LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ರಾಜು ಜೇಮ್ಸ್ ಬಾಂಡ್" ಫೆ.14ಕ್ಕೆ ತೆರೆಗೆ

ಕರ್ಮ ಬ್ರೋಸ್  ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ `ಫಸ್ಟ್ ರ್ಯಾಂಕ್ ರಾಜು' ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿರುವ, ಅತ್ಯಂತ ನಿರೀಕ್ಷಿತ ಸಿನಿಮಾ `ರಾಜು ಜೇಮ್ಸ್ ಬಾಂಡ್ " ಚಿತ್ರದ ಬಿಡುಗಡೆ ದಿನಾಂಕ ಹೊಸವರ್ಷದ ಮೊದಲ ದಿನದಂದು ಘೋಷಣೆಯಾಗಿದೆ. ನಗುವೇ ಪ್ರಾಧಾನವಾಗಿರುವ ಈ ಚಿತ್ರ ಫೆಬ್ರವರಿ 14, ಪ್ರೇಮಿಗಳ ದಿನದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರದ ಮನಮೋಹಕ ಹಾಡೊಂದು ಸಹ ಅನಾವರಣವಾಗಲಿದೆ.

ಮೊದಲು ಹೇಳಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ "UI" ಹಾಗೂ "ಮ್ಯಾಕ್ಸ್" ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ತಿಳಿಸಿದ್ದ ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು(ಕೆನಡಾ) ಫೆಬ್ರವರಿ 14 ರಂದು ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಮನಮೋಹಕ ಕಥೆ, ಹಾಸ್ಯ, ಲಂಡನ್‍ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತ ಚಿತ್ರದ ಹೈಲೆಟ್ ಆಗಿದ್ದು, ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾ ಬಳಗದಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು