ಬೆಂಗಳೂರು: ರಾಜ್ಯದಲ್ಲಿ ಬಡವರಿಗಾಗಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಳ್ಳಸಾಗಣೆ ಮಾಡುತ್ತಿದ್ದವರ ವಿರುದ್ಧ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಕಠಿಣ ಕಾರ್ಯಾಚರಣೆ ನಡೆಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ದಾಳಿ ಮತ್ತು ತಪಾಸಣೆಗಳ ವೇಳೆ ಒಟ್ಟು 5,64,992 ಕೆಜಿ ಅಕ್ರಮ ಪಡಿತರ ಅಕ್ಕಿ ಹಾಗೂ ಸಾಗಣೆಗೆ ಬಳಸುತ್ತಿದ್ದ 24 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಅಕ್ಕಿಯ ಮೌಲ್ಯ ರೂ. 1.34 ಕೋಟಿ ಹಾಗೂ ವಾಹನಗಳ ಮೌಲ್ಯ ರೂ. 3.41 ಕೋಟಿಯಷ್ಟಾಗಿದ್ದು, ಒಟ್ಟು ರೂ. 4,75,93,033 ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ ಬಣ್ಣದ ಪ್ಯಾಕೆಟ್‌ಗಳಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ 71,800 ಕೆಜಿ ಅಕ್ಕಿ ಮತ್ತು 3 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಲಕರಾದ ರತನ್ ಬಬನ್ ಸದಾನಂದೆ, ವಿಜಯನಾರಾಯಣ್ ಭೋಸ್ಥೆ ಹಾಗೂ ಮಹಮ್ಮದ್ ರಫೀಕ್ ಅತ್ತಾರ್ ವಿರುದ್ಧ ನಿಪ್ಪಾಣಿ ಗ್ರಾಮೀಣ ಮತ್ತು ಮಾಳಮಾರುತಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಹಾಗೆಯೇ, ವಿಜಯಪುರದ ಜಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35,392 ಕೆಜಿ ಅಕ್ಕಿ ಹಾಗೂ ಲಾರಿಯನ್ನು ಜಪ್ತಿ ಮಾಡಲಾಗಿದ್ದು, ಚಾಲಕನ ವಿರುದ್ಧ ದೂರು ದಾಖಲಿಸಲಾಗಿದೆ.
ಇನ್ನು ಬೆಂಗಳೂರು ಗ್ರಾಮಾಂತರದ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ತಮಿಳುನಾಡಿಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 35,000 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬAಧಿಸಿದAತೆ ಮಂಡ್ಯದ ಶ್ರೀ ಅನ್ನಪೂರ್ಣೇಶ್ವರಿ ಎಂಟರ್‌ಪ್ರೆöÊಸಸ್ ಮಾಲೀಕರು, ಮಧ್ಯಪ್ರದೇಶದ ಸೇಲರ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ ಮಾಲೀಕರು ಹಾಗೂ ಲಾರಿ ಚಾಲಕರು ಸೇರಿದಂತೆ ಒಟ್ಟು 4 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಅಲ್ಲದೆ, ಕಾಗವಾಡದ ಲೋಕೂರು ಗ್ರಾಮದ ಶ್ರೀ ಬನಶಂಕರಿ ಆಗ್ರೋ ಪ್ರೊಸೆಸಿಂಗ್ ಅಕ್ಕಿ ಗಿರಣಿ ಮೇಲೆ ಕೃಷಿ ಮಾರಾಟ ಮತ್ತು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಬೃಹತ್ ದಾಳಿ ನಡೆಸಲಾಗಿದೆ. ಈ ವೇಳೆ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಬರೋಬ್ಬರಿ 4,22,800 ಕೆಜಿ ಪಡಿತರ ಅಕ್ಕಿ ಹಾಗೂ 19 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಬAಧಿತ ಗೋದಾಮನ್ನು ಸೀಜ್ ಮಾಡಲಾಗಿದೆ. ಒಟ್ಟಾರೆ ಈ ಎಲ್ಲಾ ಪ್ರಕರಣಗಳಿಗೆ ಸಂಬAಧಿಸಿದAತೆ ಇಲಾಖೆಯು ಒಟ್ಟು 9 ಜನರ ವಿರುದ್ಧ ಕಾನೂನು ಕ್ರಮ ಜರುಗಿಸಿದೆ.