LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರವಿದು ಹರಕಲು ಬಾಯಿ ಸಂಸ್ಕೃತಿ: ಡಿಸಿಎಂ

ಬೆಳಗಾವಿ: "ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಸಿ.ಟಿ. ರವಿ ಅವರ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಈ ಹಿಂದೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಹೀಗೆ ನಮ್ಮ ನಾಯಕರ ವಿರುದ್ಧ ಬಹಳ ಕೀಳು ಮಟ್ಟದ ಪದ ಬಳಕೆ ಮಾಡಿದ್ದಾರೆ. ಇದು ಚಿಕ್ಕಮಗಳೂರು ಸಂಸ್ಕೃತಿಯೇ? ಭಾರತದ ಸಂಸ್ಕೃತಿಯೇ? ಬಿಜೆಪಿ ಸಂಸ್ಕೃತಿಯೇ? ಚಿಕ್ಕಮಗಳೂರಿನಲ್ಲಿ ಇಂತಹ ಸಂಸ್ಕೃತಿಯನ್ನು ನಾನು ಈವರೆಗೂ ನೋಡಿಲ್ಲ. ಇಡೀ ಚಿಕ್ಕಮಗಳೂರಿನಲ್ಲಿ ಇವನೊಬ್ಬನೇ ಇಷ್ಟು ಕೀಳು ಮಟ್ಟದ ಸಂಸ್ಕೃತಿ ಹೊಂದಿರುವ ವ್ಯಕ್ತಿ" ಎಂದು ಕಿಡಿಕಾರಿದ್ದಾರೆ.

"ಸದನದಲ್ಲಿ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹಸಚಿವರು ಅಪಮಾನ ಮಾಡಿದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಈತ ರಾಹುಲ್ ಗಾಂಧಿ ಅವರನ್ನು ಮಾದಕ ವ್ಯಸನಿ ಎಂದು ನಿಂದಿಸಿದ್ದರುರು. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಪಕ್ಷದ ನಾಯಕನ ಸಮರ್ಥನೆಗೆ ಮುಂದಾದಾಗ, ಆತ ನಮ್ಮ ಸಚಿವರನ್ನು ಹಲವು ಬಾರಿ  ಪ್ರೊಸ್ಟಿ** ಎಂದು ಕರೆದಿದ್ದಾನೆ. ಬಿಜೆಪಿಯವರು ತಮ್ಮ ನಾಯಕನನ್ನು ಹೇಗೆ ಸಮರ್ಥನೆ ಮಾಡಿಕೊಂಡರೋ ಅದೇ ರೀತಿ ನಮ್ಮ ಸಚಿವರು ನಮ್ಮ ನಾಯಕರನ್ನು ಸಮರ್ಥನೆ ಮಾಡಿಕೊಳ್ಳುವುದು ತಪ್ಪೇ? ಅದಕ್ಕಾಗಿ ಇಂತಹ ಪದ ಬಳಸುವುದೇ? ಎಂದು ಪ್ರಶ್ನಿಸಿದ್ದಾರೆ.

"ಒಟ್ಟು 12 ಬಾರಿ ಈ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಮಾಧ್ಯಮಗಳು ಈ ಎಲ್ಲಾ ಅಂಶಗಳನ್ನು ಸೇರಿ ಸುದ್ದಿ ಪ್ರಕಟಿಸಬೇಕು. ನಿಮ್ಮ ಬಳಿ ದಾಖಲೆ ಇಲ್ಲವಾದರೆ ಹೇಳಿ ನಾನು ನೀಡುತ್ತೇನೆ" ಎಂದು ತಿಳಿಸಿದರು."ಪರಿಷತ್ತಿನಲ್ಲಿ ಗುರುವಾರದಂದು ನನ್ನ ಇಲಾಖೆಗಳಿಗೆ ಸಂಬಂಧಿಸಿದ 12 ಪ್ರಶ್ನೆಗಳಿದ್ದವು. ಅವುಗಳಿಗೆ ಉತ್ತರ ನೀಡಿ ನಾನು ವಿಧಾನಸಭೆಗೆ ಬಂದಾಗ ಈ ಘಟನೆ ನಡೆದಿದೆ" ಎಂದರು.ಸಾಕ್ಷಿಗಳು ಇದ್ದರೆ ಸಭಾಪತಿಗಳು ಕ್ರಮ ಕೈಗೊಳ್ಳಬಹುದಿತ್ತಲ್ಲವೇ ಎಂದು ಕೇಳಿದಾಗ, "ಅವರು ಹಿರಿಯ ನಾಯಕರು. ಅವರ ಬಗ್ಗೆ ನನಗೆ ಗೌರವವಿದೆ.

ಆದರೆ ಈ ವಿಚಾರದಲ್ಲಿ ಅವರ ನಡೆ ಬೇಸರ ತಂದಿದೆ. ಅವರು ಯಾವುದೇ ಪಕ್ಷದವರಾದರೂ ಸಭಾಪತಿ ಸ್ಥಾನದಲ್ಲಿ ಕೂತಾಗ ಎಲ್ಲರ ರಕ್ಷಣೆ ಮಾಡಬೇಕು. ಈ ವಿಚಾರವಾಗಿ ಅವರು ನಿನ್ನೆ ಚರ್ಚೆಗೆ ಅವಕಾಶ ನೀಡಬೇಕಿತ್ತು. ಅಲ್ಲಿ ಏನಾಗಿದೆ ಎಂದು ಪರಿಶೀಲನೆ ಮಾಡಬೇಕಿತ್ತು. ಒಂದು ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಪ್ಪಿದ್ದರೆ ಅವರದ್ದೆ ತಪ್ಪು ಎಂದು ಹೇಳಬೇಕಿತ್ತು. ಅದನ್ನು ಬಿಟ್ಟು ಇಬ್ಬರನ್ನು ಕರೆದುಕೊಂಡು ಹೋಗಿ ಹೇಳಿಕೆ ಬರೆಸಿಕೊಳ್ಳುವುದು ಸರಿಯಲ್ಲ.

ಪೊಲೀಸರು ರಾತ್ರಿ ಪೂರ್ತಿ ತಿರುಗಾಡಿಸಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, "ಪೊಲೀಸರು ಏನು ಮಾಡಿದ್ದಾರೆ ಗೊತ್ತಿಲ್ಲ. ಸುಮ್ಮನೆ ಆರೋಪ ಮಾಡುತ್ತಾರೆ.ಪೊಲೀಸರು ಬೇರೆಯವರಿಗಿಂತ ಹೆಚ್ಚು ಸೌಜನ್ಯ ತೋರಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅವರ ಮನೆಯವರಿಗೆ ಅವಕಾಶ ನೀಡಲಿ. ಅದನ್ನು ಬಿಟ್ಟು ಖಾನಾಪುರ ʼಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಬಿಟ್ಟುಕೊಂಡು ಬಿಜೆಪಿ ಸಭೆ ಮಾಡುವುದು ಎಷ್ಟು ಸರಿ? ಈ ವಿಚಾರದಲ್ಲಿಪೊಲೀಸರ ನಡೆ ಸರಿಯಿಲ್ಲ. ನಾವು ಪೊಲೀಸರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿದ್ದರೂ ಅವರಿಗೆ ಯಾವುದೇ ತೊಂದರೆ ಆಗಲು ಅವಕಾಶ ನೀಡಿಲ್ಲ. ತಮ್ಮ ಶಾಸಕಿಗೆ ಅಪಮಾನ ಮಾಡಿದರೆ ಕ್ಷೇತ್ರದ ಜನ ರೊಚ್ಚಿಗೇಳುವುದು ಸಹಜ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು