LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಮ್ಯಾಕ್ಸ್' ತಂಡ `ಥ್ಯಾಂಕ್ಸ್ ಗಿವಿಂಗ್' ಸಮಾರಂಭ

ಕಲೈಪುಲಿ ಎಸ್ ತನು ವಿb ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ನಾಯಕರಾಗಿ ನಟಿಸಿರುವ "ಮ್ಯಾಕ್ಸ್" ಚಿತ್ರ ಡಿಸೆಂಬರ್ 25ರಂದು ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತೋಷವನ್ನು ಸಂಭ್ರಮಿಸಲು ಥ್ಯಾಂಕ್ಸ್ ಗಿವಿಂಗ್ ಸಮಾರಂಭ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ಎರಡೂವರೆ ವರ್ಷದ ಬಳಿಕ ನನ್ನ ಚಿತ್ರ ಬಿಡುಗಡೆಯಾಗಿದೆ. ಮ್ಯಾಕ್ಸ್ ಚಿತ್ರ ಯಶಸ್ಸು ಕಂಡಿದೆ. ಅಭಿಮಾನಿಗಳ ಹಾಗೂ ಚಿತ್ರತಂಡದವರ ಮುಖದಲ್ಲಿ ಗೆಲುವಿನ ನಗು ಮೂಡಿದೆ. ಆ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ. ನಾನು ಸದ್ಯ ಈ ಯಶಸ್ಸಿನ ಖುಷಿಯನ್ನು ಅನುಭವಿಸುತ್ತಿದ್ದೇನೆ. ಪ್ರೀಕ್ವೆಲ್, ಸೀಕ್ವೆಲ್ ಯಾವುದರ ಬಗ್ಗೆ ಸದ್ಯಕ್ಕೆ ಗಮನ ಹರಿಸಿಲ್ಲ.ನಿರ್ದೇಶಕ ರಾಜಮೌಳಿ ಅವರು ಸಿನಿಮಾ ನೋಡುವುದಾಗಿ ಹೇಳಿದ್ದಾರೆ.

ಅದು ಇನ್ನಷ್ಟು ಖುಷಿಯ ಸಂಗತಿ. ತಮಿಳಿನಲ್ಲಿ ಅದ್ಬುತ ಪ್ರದರ್ಶನ ಕಾಣುತ್ತಿದೆ. ನಿರ್ಮಾಪಕರು,ನಿರ್ದೇಶಕರು ಅಲ್ಲಿಯವರೆ ಆಗಿರುವುದರಿಂದ ಅವರ ಮುಖದಲ್ಲಿ ಖುಷಿ ಕಾಣುತ್ತಿದೆ. ನಟನಾಗಿ ನನಗೂ ಹೆಮ್ಮೆ ಇದೆ. ತಮಿಳಿನಲ್ಲಿ ಕಲಾವಿದರು ಚಿತ್ರ ನೋಡುತ್ತಿದ್ದಾರೆ.'ಮ್ಯಾಕ್ಸ್' ಚಿತ್ರದ ಯಶಸ್ಸಿನ ನಂತರ ನನ್ನ ಸ್ನೇಹಿತರ ಬಳಗ ಇನ್ನಷ್ಟು ಹೆಚ್ಚಾಗಿದೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬಳಸಲಾಗಿದ್ದ ಕಾಸ್ಟೂಮ್ ಎತ್ತಿ ಇಟ್ಟಿದ್ದೇನೆ. ಅದು ನೆನಪು. ಪ್ರತೀ ಸಿನಿಮಾದಲ್ಲಿ ಈ ರೀತಿ ಮಾಡುವ ಅಭ್ಯಾಸವಿದೆ ಎಂದರು.

ಮ್ಯಾಕ್ಸ್ ಸಿನಿಮಾವನ್ನು ಅಪ್ಪ ನೋಡಿ ಖುಷಿ ಪಟ್ಟಿದ್ದಾರೆ. ಕೆಲವೊಂದು ಸನ್ನಿವೇಶಗಳನ್ನು ಅಮ್ಮನ ನೆನಪಾಗಿ ನೋಡಲು ಆಗಲಿಲ್ಲ, ಹೀಗಾಗಿ ನಾನು ಇನ್ನೂ ಪೂರ್ಣ ಪ್ರಮಾಣದಲ್ಲಿ ಸಿನಿಮಾ ನೋಡಿಲ್ಲ. ಈ ಚಿತ್ರದ ಮೂಲಕ ಮಗಳು ಸಾನ್ವಿಯನ್ನು ಗಾಯಕಿಯಾಗಿ ಪರಿಚಯ ಮಾಡಿದ್ದೇನೆ, ಅದರ ಸಂಪೂರ್ಣ ಕ್ರೆಡಿಟ್ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರಿಗೆ ಸಲ್ಲಬೇಕು ಎಂದರು.

ನನ್ನ ಮೊದಲ ಕನ್ನಡದ ನಿರ್ಮಾಣದ ಚಿತ್ರ ಗೆದ್ದಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರಿಗೆ, ಕನ್ನಡ ಕಲಾಭಿಮಾನಿಗಳಿಗೆ ಹಾಗೂ ವಿಶೇಷವಾಗಿ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.ಚಿತ್ರ ಗೆದ್ದಿದೆ. ಈ ಗೆಲವು ತಂಡದ್ದು. ಅವಕಾಶ ನೀಡಿದ ನಿರ್ಮಾಪಕರಿಗೆ, ಕಿಚ್ಚ ಸುದೀಪ್ ಅವರಿಗೆ ಹಾಗೂ ಇಡೀ ತಂಡಕ್ಕೆ ನಿರ್ದೇಶಕ ವಿಜಯ್ ಕಾರ್ತಿಕೇಯ ಧನ್ಯವಾದ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು