LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೊಬೈಲ್ ಆಕರ್ಷಣೆಯಿಂದಾಗಿ ಸಾಹಿತ್ಯದೆಡೆ ನಿರಾಸಕ್ತಿ: ವೆಂಕಟೇಶ ಶೇಷಾದ್ರಿ

ಜೋಗರದೊಡ್ಡಿ (ಬಿಡದಿ): ಮೊಬೈಲ್ ಆಕರ್ಷಣೆಯಿಂದಾಗಿ ಇಂದಿನ ಯುವಜನತೆಯು ಸಾಹಿತ್ಯದೆಡೆಗೆ ನಿರಾಸಕ್ತಿ ತೋರಿಸುತ್ತಿರುವುದು ವಿಷಾದನೀಯ ಸಂಗತಿ ಎಂದು ಬ್ಯಾಂಕರ್ಸ್ ಕನ್ನಡಿಗರ ಬಳಗದ ಅಧ್ಯಕ್ಷ ಶ್ರೀ ಎಂ ವೆಂಕಟೇಶ ಶೇಷಾದ್ರಿಯವರು ಅಭಿಪ್ರಾಯ ಪಟ್ಟರು. ಶ್ರೀಯುತರು ಬ್ಯಾಂಕರ್ಸ್ ಕನ್ನಡಿಗರ ಬಳಗದವರು ಜೋಗರದೊಡ್ಡಿ ಕೆನರಾ ಬ್ಯಾಂಕ್ ಕೆ ಪಿ ಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕರ್ನಾಟಕ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡುತ್ತಿದ್ದರು.

ಸಾಹಿತ್ಯ ಅಧ್ಯಯನದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ, ಬೌದ್ಧಿಕ ಸಾಮರ್ಥ್ಯವು ಹೆಚ್ಚಳವಾಗುವುದಲ್ಲದೆ, ಶಾಂತಿ ನೆಮ್ಮದಿಯ ಬದುಕನ್ನು ತಮ್ಮದಾಗಿಸಿಕೊಳ್ಳಬಹುದು ಎಂದರು.
ಕೆನರಾ ಬ್ಯಾಂಕ್ ಕೆ ಪಿ ಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯ ನಿರ್ದೇಶಕ ಶ್ರೀ ಕೆ ಶಿವರಾಂ ರವರು ಮಾತನಾಡಿ, ಕೆನರಾ ಬ್ಯಾಂಕ್ ನ ಎಲ್ಲಾ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಗಳಲ್ಲೂ ಸುಸಜ್ಜಿತ ಗ್ರಂಥಾಲಯವಿದೆ. ನಿಜವಾದ ಜ್ಞಾನ ಪುಸ್ತಕಗಳ ಅಧ್ಯಯನದಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳು ಈ ಗ್ರಂಥಾಲಯದ ಪೂರ್ಣ ಉಪಯೋಗವನ್ನು ಪಡೆದುಕೊಂಡು, ಸಾಹಿತ್ಯಾಭಿರುಚಿಯನ್ನು ಬೆಳಸಿಕೊಳ್ಳಬೇಕು ಎಂದರು.

ರಸಪ್ರಶ್ನೆ ಸ್ಪರ್ಧೆಯಲ್ಲಿ ಈ ಕೆಳಗಿನವರು ವಿಜೇತರಾದರು: ಪ್ರಥಮ ಬಹುಮಾನ-ಪ್ರಜ್ವಲ್ ವಿಠ್ಠಲ್ ಲಾಳಕಿ, ದ್ವಿತೀಯ ಬಹುಮಾನ: ಬಿ ಕೆ ಯಶವಂತ್ , ತೃತೀಯ ಬಹುಮಾನ: ಬಿ ಆರ್ ರಮೇಶ್ , ಪ್ರೋತ್ಸಾಹಕ ಬಹುಮಾನಗಳು: ಎಮ್ ಎಮ್ ಆದರ್ಶ್ ಮತ್ತು ಹೆಚ್ ವಿ ನೂತನ್ ಗೌಡ . ಸಂಸ್ಥೆಯ ಉಪನ್ಯಾಸಕರಾದ ಶ್ರೀ ಬಿ ಎಂ ಚಂದ್ರಶೇಖರ್, ಜಿ ಎಸ್ ಸಿದ್ದಪ್ಪ, ನರೇಶ್ ಕುಮಾರ್, ಶಿವಕುಮಾರ್, ಕೆ ಕಾವ್ಯ , ಎಂ ವೆಂಕಟೇಶ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು