LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜಕೀಯ ನಿಪುಣ ಪ್ರಶಾಂತ್ ಕಿಶೋರ್ 'ಜನ್ ಸೂರಜ್' ಪಕ್ಷಕ್ಕೆ ದೊಡ್ಡ ಹೊಡೆತ: ಪ್ರಮುಖ ನಾಯಕರಿಬ್ಬರ ರಾಜಿನಾಮೆ!

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನೂ ಸುಮಾರು ಒಂದು ವರ್ಷ ಬಾಕಿ ಇದೆ. ಅಷ್ಟರಲ್ಲೇ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಅಲ್ಲೋಲ ಕಲ್ಲೋಲ ಆರಂಭವಾಗಿದೆ. ಇನ್ನು ಇದೀಗ ರಾಜಕೀಯಕ್ಕೆ ಕಾಲಿಟ್ಟಿರುವ ಪ್ರಶಾಂತ್ ಕಿಶೋರ್ ಅವರ ಜನ್ ಸೂರಜ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ. ಪಕ್ಷದ ಇಬ್ಬರು ಪ್ರಮುಖ ನಾಯಕರು ಕೋರ್ ಕಮಿಟಿಗೆ ರಾಜೀನಾಮೆ ನೀಡಿದ್ದಾರೆ.

ಕೇಂದ್ರದ ಮಾಜಿ ಸಚಿವ ದೇವೇಂದ್ರ ಪ್ರಸಾದ್ ಯಾದವ್ ಮತ್ತು ಮಾಜಿ ಸಂಸದ ಮೊನಜೀರ್ ಹಸನ್ ಜನ್ ಸುರಾಜ್ ಪಕ್ಷದ ರಾಜ್ಯ ಕೋರ್ ಕಮಿಟಿಗೆ ರಾಜೀನಾಮೆ ನೀಡಿದ್ದಾರೆ. ನಿಯಮಗಳ ಪ್ರಕಾರ, ಅವರು ತಮ್ಮ ರಾಜೀನಾಮೆ ಪತ್ರಗಳನ್ನು ಕಾರ್ಯಾಧ್ಯಕ್ಷ ಮನೋಜ್ ಭಾರ್ತಿ ಅವರಿಗೆ ಸಲ್ಲಿಸಬೇಕು, ಆದರೆ ಇಬ್ಬರೂ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠ ಪ್ರಶಾಂತ್ ಕಿಶೋರ್ ಗೆ ಕಳುಹಿಸಿದ್ದಾರೆ.

ರಾಜೀನಾಮೆಗೆ ವೈಯಕ್ತಿಕ ಕಾರಣ ಎಂದು ಇಬ್ಬರೂ ಹೇಳಿಕೆ ನೀಡಿದ್ದಾರೆ. ಆದರೆ ಸಂಘಟನೆಯಲ್ಲಿನ ಪ್ರಭಾವ ಮತ್ತು ಪ್ರಾಬಲ್ಯದ ಹಿನ್ನೆಲೆಯಲ್ಲಿ ಆಂತರಿಕ ಚರ್ಚೆ ನಡೆಯುತ್ತಿದೆ. ಆದರೆ, ಸದ್ಯಕ್ಕೆ ಇಬ್ಬರೂ ಜನ್ ಸೂರಜ್ ಪಕ್ಷದಲ್ಲೇ ಉಳಿಯಲಿದ್ದಾರೆ. ಜನ್ ಸೂರಜ್ ಪಕ್ಷದ ಸಭೆಯಲ್ಲಿ 125 ಸದಸ್ಯರ ಕೋರ್ ಕಮಿಟಿಯನ್ನು 151 ಸದಸ್ಯರಿಗೆ ವಿಸ್ತರಿಸಲು ನಿರ್ಧರಿಸಲಾಗಿತ್ತು. ಕೋರ್ ಕಮಿಟಿಯ ನಿಷ್ಕ್ರಿಯ ಸದಸ್ಯರಿಂದ ರಾಜೀನಾಮೆ ಪಡೆಯುವುದರ ಬಗ್ಗೆಯೂ ಸಹ ಚರ್ಚಿಸಲಾಗಿದೆ. ಈ ಸಭೆ ಮತ್ತು ಚರ್ಚೆಯ ನಂತರವೇ ದೇವೇಂದ್ರ ಮತ್ತು ಮೊನಾಜಿರ್ ಕೋರ್ ಕಮಿಟಿಯಿಂದ ಹೊರಬಂದಿದ್ದಾರೆ.

ಈ ವರ್ಷದ ಅಕ್ಟೋಬರ್ 2ರಂದು ಜನ್ ಸೂರಜ್ ರಾಜಕೀಯ ಪಕ್ಷವಾಗಿ ರೂಪಾಂತರಗೊಳ್ಳುವುದಾಗಿ ಘೋಷಿಸುವಾಗ, ಪ್ರಶಾಂತ್ ಕಿಶೋರ್ ಇಬ್ಬರೂ ಸಂಘಟನೆಯ ಮೊದಲ ಶ್ರೇಣಿಯ ನಾಯಕರು ಎಂದು ಬಣ್ಣಿಸಿದ್ದರು. ಲೋಕಸಭೆ ಚುನಾವಣೆ ವೇಳೆಗೆ ದೇವೇಂದ್ರ ಆರ್‌ಜೆಡಿ ತೊರೆದು ಜನ್ ಸೂರಜ್‌ಗೆ ಸೇರ್ಪಡೆಯಾದರು. ಇನ್ನು ಜೆಡಿಯುನಿಂದ ಅಂತರ ಕಾಯ್ದುಕೊಂಡಿದ್ದ ಮೊನಾಜಿರ್ ಜನ್ ಸೂರಜ್ ಪಕ್ಷ ಸೇರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು