LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜಕೀಯ ಬಳಕೆ ಬೇಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ: ಮಾಜಿ ಸಚಿವ ನಾಗೇಂದ್ರ ಬಂಧನಕ್ಕೆ ಗೃಹಸಚಿವರ ಪ್ರತಿಕ್ರಿಯೆ

ಬೆಂಗಳೂರು: ನಿಗಮದ ಅಕ್ರಮದ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಇಡಿ ಅಧಿಕಾರಿಗಳು ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತಾರೆ. ಮಾಹಿತಿಗಳ ಆಧಾರದ ಮೇಲೆ ಬಿ.ನಾಗೇಂದ್ರರನ್ನು ಬಂಧಿಸಿದ್ದಾರೆ. ರಾಜಕೀಯವಾಗಿ ಇದನ್ನ ಉಪಯೋಗಿಸಬಾರದು ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ತನಿಖಾ ಸಂಸ್ಥೆಗಳು ರಾಜಕೀಯ ಅಸ್ತ್ರಗಳಾಗಬಾರದು. ತನಿಖೆಗೆ ನಮ್ಮದೇನು ತಕರಾರು ಇಲ್ಲ ಎಂದರು.ನಾವೂ ಸಹ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಿದ್ದೇವೆ. ನಾಗೇಂದ್ರ, ದದ್ದಲ್‍ರನ್ನು ಕರೆದು ಎಸ್‍ಐಟಿ ವಿಚಾರಣೆ ನಡೆಸಿದ್ದಾರೆ. ಸಿಬಿಐ, ಇಡಿ ರಾಜಕೀಯ ಪಕ್ಷಗಳ ರೀತಿ ಕೆಲಸ ಮಾಡಬಾರದು. ದದ್ದಲ್ ಎಲ್ಲೂ ಹೋಗಿಲ್ಲ, ಇಲ್ಲೇ ಓಡಾಡಿಕೊಂಡು ಇದ್ದಾರೆ ಎಂದರು.

ಇ.ಡಿ ಅಧಿಕಾರಿಗಳು ತಮಗಿರುವ ಮಾಹಿತಿ ಪ್ರಕಾರ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ, ಅದು ಕಾನೂನು ಪ್ರಕ್ರಿಯೆ. ವಶಕ್ಕೆ ಪಡೆದಿರುವುದಕ್ಕೆ ತಮ್ಮ ಅಭ್ಯಂತರವೇನೂ ಇಲ್ಲ, ಆದರೆ ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಕಾಂಗ್ರೆಸ್ ಮೊದಲಿಂದಲೂ ವಿರೋಧಿಸುತ್ತದೆ.

ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಸರ್ಕಾರ ರಚಿಸಿರುವ ಎಸ್‍ಐಟಿ ತನಿಖೆ ನಡೆಸುತ್ತಿದೆ ಮತ್ತು ಅದಕ್ಕೆ ಸಂಬಂಧಿಸಿದ ಬ್ಯಾಂಕ್ ವ್ಯವಹಾರಗಳನ್ನು ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈಡಿ ಮಧ್ಯೆ ಪ್ರವೇಶಿಸುವ ಅಗತ್ಯವಿಲ್ಲರಲಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು