LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್: ಸಾಧ್ಯವಿರುವ ಎಲ್ಲಾ ರೀತಿಯ ನೆರವು- MEA

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಇರುವ ಪರ್ಯಾಯ ಆಯ್ಕೆಗಳನ್ನು ಹುಡುಕಾಡಲು ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಭಾರತ ಮಂಗಳವಾರ ಹೇಳಿದೆ.

ಯೆಮೆನ್ ಅಧ್ಯಕ್ಷ ರಶಾದ್ ಅಲ್-ಅಲಿಮಿ ಸೋಮವಾರ ಕೇರಳದ ನರ್ಸ್‌ಗೆ ಮರಣದಂಡನೆ ಶಿಕ್ಷೆಗೆ ಅನುಮೋದನೆ ನೀಡಿದ ನಂತರ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ರೀತಿಯ ಹೇಳಿಕೆ ನೀಡಿದೆ. ಯೆಮೆನ್ ಪ್ರಜೆಯನ್ನು ಕೊಂದಿದ್ದಕ್ಕಾಗಿ ನಿಮಿಷಾ ಪ್ರಿಯಾ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ.

ವರದಿಗಳ ಪ್ರಕಾರ ಒಂದು ತಿಂಗಳೊಳಗೆ ಮರಣದಂಡನೆ ಜಾರಿಯಾಗುವ ನಿರೀಕ್ಷೆಯಿದೆ. ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾಗೆ ಶಿಕ್ಷೆಯ ಬಗ್ಗೆ ನಮಗೆ ತಿಳಿದಿದೆ. ಉಳಿದಿರುವ ಪರ್ಯಾಯ ಆಯ್ಕೆಗಳನ್ನು ಅವರ ಕುಟುಂಬ ಹುಡುಕುತ್ತಿದೆ ಎಂಬುದನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ. ಸರ್ಕಾರ ಈ ವಿಷಯದಲ್ಲಿ ಸಾಧ್ಯವಿರುವ ಎಲ್ಲ ರೀತಿಯ ನೆರವನ್ನು ನೀಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ರಣದೀರ್ ಜೈಸ್ವಾಲ್ ಹೇಳಿದ್ದಾರೆ,

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲಂಗೋಡ್‌ನ ನರ್ಸ್ ನಿಮಿಷಾ ಪ್ರಿಯಾ 2008 ರಲ್ಲಿ ಯೆಮೆನ್‌ಗೆ ತೆರಳಿದ್ದರು. ಹಲವಾರು ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ ನಂತರ ತನ್ನದೇ ಆದ ಸ್ವಂತ ಕ್ಲಿನಿಕ್ ಸ್ಥಾಪನೆಯ ಯೋಜನೆ ಹೊಂದಿದ್ದರು.

2017 ರಲ್ಲಿ ಸ್ಥಳೀಯ ಪಾಲುದಾರ ತಲಾಲ್ ಅಬ್ದೋ ಮಹದಿ ಅವರೊಂದಿಗೆ ಜಗಳವಾಡಿದ್ದರು. ಹಣ ದುರುಪಯೋಗಪಡಿಸಿಕೊಳ್ಳುವ ಪ್ರಯತ್ನವನ್ನು ಆಕೆ ವಿರೋಧಿಸಿದ್ದರು ಎಂದು ಪ್ರಿಯಾ ಕುಟುಂಬ ಸದಸ್ಯರು ಹೇಳುತ್ತಾರೆ. ಆತ ವಶಪಡಿಸಿಕೊಂಡಿದ್ದ ತನ್ನ ಪಾಸ್‌ಪೋರ್ಟ್ ಅನ್ನು ಮರುಪಡೆಯುವ ಪ್ರಯತ್ನದಲ್ಲಿ ನಿದ್ದೆ ಭರಿಸುವ ಇಂಜೆಕ್ಷನ್ (sedatives) ಹಾಕಿದ್ದಾರೆ. ಆತನ ಸಾವಿಗೆ ಇದೇ ಕಾರಣ ಎಂಬ ಆರೋಪವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು