LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ರಕ್ತಾಕ್ಷ ಟ್ರೇಲರ್ ಬಿಡುಗಡೆ

ನಟ ವಿಜಯ್ ರಾಘವೇಂದ್ರ, ನಟಿ ಸುಮನ್ ನಗರ್ಕರ್ ರಕ್ತಾಕ್ಷ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಹೊಸಬರ ಪ್ರಯತ್ನಕ್ಕೆ ಬೆನ್ನುತಟ್ಟಿದ್ದಾರೆ.ನಟ ವಿಜಯ್ ರಾಘವೇಂದ್ರ ಮಾತನಾಡಿ, ಕಥೆ ಬಗ್ಗೆ ಕಡಿಮೆ ಗೊತ್ತಿದ್ದರೆ ಒಳ್ಳೆದು. ಕಥೆ ಹೆಚ್ಚು ಬಿಟ್ಟು ಕೊಟ್ಟರೂ ಕಷ್ಟ. ಕಥೆಯ ಸುಳಿವೇ ಇಲ್ಲದೇ ಊಹಾಪೋಹ ಮಾಡಿಕೊಂಡು ಥಿಯೇಟರ್ ಗೆ ಬರುವ ತರ ಮಾಡಿದರು ಕಷ್ಟ.

ಯಾಕೆಂದರೆ ಜನ ಈಗ ಎಷ್ಟರ ಮಟ್ಟಿಗೆ ಮುಂದುವರೆದಿದ್ದಾರೆ ಎಂದರೆ ಸಣ್ಣ ಟ್ರೇಲರ್ , ಟೀಸರ್ ತಮ್ಮದೇ ಕಲ್ಪನೆ ಮೂಲಕ ಥಿಯೇಟರ್ ಗೆ ಬರ್ತಾರೆ. ಕಥೆ ಅವರದ್ದು ಆದರೆ ಒಪ್ಪಿಕೊಳ್ಳುತ್ತಾರೆ. ಕಥೆ ಬೇರೆಯದದ್ದಾರೆ ನಾವು ಅಂದುಕೊಂಡು ಬಂದ ಕಥೆಯಲ್ಲ ಎಂದು ಬೇಜಾರು ಆಗುತ್ತಾರೆ. ಆದರೆ ಸಣ್ಣ ಎಳೆ, ಜನರ ನಂಬಿಕೆ ವಿಶ್ವಾಸ ಗೆಲ್ಲುವುದು ಸಿನಿಮಾದ ಮುಖಾಂತರ ಗೆಲ್ಲುವುದು ಸಾಹಸ.

ಅಂತಹ ಸಾಹಸಕ್ಕೆ ರೋಹಿತ್ ಕೈ ಹಾಕಿದ್ದಾರೆ. ಬಹಳ ಚೆನ್ನಾಗಿ ಟ್ರೇಲರ್ ಮೂಡಿಬಂದಿದೆ. ಕುತೂಹಲ ಕೆರಳಿಸುತ್ತದೆ. ಆಕ್ಷನ್ ಇದೆ. ಥ್ರಿಲ್ಲರ್ ಎಲಿಮೆಂಟ್ ಇದೆ. ನನಗೂ ಆಡಿಯನ್ಸ್ ಆಗಿ ಕ್ಯೂರಿಯಾಸಿಟಿ ಹೆಚ್ಚುವಂತೆ ಮಾಡಿದೆ. ಬಹಳ ಕಷ್ಟಪಟ್ಟಿದ್ದಾರೆ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.ಹಿರಿಯ ನಟಿ ಸುಮನ್ ನಗರ್ಕರ್ ಮಾತನಾಡಿ, ಟ್ರೇಲರ್ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಸರಣಿ ಕೊಲೆ ಇದೆ ಅನ್ನೋ ಕ್ಲ್ಯೂ ಇದೆ. ಮೂರ್ನಾಲ್ಕು ಜನ ಹೀರೋಯಿನ್ ಇರುವುದು ಗೊತ್ತಾಗುತ್ತದೆ. ಹೀಗಾಗಿ ಸರಣಿ ಕೊಲೆಯಾಗುತ್ತದೆ ಎಂಬ ಕ್ಲ್ಯೂ ಕೂಡ ಸಿಕ್ತು.

ನನ್ನ ಪತಿ ಪೊಲೀಸ್ ಪಾತ್ರದಲ್ಲಿ ಮಾಡಿದ್ದಾರೆ. ಕಥೆ ಅವರು ಕೂಡ ಹೇಳಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಪ್ರೋತ್ಸಾಹ ಸಿಗಬೇಕು ಎಲ್ಲರೂ ಪ್ರೋತ್ಸಾಹ ಕೊಡಬೇಕು. ಜನ ಥಿಯೇಟರ್ ಗೆ ಬರಬೇಕು. ಅವರು ನಾವು ಮಾಡುವ ಕೆಲಸ ನೋಡಬೇಕು. ಈ ರೀತಿಯ ಮಿಸ್ಟ್ರೀ ಸ್ಟೋರಿಯನ್ನು ಥಿಯೇಟರ್ ನಲ್ಲಿ ನೋಡಿ ಎಂದು ಹೇಳಿದರು.

ವಕೀಲರಾದ ಹರ್ಷ ಮುತಾಲಿಕ್ ಮಾತಾಡಿ ಶುಭ ಹಾರಯಿಸಿದರು. ನಟ ರೋಹಿತ್ ಮಾತನಾಡಿ, ಹಾರ್ಡ್ ವರ್ಕ್ ಮಾಡಿ ಇಲ್ಲಿಗೆ ಬಂದಿದ್ದೇನೆ. ಥಿಯೇಟರ್ಸ್ ಮಾಡಿದೆ ಅಲ್ಲಿ ಒಳ್ಳೆ ಪರ್ಫಾಮರ್ ಅಂತಾ ಹೆಸರು ಬಂತು. ಭಿಕ್ಷುಕ ರೋಲ್ ಮಾಡಿದೆ. ಅದೇ ರೋಲ್ ಹಿಟ್ ಆಯ್ತು. ಕನ್ನಡ ಚಿತ್ರರಂಗ ಒಂದು ಹೆಮ್ಮರ. ಈ ಹೆಮ್ಮರದಲ್ಲಿ ನಾನು ಒಂದು ಚಿಕ್ಕ ಹಸಿರು ಎಲೆಯಾಗಿದ್ದರೆ ನನ್ನ ಲೈಫ್ ಸಾರ್ಥಕ ಅಂದರು.

ರೋಹಿತ್ ಈಗಾಗಲೇ ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಧೀರೇಂದ್ರ ಡಾಸ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.
ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಬರೆದಿದ್ದಾರೆ, ಸಂಗೀತವನ್ನು ಧೀರೇಂದ್ರ ಡಾಸ್ ನೀಡಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ನಟಿಸಿರುವ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ನಿವೀಕ್ಷ ನಾಯ್ಡು, ಗುರುದೇವ ನಾಗರಾಜ, ಪ್ರಭು, ವಿಶ್ವ, ಭದ್ರಿ ನಾರಾಯಣ,, ಬಸವರಾಜ ಆದಾಪುರ ನಟಿಸಿದ್ದಾರೆ.

ಖಳನಾಯಕ ಪಾತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಿರುವ ಚಿತ್ರತಂಡ ಜುಲೈ 26ಕ್ಕೆ ಸಿನಿಮಾವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಿದೆ.ಕಾರ್ಯಕ್ರಮದಲ್ಲಿ ನಿರ್ದೇಶಕ ಶ್ರೀಕಾಂತ್ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು