LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್

ಬೆಳಗಾವಿ: ದೆಹಲಿಗೆ ತೆರಳಿ ಹೈಕಮಾಂಡ್ ಜತೆ ಮಾತುಕತೆ ನಡೆಸಿ ಬಂದ ಬಳಿಕವೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ​ಯತ್ನಾಳ್  ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ  ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಿರುವ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್,​ ಬಿಎಸ್​ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಯತ್ನಾಳ್​ ಹೇಳಿಕೆ ಹೈಕಮಾಂಡ್​​ ಅಂಗಳ ತಲುಪಿ, ಶಿಸ್ತು ಸಮಿತಿ ನೋಟಿಸ್​ ನೀಡಿತ್ತು. ಬಹಿರಂಗ ಹೇಳಿಕೆ ನೀಡದಂತೆ ಶಿಸ್ತು ಸಮಿತಿ ಸೂಚನೆ ನೀಡಿದ ಬಳಿಕವೂ ಬಸನಗೌಡ ಪಾಟೀಲ್​ ಯತ್ನಾಳ್​ ಮತ್ತೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದಿದ್ದಾರೆ.​

ಅವರು, “ಸಮುದಾಯದಲ್ಲಿ ಬೇರೆ ವ್ಯಕ್ತಿಗಳನ್ನು ಬೆಳೆಯಲು ಬಿಎಸ್​ ಯಡಿಯೂರಪ್ಪ ಬಿಡಲ್ಲ. ಜಗದೀಶ್ ಶೆಟ್ಟರ್, ಬಿ.ಬಿ.ಶಿವಪ್ಪ ಅವರನ್ನು ಬೆಳೆಯಲು ಬಿಎಸ್ ಯಡಿಯೂರಪ್ಪ ಬಿಡಲಿಲ್ಲ. ಎಸ್.ಮಲ್ಲಿಕಾರ್ಜುನ್​ ಅವರನ್ನು ಏನ್​ ಮಾಡಿದರು? ಬಿ.ಬಿ.ಶಿವಪ್ಪ ಅವರನ್ನು ರಾಜಕೀಯವಾಗಿ ಹೇಗೆ ಮುಗಿಸಿದರು ಅಂತ ಎಲ್ಲವೂ ಗೊತ್ತಿದೆ” ಎಂದು ಹೇಳಿದರು.

ಹಾಗೆಯೇ, “ನನ್ನನ್ನು ಸಹ ರಾಜಕೀಯವಾಗಿ ಮುಗಿಸಬೇಕು ಅಂದುಕೊಂಡಿದ್ದಾರೆ. ನಮ್ಮ ವಿರುದ್ಧ ವಿಜಯಪುರದಲ್ಲಿ ತಂಡ ಕಟ್ಟುವ ಕೆಲಸ ಆಗುತ್ತಿದೆ. ಬಿಎಸ್​ ಯಡಿಯೂರಪ್ಪ ಅವರ ಮಾತಿನ ಹಿಂದೆ ತಂತ್ರಗಾರಿಕೆ ಏನಿದೆ ಗೊತ್ತಿಲ್ಲ. ಕೇಂದ್ರ ನಾಯಕರನ್ನು ಖುಷಿ ಪಡಿಸಲು ಬಿಎಸ್​ ಯಡಿಯೂರಪ್ಪ ಹೇಳಿರಬಹುದೇನೋ?” ಎಂದು ವಾಗ್ದಾಳಿ ಮಾಡಿದರು.

ಬಸನಗೌಡ ಪಾಟೀಲ ಯತ್ನಾಳ್ ಅವರು ಹೊರಗಿನವರಲ್ಲ, ಕೆಲವು ಕಾರಣಗಳಿಂದ ಆಕ್ರೋಶಗೊಂಡಿದ್ದಾರೆ. ಕೂತು ಮಾತನಾಡೋಣ. ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಬೇಕು. ವಿಜಯೇಂದ್ರ ಅವರ ನಿರೀಕ್ಷೆಯೂ ಇದೇ ಆಗಿದೆ. ಯಾವುದೇ ಲೋಪದೋಷಗಳಿದ್ದರೆ ಎದುರುಬದುರು ಕುಳಿತು ಚರ್ಚಿಸುತ್ತೇವೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ಹೇಳಿದ್ದರು.

ಇತ್ತೀಚಿಗೆ ನಡೆದ ಮೂರು ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಸೋಲುಂಡಿದೆ. ಇದಕ್ಕೆ ಪೂಜ್ಯ ತಂದೆ ಮತ್ತು ಅವರ ಮಗ ನೇರ ಕಾರಣ ಎಂದು ಬಿಎಸ್​ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ವಿರುದ್ಧ ನೇರಾ ನೇರಾ ಆರೋಪ ಮಾಡಿದ್ದರು. ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಕೆಲಸ ಮಾಡುತ್ತಿಲ್ಲ. ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಹೋರಾಟ ನಿರಂತರವಾಗಿರುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ​​ ಹೇಳಿದ್ದರು.

ಬಿಎಸ್​ ಯಡಿಯೂರಪ್ಪ ಬೆದರಿಕೆಯಿಂದ ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗಂಭೀರವಾದ ಪ್ರಕರಣಗಳಿವೆ. ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಅವರು ಹೆದರಬೇಕು, ನಾನು ಯಾಕೆ ಹೆದರಬೇಕು? ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು