LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಜ್ಯ ಬಿಜೆಪಿ ಭಿನ್ನಮತ ಶಮನಕ್ಕೆ ವರಿಷ್ಠರಿಂದ ಸಂಧಾನ ಸೂತ್ರ ಕೇಂದ್ರಕ್ಕೆ ಯತ್ನಾಳ್, ಲಿಂಬಾವಳಿ | ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ?

ಬೆಂಗಳೂರು: ರಾಜ್ಯ ಬಿಜೆಪಿ ಯಲ್ಲಿ ತಲೆದೋರಿರುವ ಭಿನ್ನ ಮತವನ್ನು ಶಮನಗೊಳಿಸಲು ಮುಂದಾಗಿರುವ ಪಕ್ಷದ ರಾಷ್ಟ್ರೀಯ ವರಿಷ್ಠರು ಸಂಧಾನ ಸೂತ್ರವನ್ನು ರೂಪಿಸಲು ಮುಂದಾಗಿದ್ದಾರೆ.ರಾಜ್ಯ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಹಿರಿಯ ಮುಖಂಡ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನಡುವೆ ಕಾಣಿಸಿಕೊಂಡಿರುವ ಭಿನ್ನಮತ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇರುವ ಪರಿಣಾಮ ಶೀಘ್ರದಲ್ಲೇ ಭಿನ್ನಮತ ಶಮನ ಮಾಡಲು ವರಿಷ್ಠರು ಮುಂದಾಗಿದ್ದಾರೆ.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರ ನ್ನಾಗಿ ಮುಂದುವರಿಸಿ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೇಂದ್ರಕ್ಕೆ ಕರೆಸಿಕೊಳ್ಳಲು ವರಿಷ್ಠರು ಮುಂದಾಗಿದ್ದಾರೆ ಎನ್ನಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಹುದ್ದೆಯೊಂದನ್ನು ಬಸವನಗೌಡ ಪಾಟೀಲ್ ಯತ್ನಾಳ್‍ಗೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿಭಿನ್ನಮತೀಯ ಪಾಳಯದಲ್ಲಿರುವ ಹಿರಿಯ ಮುಖಂಡ ಅರವಿಂದ್ ಲಿಂಬಾವಳಿಯವರಿಗೂ ಸಹ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹುದ್ದೆಯನ್ನು ನೀಡಲು ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದ್ದು, ಶೀಘ್ರದಲ್ಲಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಭಿನ್ನಮತ ಶಮನವಾಗಬಹುದು ಎಂದು ಮೂಲಗಳು ತಿಳಿಸಿವೆ.

ಯತ್ನಾಳ್ ಅವರೊಂದಿಗೆ ಗುರುತಿಸಿಕೊಂಡಿರುವ ಕೆಲ ನಾಯಕರಿಗೆ ರಾಜ್ಯ ಬಿಜೆಪಿಯಲ್ಲೂ ಸ್ಥಾನ ಮಾನ ನೀಡಲು ಚಿಂತನೆ ನಡೆದಿದೆ ಎಂದು ಬಲ್ಲಮೂಲಗಳು ತಿಳಿಸಿವೆ.
ಬಸವನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಗುರುತಿಸಿ ಕೊಂಡಿರುವ ಬೆಳಗಾವಿಯ ರಮೇಶ್ ಜಾರಕಿಹೊಳಿಯವರನ್ನು ಕೇಂದ್ರಕ್ಕೆ ಆಹ್ವಾನಿಸಿದರೂ ತಾವು ರಾಜ್ಯ ರಾಜಕೀಯದಲ್ಲಿ ಇರುವುದಾಗಿ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರ ಆಪ್ತ ವಲಯ ತಿಳಿಸಿದೆ.ಒಟ್ಟಾರೆ ಮುಂದಿನ ವಾರದೊಳಗಾಗಿರಾಜ್ಯ ಬಿಜೆಪಿಯಲ್ಲಿ ಇರುವ ಅಸಮಾಧಾನಗಳು ದೂರವಾಗಲಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು