LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಯಾವುದೇ ಒತ್ತಡಕ್ಕೆ ಮಣಿಯದೇ ಸದನದಲ್ಲಿ ಜಾತಿ ಗಣತಿ ವರದಿ ಮಂಡಿಸಿ: ಸಿಎಂಗೆ ಎಎಪಿ ಪತ್ರ

ಬೆಂಗಳೂರು: ರಾಜ್ಯ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ ಜಾತಿ ಗಣತಿ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಬೇಕು. ನಂತರ ಸಾರ್ವಜನಿಕರಿಂದ ಚರ್ಚೆ, ಅಭಿಪ್ರಾಯ ಹಾಗೂ ಪ್ರತಿಕ್ರಿಯೆಗಳನ್ನು ಸ್ವೀಕರಿಸಿ, ಮೀಸಲಾತಿಯ ರೂಪುರೇಷೆಗಳನ್ನು ಸಿದ್ಧಪಡಿಸಬೇಕು. ಈ ಮೂಲಕ "ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು" ಎಂಬ ತಮ್ಮದೇ ಘೋಷವಾಕ್ಯವನ್ನು ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಎಎಪಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ರಾಜ್ಯದ ಕೆಲ ಪಟ್ಟಭದ್ರಾ ಹಿತಾಸಕ್ತಿಗಳು ಕಾಂತರಾಜ ಅರಸ್ ಮಂಡಿಸಿರುವ ಶೈಕ್ಷಣಿಕ, ಸಾಮಾಜಿಕ, ಹಾಗೂ ಜಾತಿ ಜನಗಣತಿ ವರದಿ ಮಂಡನೆಗೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ. ಈ ವರದಿ ಇನ್ನೂ ಯಾರ ಕೈಗೂ ಸೇರಿಲ್ಲ. ಆದರೂ ಅದನ್ನು ಹತ್ತಿಕ್ಕುವ ಪ್ರಯತ್ನಗಳು ಮೇಲ್ವರ್ಗದ ಸಮುದಾಯದ ಕೆಲವು ಮುಖಂಡರಿಂದ ನಡೆ ಯುತ್ತಿರುವುದು ಸರಿಯಲ್ಲ.

ಜಾತಿ ಸಮೀಕ್ಷೆ ನಡೆಸುವ ಮೂಲಕ ದೇಶದ ಎಲ್ಲ ರಾಜ್ಯಗಳಿಗೆ ನಮ್ಮ ರಾಜ್ಯ ಮೇಲ್ಪಂಕ್ತಿಯನ್ನು ಹಾಕಿತ್ತು. ಈ ಸಮೀಕ್ಷೆಯು ಹಿಂದುಳಿದ ವರ್ಗಕ್ಕೆ ಸೀಮಿತವಾಗಿ ನಡೆದಿಲ್ಲ. ಎಲ್ಲ ಜಾತಿ ಸಮುದಾಯಗಳ ಸಮೀಕ್ಷೆ ಮಾಡಲಾಗಿದೆ. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮುದಾಯಗಳ ಆದಿಯಾಗಿ ಎಲ್ಲ ಜಾತಿಗಳಲ್ಲಿ ಇರುವ ಬಡವರ ಮಾಹಿತಿಯೂ ಅದರಲ್ಲಿದೆ. ಹಾಗಾಗಿ ಒಂದು ಅರ್ಥದಲ್ಲಿ ಜಾತಿ ಸಮೀಕ್ಷೆ ವಿರೋಧಿಗಳು ತಮ್ಮದೇ ಜಾತಿಯ ಬಡವರ ವಿರೋಧಿಗಳಾಗಿದ್ದಾರೆ. ತಮ್ಮದೇ ಜಾತಿಯ ಭೂರಹಿತರನ್ನು ವಿರೋಧಿಸುತ್ತಿ ದ್ದಾರೆ. ಇವರೆಲ್ಲರೂ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ವಿರೋಧವನ್ನು ಸಹ ಮಾಡಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಅಹಿಂದ ವರ್ಗಗಳು, ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ನ್ಯಾಯ ಸಿಗದೇ ಅವಕಾಶಗಳಿಂದ ವಂಚಿತವಾಗಿವೆ. ಈ ಸಮೀಕ್ಷೆಯು ಯಾವುದೇ ಜಾತಿಗಳ ಮೇಲಾಟಕ್ಕಾಗಿ ಮಾಡಿರುವಂತಹ ಪ್ರಕ್ರಿಯೆಯಲ್ಲ ಎಂಬುದನ್ನು ಮನಗಾಣಬೇಕಿದೆ. ಎಲ್ಲೂ ಲೋಪವಾಗದಂತೆ ಸುಮಾರು ರೂ.170 ಕೋಟಿ ಕನ್ನಡಿಗರ ತೆರಿಗೆ ಹಣವನ್ನು ಖರ್ಚು ವೈಜ್ಞಾನಿಕವಾಗಿ ತಯಾರಿಸಿರುವ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡದೆ ಅವಗಣಿಸುವುದು ಸರಿಯಲ್ಲ. ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಎಚ್. ಡಿ. ಕುಮಾರಸ್ವಾಮಿ ಹಾಗೂ ಬಸವರಾಜ್ ಬೊಮ್ಮಾಯಿ ಅವರು ಕೆಲವು ಮೇಲ್ವರ್ಗದ ಜಾತಿಗಳ ರಾಜಕೀಯ ಒತ್ತಡಕ್ಕೆ ಮಣಿದು ಜಾತಿ ಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಸಮ ಸಮಾಜ ನಿರ್ಮಾಣ ಮಾಡಬೇಕು ಎಂಬ ಕನಸು ಹೊತ್ತಿರುವ ನೀವು ಈ ವರದಿಯನ್ನು ಸ್ವೀಕರಿಸದಿದ್ದರೆ ನಿಮ್ಮ ಕನಸಿಗೆ ನೀವೇ ದ್ರೋಹ ಬಗೆದಂತೆ ಎಂದು ಪತ್ರದಲ್ಲಿ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 1,351 ಜಾತಿಗಳ ಪಟ್ಟಿಯನ್ನು ಸಿದ್ಧಪಡಿಸಿರುವುದಾಗಿ ಹೇಳಲಾಗುತ್ತಿದೆ. ಮೊದಲು ವರದಿ ಸಾರ್ವಜನಿಕರ ಕೈಗೆ ಸೇರಲಿ. ಆ ನಂತರ ಏನೇ ಆಕ್ಷೇಪಗಳಿದ್ದರೂ ಸಲ್ಲಿಸಬಹುದು. ಆದರೆ ವರದಿ ಪ್ರಕಟಗೊಳ್ಳುವ ಮೊದಲೇ ವಿರೋಧಿಸುತ್ತಿರುವುದು ಸ್ವಾಗತಾರ್ಹ ನಡೆಯಲ್ಲ. ಮುಖ್ಯಮಂತ್ರಿಗಳು ಇಂತಹ ಯಾವುದೇ ಒತ್ತಡಗಳಿಗೆ ಸೊಪ್ಪು ಹಾಕದೆ ತಕ್ಷಣ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು