LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜಭವನದ ಅಂಗಳಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್, ಸಿಟಿ ರವಿ ಪ್ರಕರಣದ ಚೆಂಡು!

ಬೆಂಗಳೂರು: ಡಿಸೆಂಬರ್ 19 ರ ಬೆಳಗಾವಿ ಅಧಿವೇಶನದ ಕಲಾಪದಲ್ಲಿ ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವೆ ವಾಗ್ಯುದ್ಧ ತಾರಕಕ್ಕೇರುತ್ತಿದ್ದಂತೆ, ಎದ್ದು ನಿಂತಿದ್ದ ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಪರಸ್ಪರ ಬೈದಾಡಿಕೊಂಡಿದ್ದರು. ಸದನದಲ್ಲೇ ರವಿ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣವನ್ನೂ ದಾಖಲಿಸಿದ್ದರು. ಪ್ರಕರಣದ ಹಿನ್ನೆಲೆ ಹಿರೇಬಾಗೇವಾಡಿ ಪೊಲೀಸರು ರವಿಯನ್ನ ಬಂಧಿಸಿದ್ದೂ ಆಯ್ತು, ಕೋರ್ಟ್​ ಸೂಚನೆ ಮೇರೆಗೆ ರಿಲೀಸ್​ ಮಾಡಿದ್ದೂ ಆಯ್ತು.

ಇದೀಗ ಪ್ರಕರಣ ರಾಜ್ಯಪಾಲರವರೆಗೂ ತಲುಪಿದೆ. ಪ್ರಕರಣದ ಹಿನ್ನೆಲೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ಗೆ ದೂರು ನೀಡಿತ್ತು. ಈ ಹಿನ್ನೆಲೆ ರಾಜ್ಯಪಾಲರು ಸಿ.ಟಿ.ರವಿಗೆ ಬುಲಾವ್​ ನೀಡಿದ್ದರು. ಸದ್ಯ ಸಿಟಿ ರವಿ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​ರನ್ನ ಭೇಟಿಯಾಗಿ ಜಟಾಪಟಿಯ ಕುರಿತು ಮಾಹಿತಿ ನೀಡಿದ್ದು, ಪ್ರಕರಣದ ದಿಕ್ಕು ತಪ್ಪಿಸುತ್ತಿರುವ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇನ್ನು ಈಗಾಗಲೇ ಅಂದರೆ, ಡಿಸೆಂಬರ್ 25ರಂದೇ ಎರಡೂ ಪ್ರಕರಣಗಳು ಸಿಐಡಿಗೆ ವರ್ಗಾವಣೆಯಾಗಿದೆ. ಆದರೂ ಇದುವರೆಗೂ ಸಿಐಡಿ ತಂಡ ಬೆಳಗಾವಿಗೆ ಭೇಟಿ ನೀಡಿಲ್ಲ. ಸದ್ಯದಲ್ಲೇ ಸಿಐಡಿ ಟೀಂ ಬೆಳಗಾವಿಗೆ ತಲುಪಲಿದೆ. ಆದರೆ ಸಿಐಡಿಗೆ ಇಲ್ಲೊಂದು ಸವಾಲು ಎದುರಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ದೂರಿನನ್ವಯ ಸ್ಥಳ ಮಹಜರು ನಡೆಸಬೇಕಾದರೆ ಸುವರ್ಣಸೌಧಕ್ಕೆ ಕಾಲಿಡಬೇಕು. ಆದರೆ, ಪರಿಷತ್​ ಸಭಾಪತಿ ಬಸವರಾಜ್ ಹೊರಟ್ಟಿ ಸ್ಥಳ ಮಹಜರಿಗೆ ಅವಕಾಶ ಕೊಡಲ್ಲ ಅಂತ ಖಡಾಖಂಡಿತವಾಗಿ ನುಡಿದಿದ್ದಾರೆ. ಹೀಗಾಗಿ ಸಿಐಡಿ ಮುಂದಿನ ಯೋಜನೆ ಏನು ಎಂಬುದು ಇನ್ನೂ ಗೌಪ್ಯವಾಗಿಯೇ ಇದೆ.

ಪರಿಷತ್ ಸಭಾಪತಿ ನಿರ್ಧಾರದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿ, ಆ ಬಗ್ಗೆ ಹೇಳಿಕೆ ಕೊಡಲ್ಲ ಅಂದಿದ್ದಾರೆ. ಸುವರ್ಣಸೌಧದಲ್ಲಿನ ಗಲಾಟೆ ಬಗ್ಗೆ ಮಾತ್ರ ಸಿಐಡಿ ತನಿಖೆ ಪ್ರಾರಂಭಿಸಿದ್ದು, ಅವರ ಕೆಲಸ ಮಾಡುತ್ತಾರೆ. ತನಿಖೆ ಆಗಲಿ ವರದಿ ಬಂದಾಗ ಎಲ್ಲವನ್ನೂ ಹೇಳುತ್ತೇವೆ ಎಂದು ಹೇಳಿದ್ದಾರೆ.

ಇನ್ನು ಡಿ.22 ರಂದು ಸಿ.ಟಿ.ರವಿ ಮೇಲೆ ಹಲ್ಲೆ ಸಂಬಂಧ ಅಪರಿಚಿತರ ವಿರುದ್ಧ ದೂರು ದಾಖಲಾಗಿತ್ತು. ಹಿರೇಬಾಗೇವಾಡಿ ಪೊಲೀಸರು ಖುದ್ದು ಸ್ವಯಂಪ್ರೇರಿತ ಕೇಸ್​ ದಾಖಲಿಸಿಕೊಂಡಿದ್ದರು. ಆದರೆ, ದೂರು ದಾಖಲಾಗಿ 8 ದಿನಗಳಾದರೂ ಇನ್ನೂ ಆರೋಪಿಗಳು ಮಾತ್ರ ಪತ್ತೆಯಾಗಿಲ್ಲ. ಇದರಿಂದ ಸಿಡಿದಿರುವ ಪರಿಷತ್ ಸದಸ್ಯ ಸಿ.ಟಿ.ರವಿ, ಯಾಕೆ ಗೂಂಡಾಗಳನ್ನ ಇದುವರೆಗೂ ಬಂಧಿಸಿಲ್ಲ. ನಾನು ಕೊಟ್ಟಿರುವ ದೂರಿನಲ್ಲಿ ಹೆಸರು ದಾಖಲಿಸಿದ್ದರೂ ಅಪರಿಚಿತರು ಎಂದು ನಮೂದಿಸಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು