LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ರಾಜ್ಯದ ಬಡವರ ಕಲ್ಯಾಣಕ್ಕೆ ಶ್ರಮಿಸಿದ ದೇವರಾಜ ಅರಸು ಕೊಡುಗೆ ಅಪಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಶೋಷಿತರ, ಬಡವರ, ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ನಾಯಕರು, ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ಟೌನ್ ನಲ್ಲಿರುವ ಡಿ.ದೇವರಾಜು ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರವರ 109ನೇ ಜನ್ಮದಿನಾಚರಣೆ ಅಂಗವಾಗಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇವರಾಜ ಅರಸು ಅವರು ಭೂ ಸುಧಾರಣೆ ಮತ್ತು ಉಳುವವನೇ ಹೊಲದೊಡೆಯ ಕಾನೂನು ಜಾರಿಗೆ ತಂದು, ಶ್ರೀಮಂತರು ಹಾಗೂ ಬಡವರ ನಡುವಿನ ಅಂತರವನ್ನು ಕಡಿಮೆ ಮಾಡಿದರು. ಬಡವರಿಗೆ ಲಕ್ಷಾಂತರ ಎಕರೆ ಉಳುಮೆ ಭೂಮಿ ನೀಡುವ ಮೂಲಕ ಬಡವರ ಪರ ಧ್ವನಿಯಾಗಿ ಮುಖ್ಯಮಂತ್ರಿ ಹುದ್ದೆಯನ್ನು ದೇವರಾಜ ಅರಸು ನಿಭಾಯಿಸಿದ್ದರು. ಹಿಂದುಳಿದ ಜನಾಂಗದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ತಂದು ಬಡ ಜನರ, ವಿದ್ಯಾರ್ಥಿಗಳ ಕಲ್ಯಾಣಕ್ಕೆ ಶ್ರಮಿಸಿದರು ಎಂದರು.

ಜಿಲ್ಲೆಯಲ್ಲಿ ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ವರ್ಗಗಳ ವಸತಿ ಶಾಲೆಗಳಲ್ಲಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಮಾಜಿ ಮುಖ್ಯಮಂತ್ರಿ ಅರಸು ಅವರ ಹೆಸರಿನಲ್ಲಿರುವ ಶಿಕ್ಷಣ ಸಂಸ್ಥೆ, ಕಟ್ಟಡಗಳ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಜಿಲ್ಲೆಯಲ್ಲಿಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಮಾತನಾಡಿ ದೇವರಾಜ ಅರಸು ಅವರು ಕರ್ನಾಟಕ ರಾಜ್ಯ ಎಂದು ಮರು ನಾಮಕರಣ ವಾದನಂತರ ಮೊದಲ ಮುಖ್ಯಮಂತ್ರಿ ಆಗಿ, ರಾಜ್ಯದಲ್ಲಿಕ್ರಾಂತಿಕಾರಕ ಸಾಮಾಜಿಕ ಸುಧಾರಣೆ ತಂದವರು. ಹಿಂದುಳಿದ ವರ್ಗಗಳ ಜನರ ಕಲ್ಯಾಣಕ್ಕಾಗಿಶ್ರಮಿಸಿದ ಮಹನೀಯರು. ಜೀತ ಪದ್ಧತಿ, ಜಮೀನ್ದಾರಿ ಪದ್ಧತಿಯನ್ನು ಹೋಗಲಾಡಿಸಲು ಒತ್ತು ನೀಡಿದರು.

ವಿಶೇಷ ಮೀಸಲಾತಿ, ವಿಶ್ವವಿದ್ಯಾನಿಲಯಗಳ ನಿರ್ಮಾಣ ಸೇರಿದಂತೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ, ಹಲವು ಯೋಜನೆಗಳನ್ನು ಜಾರಿಗೆ ತಂದರು. ನಮ್ಮ ಯುವಕರು ಅರಸು ಅವರ ಆದರ್ಶ ಜೀವನವನ್ನು ರೂಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಮುನ್ನಡೆಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡಿ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾಅನುಷ್ಠಾನದ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್, ಹಿಂದುಳಿದವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿರುಪಮಾ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಲಕ್ಮಣ್ ಮೂರ್ತಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು,ಸ್ಥಳೀಯ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು