LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Mysore

ಮೈಸೂರು ಇನ್ಫೋಸಿಸ್​ ಆವರಣದಲ್ಲಿ ಕೊನೆಗೂ ಸಿಗದ ಚಿರತೆ: 16 ದಿನಗಳ ಕಾರ್ಯಾಚರಣೆ ಸ್ಥಗಿತ, ಇನ್ನು ಡ್ರೋನ್ ಕಣ್ಣು

ಮೈಸೂರು: ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನ ಆವರಣದಲ್ಲಿ ಡಿಸೆಂಬರ್ 31 ರಂದು ಚಿರತೆ ಕಾಣಿಸಿಕೊಂಡು ಸಂಸ್ಥೆಯ ಎಲ್ಲ ಸಿಬ್ಬಂದಿಯಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯ ಓಡಾಟವನ್ನು ಸಿಸಿಟಿವಿಯಲ್ಲಿ ಕಂಡ ಸಿಬ್ಬಂದಿ ಹೌಹಾರಿದ್ದರು. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಹೋದಡೆಯೆಲ್ಲಾ ಹುಡುಕಾಟ ನಡೆಸಿದ್ದರು. ಆದರೆ, 16 ದಿನಗಳಿಂದ ಹುಡುಕಾಡಿದರೂ, ಯಾವುದೇ ಪ್ರಯೋಜನವಾಗಿಲ್ಲ.

ಮೈಸೂರಿನಲ್ಲಿ ಇನ್ಫೋಸಿಸ್ ಕ್ಯಾಂಪಸ್ ಆವರಣ ಸುಮಾರು 300 ಎಕರೆಯಷ್ಟಿದೆ. ಇನ್ಫೋಸಿಸ್​ನಲ್ಲಿ ಕೇವಲ ಕಟ್ಟಡಗಳು ಮಾತ್ರವಲ್ಲ ಖಾಲಿ ಪ್ರದೇಶ, ನೀರಿನ ಹೊಂಡಗಳು ಸಹ ಇವೆ. ಹೀಗಾಗಿ, ಇಲ್ಲಿ ಚಿರತೆ ಹುಡುಕುವುದು ಅಷ್ಟು ಸುಲಭವಾಗಿರಲಿಲ್ಲ. ಅದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬರೋಬ್ಬರಿ 70 ಜನರ ತಂಡ ರಚಿಸಿದ್ದರು. ಇನ್ಫೋಸಿಸ್​ನ ಪ್ರತಿ ಮೂಲೆ ಮೂಲೆಯಲ್ಲೂ ಚಿರತೆಗಾಗಿ ಹುಡುಕಾಟ ನಡೆಸಿತ್ತು. ಟ್ರಾಪ್ ಕ್ಯಾಮೆರಾ, ಡ್ರೋನ್ ಕ್ಯಾಮೆರಾ ಇನ್ಫೋಸಿಸ್ಆವರಣದ ಸಿಸಿ ಕ್ಯಾಮರಾ ಸೇರಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಚಿರತೆ ಸೆರೆಗೆ ತಂಡ ಮುಂದಾಗಿತ್ತು. ಚಿರತೆಯ ಹೆಜ್ಜೆ ಗುರುತುಗಳು ಸಹ ಅರಣ್ಯ ಇಲಾಖೆಯವರಿಗೆ ಸಿಕ್ಕಿಲ್ಲ. ಹೀಗಾಗಿ, ಚಿರತೆ ಪತ್ತೆ ಕಾರ್ಯಚರಣೆ ಸ್ಥಗಿತಗೊಳಿಸಿದ್ದಾರೆ ಎಂದು ಡಿಸಿಎಫ್ ಡಾ. ಬಸವರಾಜ್ ತಿಳಿಸಿದ್ದಾರೆ.

ಸದ್ಯ ಇನ್ಫೋಸಿಸ್ ಆವರಣದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಕೈಬಿಡಲಾಗಿದ್ದು, ರಾತ್ರಿ ನಿಗಾ ಇರಲಿದೆ. ಜತೆಗೆ ಕ್ಯಾಮರಾ ಮೂಲಕ ಕಾರ್ಯಾಚರಣೆ ಹಾಗೂ‌ ಸಿಬ್ಬಂದಿ ಗಸ್ತು ಮುಂದುವರಿಯಲಿದೆ. ಸದ್ಯ ಇನ್ಫೋಸಿಸ್ ಸಿಬ್ಬಂದಿ ವರ್ಕ್ ಫ್ರಮ್ ಹೋಮ್‌ನಲ್ಲಿದ್ದು, ಚಿರತೆ ಸಿಗದಿದ್ದರೆ ಮುಂದೇನು ಎಂಬ ಆತಂಕ ಕಾಡುತ್ತಿದೆ.

ಚಿರತೆ ಕಾಟದ ಆತಂಕದ ಕಾರಣ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್‌ ಆಯ್ಕೆ ಮುಂದುವರಿಸಲಾಗಿದೆ. ಇದು ಎಷ್ಟು ದಿನಗಳ ವರೆಗೆ ಮುಂದುವರಿಯಲಿದೆ ಎಂಬುದನ್ನು ಕಾದುನೋಡಬೇಕಿದೆ. ಸದ್ಯಕ್ಕೆ ಅರಣ್ಯ ಇಲಾಖೆ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರೂ ಕಣ್ಗಾವಲು ಮುಂದುವರಿದಿದೆ. ಹೀಗಾಗಿ ಗಸ್ತು ಸಿಬ್ಬಂದಿಗೆ ಅಥವಾ ಸಿಸಿಟಿವಿ, ಡ್ರೋನ್ ಕ್ಯಾಮರಾದಲ್ಲಿ ಒಂದು ವೇಳೆ ಚಿರತೆ ಪತ್ತೆಯಾದರೆ ಮತ್ತೆ ಕಾರ್ಯಾಚರಣೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಸದ್ಯದ ಮಟ್ಟಿಗೆ ವರ್ಕ್ ಫ್ರಂ ಹೋಮ್ ಮುಂದುವರಿಯಲಿದೆ ಎನ್ನಲಾಗಿದೆ.

ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ, 70 ಇನ್ಫೋಸಿಸ್ ಸಿಬ್ಬಂದಿ ಸೇರಿ 12 ಜಂಟಿ ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಚಿರತೆ ಮಾತ್ರ ಪತ್ತೆಯಾಗಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು