LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮೇ 10ಕ್ಕೆ ರಾಮನ ಅವತಾರ

ಇದೀಗ ರಾಮನ ಅವತಾರವೆಂಬ ಸಿನಿಮಾವನ್ನು ಚುನಾವಣಾ ಗಡಿಬಿಡಿ ಕಳೆದ ಬಳಿಕ ಆದರೆ, ಚುನಾವಣಾ ಫಲಿತಾಂಶಕ್ಕೆ ಮೊದಲೇ ರಿಲೀಸ್ ಮಾಡಲು ಚಿತ್ರತಂಡ ಯೋಜಿಸಿದೆ. ರಾಮನ ಅವತಾರ ಸಿನಿಮಾವು ಮೇ 10ರಂದು ಬಿಡುಗಡೆಯಾಗಲಿದೆ. ರಿಷಿ, ಪ್ರಣೀತಾ ಸುಭಾಷ್, ಶುಭ್ರ ಅಯ್ಯಪ್ಪ ನಟಿಸಿರುವ ಈ ಸಿನಿಮಾಕ್ಕೆ ವಿಕಾಸ್ ಪಂಪಾಪತಿ ಆಕ್ಷನ್ ಕಟ್ ಹೇಳಿದ್ದಾರೆ.

ರಿಷಿ ರಾಮನ ಅವತಾರದಲ್ಲಿ ಸ್ಯಾಂಡಲ್‍ವುಡ್ ಚಿತ್ರಮಂದಿರಗಳಿಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿದ್ದಾರೆ. ರಾಮನ ಅವತಾರ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಮೇ 10ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರಲಿದೆ.ರಾಮನ ಅವತಾರ' ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದಾರೆ. ಪ್ರತಿಭಾನ್ವಿತ ನಟ ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿಕಾಸ್ ಪಂಪಾಪತಿ 'ರಾಮನ ಅವತಾರ' ಸಿನಿಮಾ ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ.

ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಟೀಸರ್ ಹಾಗೂ ಹಾಡುಗಳ ಮೂಲಕ ರಾಮನ ಅವತಾರ ಸಿನಿಮಾ ಸಿನಿಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ.ಫ್ಯಾಬ್ ಪ್ರೊಡಕ್ಷನ್ನಡಿ 'ಆಪರೇಷನ್ ಅಲಮೇಲಮ್ಮ' ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್‍ನ ಈ ಚಿತ್ರಕ್ಕೆ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಹಿಡಿದಿದ್ದಾರೆ. ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಕಲನವಿದೆ. ರಾಮನ ಅವತಾರ ಸಿನಿಮಾದ ಶೂಟಿಂಗ್ ಅನ್ನು ಉಡುಪಿ, ಬೆಂಗಳೂರು ಸುತ್ತಮುತ್ತ ಮಾಡಲಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು