LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ರಾಜ್ಯಕ್ಕೆ ನಬಾರ್ಡ್ ಸಾಲ ಕಡಿತಕ್ಕೆ ಪ್ರಯತ್ನ ಸಿಎಂ: ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಗೆ ಅಪಾಯಿಂಟ್‌ಮೆಂಟ್ ಕೇಳಿದ್ದೇನೆ ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌(ನಬಾರ್ಡ್))ನಿಂದ ಈ ವರ್ಷ ರಾಜ್ಯಕ್ಕೆ ಸಾಲದ ಮೊತ್ತವನ್ನು "ಕಡಿತ" ಮಾಡಿದ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಅಪಾಯಿಂಟ್‌ಮೆಂಟ್ ಕೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾತ್ರಿ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದ್ದು, ನಾಳೆ ದೆಹಲಿಯಲ್ಲಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ.

ನಾನು ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಭೇಟಿಗೆ ಅಪಾಯಿಂಟ್ಮೆಂಟ್ ಕೇಳಿದ್ದೇನೆ. ಏಕೆಂದರೆ ಈ ವರ್ಷ ರಾಜ್ಯಕ್ಕೆ ನಬಾರ್ಡ್ ಸಾಲ ಕಡಿಮೆಯಾಗಿದೆ. ಕಳೆದ ವರ್ಷ 5,600 ಕೋಟಿ ರೂ. ಇತ್ತು. ಈ ವರ್ಷ 2,340 ಕೋಟಿ ರೂ.ಗೆ ಅಂದರೆ ಶೇ. 58 ರಷ್ಟು ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಬಾರ್ಡ್ ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುತ್ತದೆ. ಹೀಗಾಗಿ ನಾನು ಹಣಕಾಸು ಸಚಿವರನ್ನು ಭೇಟಿ ಮಾಡಿ ನಬಾರ್ಡ್ ಸಾಲದ ಮೊತ್ತ ಕಡಿತಗೊಳಿಸದಂತೆ ಅವರಿಗೆ ವಿನಂತಿ ಮಾಡುತ್ತೇನೆ" ಎಂದರು.

ದೆಹಲಿ ಭೇಟಿ ವೇಳೆ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, "ನಾಳೆ ಸಂಜೆಯೊಳಗೆ ರಾಜ್ಯಕ್ಕೆ ಮರಳಬೇಕು, ಸಮಯ ಸಿಕ್ಕರೆ ಭೇಟಿಯಾಗುತ್ತೇನೆ" ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು