LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್‍ಕುಂದ್ರಾಗೆ ಇ.ಡಿ. ಬಿಸಿ

ಮುಂಬೈ: ಅಶ್ಲೀಲ ಸಿನಿಮಾ ನಿರ್ಮಾಣ ಮತ್ತು ಹಂಚಿಕೆ ಪ್ರಕರಣ ಎದುರಿಸುತ್ತಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜ್ ಕುಂದ್ರಾ ಮನೆ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಹಾಗೂ ಇನ್ನೂ ಕೆಲವರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ತನಿಖೆ ಜಾರಿಯಲ್ಲಿದೆ.

ಕೆಲವು ದಿನಗಳ ಹಿಂದೆಯಷ್ಟೆ ರಾಜ್ ಕುಂದ್ರಾಹಾಗೂ ಶಿಲ್ಪಾ ಶೆಟ್ಟಿ ಭಾರಿ ಅದ್ಧೂರಿಯಾಗಿ ವಿವಾಹ ವಾರ್ಷಿಕೋತ್ಸವ ಆಚರಣೆ ಮಾಡಿಕೊಂಡಿದ್ದರು. ಗೆಳೆಯ ರನ್ನು ಕರೆಸಿ ಭರ್ಜರಿ ಪಾರ್ಟಿ ಕೊಟ್ಟಿದ್ದರು. ಆದರೆ ಅದರ ಬೆನ್ನಲ್ಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಈ ಹಿಂದೆಯೂ ಒಮ್ಮೆ ರಾಜ್ ಕುಂದ್ರಾ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ ಇಡಿ ಇಲಾಖೆ ರಾಜ್ ಕುಂದ್ರಾಗೆ ಸೇರಿದ 97.7 ಕೋಟಿ ರೂಪಾಯಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಅದರಲ್ಲಿ ಜುಹುವಿನ ಐಶಾರಾಮಿ ಮನೆ, ಪುಣೆಯ ಮನೆ ಹಾಗೂ ಕೆಲವು ಈಕ್ವಿಟಿ ಷೇರುಗಳು ಸಹ ಇದ್ದವು. 6600 ಕೋಟಿ ಮೌಲ್ಯದ ಬಿಟ್‍ಕಾಯ್ನ್ ಹಗರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ ತಿಂಗಳಲ್ಲಿ ರಾಜ್ ಕುಂದ್ರಾ ಮೇಲೆ ದಾಳಿ ಮಾಡಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು