LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Ramanagara

ರಸ್ತೆ ಗುಂಡಿ ಮುಚ್ಚೋಕೆ ಸರ್ಕಾರದಲ್ಲಿ ಕಾಸಿಲ್ಲ: ದೇವೇಗೌಡ ಆರೋಪ

ಚನ್ನಪಟ್ಟಣ: ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷಿ÷್ಮ ಹಣವಿಲ್ಲ, ಆದರೆ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಅವರು ಆರೋಪಿಸಿದರು.
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಅವರು; ಕಾಂಗ್ರೆಸ್ ಸರಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದರು. ಈ ಸರಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದರು.
ಚನ್ನಪಟ್ಟಣಕ್ಕೆ ಯಾರು ಭಗೀರಥ: ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ ಎಂದ ಅವರು; ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ್ದು ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ ಎಂದು ಜನತೆಯಲ್ಲಿ ಕೇಳಿದರು ಮಾಜಿ ಪ್ರಧಾನಿಗಳು.
ಚನ್ನಪಟ್ಟಣ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರು ೧೬೦೦ ಕೋಟಿಯಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣಪುಟ್ಟ ಕೆಲಸ ಮಾಡುತ್ತಿದೆ. ಪ್ರತಿಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟçದ ಹಿತದೃಷ್ಟಿಯಿಂದ, ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದಾರೆ: ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದರು.
ನಿಖಿಲ್ ಕುಮಾರಸ್ವಾಮಿ ಅವರು ೨೦೨೮ಕ್ಕೆ ಸ್ಪರ್ಧೆ ಮಾಡುತ್ತೇನೆ, ನಾನು ಪಕ್ಷ ಕಟ್ಟುತ್ತೇನೆ ಎಂದರು. ನಾಮಪತ್ರ ಸಲ್ಲಿಸುವ ಹಿಂದಿನ ದಿನ ಪ್ರಧಾನಿ ನರೇಂದ್ರ ಮೋದಿ, ನಡ್ಡಾ, ಅಮಿಶ್ ಶಾ ಅವರೆಲ್ಲರೂ ಸೇರಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ತೀರ್ಮಾನ ಮಾಡಿದರು. ಈ ಯುವಕ ನಿಮ್ಮ ಮೊಮ್ಮಗನಿದ್ದ ಹಾಗೆ,ವಿಧಾನಸಭೆಗೆ ಆಯ್ಕೆ ಮಾಡಿ ಆಶೀರ್ವಾದ ಮಾಡಿ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. ನಮ್ಮ ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ನಿಖಿಲ್ ಕುಮಾರಸ್ವಾಮಿ ವಿಧಾನಸೌಧಕ್ಕೆ ಹೋಗುವುದು ೧೦೦ಕ್ಕೆ ೧೦೦ ಸತ್ಯ ಎಂದು ಮಾಜಿ ಪ್ರಧಾನಿಗಳು ಹೇಳಿದರು. ಶಾಸಕರಾದ ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ್ ಸೇರಿದಂತೆ ಸ್ಥಳೀಯ ಮುಖಂಡರು ಅನೇಕರು ಮಾಜಿ ಪ್ರಧಾನಿಗಳ ಜತೆಯಲ್ಲಿ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು