LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯತ್ನಾಳ್‍ಗೆ ಸೋನಿಯಾ, ರಾಹುಲ್ ಸುಪಾರಿ!

ಬೆಂಗಳೂರು: ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‍ಗೆ ಕಾಂಗ್ರೆಸ್ ಪಕ್ಷದ ಸೋನಿಯಾಗಾಂಧಿ ಹಾಗೂ ರಾಹುಲ್‍ಗಾಂಧಿ ಸುಪಾರಿ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಮುಜುಗರ ಉಂಟುಮಾಡಲು ಯತ್ನಾಳ್‍ಗೆ ಸುಪಾರಿ ನೀಡಲಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ದೂರಿದ್ದಾರೆ.
ಪಕ್ಷದ ವಿರುದ್ಧವಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಕ್ಫ್ ಹೆಸರಿನಲ್ಲಿ ಹೋರಾಟ ಮಾಡುತ್ತಿರುವ ಯತ್ನಾಳ್ ಅವರು ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಭೆಯ ಮೂರು ಉಪಚುನಾವಣೆಯಲ್ಲಿ ಮೂರು ಕಡೆ ಸೋಲಲು ಯತ್ನಾಳ್ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಸಚಿವರೊಂದಿಗೆ ಸೇರಿ ಸಂಚು ರೂಪಿಸಿದ್ದರು ಎಂದು ಇದೇ ಸಂದರ್ಭದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸ್ವಯಂಘೋಷಿತ ಹಿಂದುಹುಲಿ ಎಂದು ಘೋಷಿಸಿಕೊಂಡಿರುವ ಯತ್ನಾಳ್ ಅವರು ಪಕ್ಷವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ. ಇದು ನಡೆಯದ ಕೆಲಸ ಇಂದಿನಿಂದ ಪಕ್ಷದ ಮಾಜಿ ಶಾಸಕರು ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಂಡಿರುವುದಾಗಿ ತಿಳಿಸಿದ ರೇಣುಕಾಚಾರ್ಯ ಇಂದು ತಾವು ಮತ್ತು ಹಿರಿಯರಾದ ಕಟ್ಟಾಸುಬ್ರಹ್ಮಣ್ಯಂನಾಯ್ಡು ನೇತೃತ್ವದಲ್ಲಿ ಕೋಲಾರ ಜಿಲ್ಲೆಯ ಮುಳಬಾಗಲು ಸಮೀಪವಿರುವ ಕುರುಡುಮಲೆ ವಿನಾಯಕನ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹೇಳಿದರು.

ಅತಿಶೀಘ್ರದಲ್ಲಿಯೇ ದಾವಣಗೆರೆಯಲ್ಲಿ ಪಕ್ಷದ ಸಮಾವೇಶವನ್ನು ನಡೆಸಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೈಬಲಪಡಿಸುವ ಮೂಲಕ ಪಕ್ಷ ಸಂಘಟನೆಗೆ ಮುಂದಾಗವುದಾಗಿ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು