LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ರಾತ್ರಿಯಾದರೆ ಕಾಡಾನೆ! ಬೆಳಗಾದರೆ ಕಪಿಗಳ ಉಪಟಳ

ಅರೇಹಳ್ಳಿ: ಬೇಲೂರು ತಾಲೂಕಿನ ಅರೇಹಳ್ಳಿ ಬಾಗದಲ್ಲಿ ಕತ್ತಲಾಯಿತೆಂದರೆ ಸಾಕು ಯಾವ ದಿಕ್ಕಿನಿಂದ ಕಾಡಾನೆಗಳು ಜಮೀನು ಹಾಗು ಗ್ರಾಮಕ್ಕೆ ಲಗ್ಗೆ ಇಟ್ಟು ಕೃಷಿಕರ ಬೆಳೆ ಸೇರಿದಂತೆ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಉಂಟು ಮಾಡುತ್ತದಯೋ ಎಂದು ನಿದ್ದೆ ಗೆಟ್ಟು ಭಯದಿಂದ ಜೀವನ ಸಾಗಿಸುತ್ತಿರುವ ಕೃಷಿಕರ ಹಾಗು ಗ್ರಾಮಸ್ಥರ ಕಥೆ ಹೇಳತೀರದು!

-ಹೌದು ಅರೇಹಳ್ಳಿ ಹೋಬಳಿಯ ಲಿಂಗಾಪುರ ಗ್ರಾಮದ ಸುತ್ತ ಮುತ್ತಲಿನಲ್ಲಿ ರಾತ್ರಿ ಯಾದರೆ ಸಾಕು ಕಾಡಾನೆಗಳು ಯಾವಾಗ ಗ್ರಾಮಕ್ಕೆ ಎಂಟ್ರಿ ಕೊಡುತ್ತೋ ಎನ್ನೋ ಭಯ ಒಂದೆಡೆಯಾದರೆ ಮತ್ತೊಂದೆಡೆ ಬೆಳಗಾಯಿತೆಂದರೆ ಸಾಕು ಗ್ರಾಮದ ಒಳಗೆ ಗುಂಪು ಗುಂಪಾಗಿ ಕಪಿಗಳ ಹಿಂಡು ಮನೆಯ ಹಂಚು ಹಾಗು ಸೀಟ್ ಗಳನ್ನು ಹಾನಿ ಮಾಡಿ ಮನೆಯೊಳಗೆ ಪ್ರವೇಶಿಸಿ ದಿನಸಿ, ತರಕಾರಿ ಹಾಗೂ ಇತರೆ ಪದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿ ಜನರ ನೆಮ್ಮದಿ ಕೆಡಿಸಿದ್ದು ಸಂಬಂಧ ಪಟ್ಟವರು ಇದರಿಂದ ಮುಕ್ತಿ ದೊರಕಿಸಿ ಎಂದು ಮಾದ್ಯಮದ ಮೂಲಕ ಮನವಿ ಮಾಡಿದ್ದಾರೆ.

ಈ ವೇಳೆ ಗ್ರಾಮಸ್ತರಾದ ಹರಿಣಿ ಶೇಖರ್ ಮಾತನಾಡಿ ನಮ್ಮ ಗ್ರಾಮದ ಸುತ್ತ ಕಾಡಾನೆಗಳ ಹಾವಳಿ ಹೆಚ್ಚಿದ್ದು, ದಿನನಿತ್ಯ ಜೀವ ಭಯದಲ್ಲಿಯೇ ಹೇಗೋ ಕಷ್ಟ ಪಟ್ಟು ಗದ್ದೆ ತೋಟಗಳಲ್ಲಿ ಕೂಲಿ ಮಾಡಿ ವಾರಕ್ಕೊಮ್ಮೆ ಮನೆಯೊಳಗೆ ಕೂಡಿಟ್ಟ ಎಲ್ಲಾ ಪದಾರ್ಥಗಳನ್ನು ಇದೀಗ ಬೆಳಗಿನ ಸಮಯದಲ್ಲಿ ಕಪಿಗಳು ಬಂದು ಹಾನಿ ಮಾಡುವುದು ವಿಪರೀತವಾಗಿದೆ,ರಾತ್ರಿಯಾದರೆ ಕಾಡಾನೆಗಳ ಭಯ ಒಂದೆಡೆಯಾದರೆ ಬೆಳಗಾದರೆ ಸಾಕು ನಮ್ಮ ತೋಟದಲ್ಲಿ ಕಪಿಗಳು ಗುಂಪು ಗುಂಪಾಗಿ ಬಂದು ಕಾಫಿ ,ಅಡಿಕೆ, ಎಳೆನೀರು ಸೇರಿದಂತೆ ಇನ್ನಿತರ ಹಣ್ಣುಗಳನ್ನೂ ತಿಂದು ಹಾಳುಮಾಡುವುದಲ್ಲದೆ ಮನೆಯ ಒಳಗೆ ಬಂದು ಗೃಹ ಬಳಕೆ ವಸ್ತುಗಳನೆಲ್ಲಾ ಚೆಲ್ಲಾಪೀಲ್ಲಿ ಮಾಡಿ ಹೋಗುತ್ತವೆ, ಒಂದೆರೆಡು ಬಂದರೆ ಹೇಗೋ ಸಹಿಸಿಕೊಳ್ಳಬಹುದು ಆದರೆ ಈ ತರ ಗುಂಪು ಗುಂಪಾಗಿ ಬಂದು ಹಾನಿ ಮಾಡಿದರೆ ನಾವು ಹೇಗೆ ಜೀವನ ಸಾಗಿಸೋದು?, ನಮ್ಮ ಸಮಸ್ಯೆ ಯಾರಿಗೇಳೋದು?, ಸಂಬಂಧಪಟ್ಟವರು ಇದರಿಂದ ಹೇಗಾದರೂ ಮುಕ್ತಿ ದೊರಕಿಸಿ ಕೊಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು