾಡುವುದರಿಂದ ಜನ ಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ ಎಂದು ಹೇಳಿದ್ದಾರೆ.

ಬಿಎಂಆರ್‍ಸಿಎಲ್ ಈಗಾ ಗಲೇ ಆರ್ಥಿಕ ಸಂಪನ್ಮೂಲ ವೃದ್ಧಿ ಹಾಗೂ ಲಾಭ ಗಳಿಕೆ ಮುಂದಿದೆ, ಈ ಸಂದರ್ಭದಲ್ಲಿ ಪ್ರಯಾಣಿಕರ ಬಗ್ಗೆ ಕಾಳಜಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮರೆತಿರುವುದು ದುರದೃಷ್ಟಕರ. 2023-2024ರ ಆರ್ಥಿಕ ವರ್ಷದಲ್ಲಿ ಬಿಎಂಆರ್‍ಸಿಎಲ್ 129.3 ಕೋಟಿ ರೂಪಾಯಿ ಲಾಭ ಗಳಿಸಿದೆ ಎಂದು ಮೆಟ್ರೋ ಮೂಲಗಳು ತಿಳಿಸಿವೆ, ಲಾಭದಾಯಕ ಹಾದಿಗೆ ಬಂದಿದ್ದರೂ, ಪ್ರಯಾಣದರ ಹೆಚ್ಚಳಕ್ಕೆ ದರ ನಿಗದಿ ಮಾಡಲು ಸಮಿತಿ ರಚಿಸಿರುವುದು ಸರಿಯಲ್ಲ ಎಂದರು.

ಬಿಎಂಆರ್‍ಸಿಎಲ್‍ಕೂಡಲೇ ದರ ಏರಿಕೆ ಪ್ರಸ್ತಾಪ ವನ್ನು ಕೈಬಿಡಬೇಕು. ಸಿಎಂ ಸಿದ್ದರಾಮಯ್ಯನವರು ಕೂಡಲೇ ಈ ವಿಚಾರದವನ್ನು ಗಮನಿಸಿ ದರ ಏರಿಕೆಗೆ ಕಡಿವಾಣ ಹಾಕಬೇಕು. ಬಿಎಂಆರ್‍ಸಿಎಲ್‍ನ ಈ ಜನ ವಿರೋಧಿ ನಡೆಯನ್ನು ಆಮ್ ಆದ್ಮಿ ಪಾರ್ಟಿ ಬಲವಾಗಿ ಖಂಡಿಸುತ್ತದೆ ಎಂದರು.ಬೋಗಿ ಸಂಖ್ಯೆ ಹೆಚ್ಚಳ ಮಾಡಿ: ಈಗ ಇರುವ ಆರು ಬೋಗಿಗಳ ಮೆಟ್ರೋದಲ್ಲಿ ಒಮ್ಮೆ 1,626 ಪ್ರಯಾಣಿಕರು ಪ್ರಯಾಣಿಸಬಹುದು.

ಆದರೆ ದಟ್ಟಣೆ ಸಮಯದಲ್ಲಿ ಒಮ್ಮೆಲೆ 2,500ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ. ಮಿತಿ ಮೀರಿದ ದಟ್ಟಣೆಯಿದ್ದರೂ, ಬೋಗಿ ಸಂಖ್ಯೆಯನ್ನು ಹೆಚ್ಚಿಸುವುದನ್ನು ಬಿಟ್ಟು, ಪ್ರಯಾಣದರ ಏರಿಕೆ ಬಗ್ಗೆ ಬಿಎಂಆರ್‍ಸಿಎಲ್ ಚಿಂತಿಸುತ್ತಿದೆ. ಇವರಿಗೆ ಪ್ರಯಾಣಿಕರ ಅನುಕೂಲಕ್ಕಿಂತ ಲಾಭ ಮಾಡಿಕೊಳ್ಳುವುದೇ ಮುಖ್ಯವಾಗಿದೆ ಎಂದರು.
ಪ್ರಯಾಣಿಕರಿಗೆ ಸುಖಕರ ಪ್ರಯಾಣ ಕೊಡುವಲ್ಲಿ ಬಿಎಂಆರ್‍ಸಿಎಲ್ ವಿಫಲವಾಗಿದೆ.

ಮೂಲಸೌಕರ್ಯ, ಪ್ರಯಾಣಿಕ ಸ್ನೇಹಿ ವಾತಾವರಣದಲ್ಲಿ ಬೆಂಗಳೂರು ಮೆಟ್ರೋಗೆ ಹೋಲಿಸಿದರೆ ದಿಲ್ಲಿ ಹಾಗೂ ಮುಂಬೈನ ಮೆಟ್ರೋ ರೈಲು ಸೇವೆ ಮಾದರಿಯಾಗಿದೆ. ಈಗ ಪ್ರಯಾಣದರ ಹೆಚ್ಚಳ ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಮೊದಲು ಮೂಲಸೌಕರ್ಯಗಳನ್ನು ಒದಗಿಸುವತ್ತ ಗಮನ ಕೊಡಲಿ ಎಂದು ಹೇಳಿದರು.

ಬಿಎಂಟಿಸಿ ಬಳಿಕ ಅತಿ ಹೆಚ್ಚು ಜನ ಮೆಟ್ರೋ ಸಾರಿಗೆಯನ್ನು ಅವಲಂಬಿಸಿದ್ದಾರೆ. ಕೋವಿಡ್ ಬಳಿಕ ಮೆಟ್ರೋ ಲಾಭದ ಹಳಿಗೆ ಮರಳಿದೆ. ಈಗ ಪ್ರಯಾಣ ದರ ಹೆಚ್ಚಳ ಮಾಡುವ ಅಗತ್ಯವೇನಿದೆ ಎಂದ ಅವರು, ಬೆಲೆ ಏರಿಕೆ ಮಾಡುವ ಯೋಜನೆ ಕೈಬಿಟ್ಟು, ಮೆಟ್ರೋ ರೈಲುಗಳ ಟ್ರಿಪ್ ಸಂಖ್ಯೆ ಹೆಚ್ಚಳ, ಸಮರ್ಪಕ ಪಾರ್ಕಿಂಗ್, ಮೂಲಸೌಕರ್ಯ ಒದಗಿಸಲು ಮೊದಲು ಆದ್ಯತೆ ಕೊಡಲಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು