LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ಸುದೀರ್ಘ 15 ಗಂಟೆ ವಿಧಾನಸಭೆ ಕಲಾಪ, ರಾತ್ರಿ 1 ಗಂಟೆವರೆಗೂ ನಡೆದ ಅಧಿವೇಶನ: ದಶಕದ ಬಳಿಕ ದಾಖಲೆ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ (ಡಿಸೆಂಬರ್ 16) ವಿಶೇಷ ಸನ್ನಿವೇಶವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55 ರ ವರೆಗೂ ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ.

ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ಯುಟಿ ಖಾದರ್, ವಿಶ್ವಕಪ್ ಕ್ರಿಕೆಟ್ ನೋಡುವಾಗ ರಾತ್ರಿ 3 ಗಂಟೆಯವರೆಗೆ ಕಾಯುವುದಿಲ್ಲವೇ? ಅದೇ ರೀತಿ ಈಗ ವಿಶ್ವಕಪ್ ಅಂದುಕೊಂಡು ಸಹಕಾರ ಕೊಡಿ ಎಂದರು. ಮಧ್ಯರಾತ್ರಿ ಆದರೂ ತಮ್ಮ ಗಮನ ಸೆಳೆಯುವ ಸೂಚನೆಗೆ ಸಚಿವರ ಉತ್ತರ ಪಡೆಯಲು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ನಾಯ್ಕ್ ಹಾಜರಿದ್ದರು.

ತಮ್ಮ ಸರದಿ ಬಂದಾಗ ಇಂಡಿ ಶಾಸಕ ಯಶವಂತರಾಯಗೌಡ, ಕರೆಮ್ಮ ಅವ್ರು ಬಹಳ ಹೊತ್ತಿನಿಂದ ಇದ್ದಾರೆ. ಅವರಿಗೆ ಉತ್ತರ ಕೊಟ್ಟು ಕಳುಹಿಸಿ ಎಂದು ಮನವಿ ಮಾಡಿದರು. ಬೆಳಗ್ಗೆ 10 ಗಂಟೆಗೆ ಕಲಾಪ ಮುಂದೂಡಿದ ವೇಳೆ, ಸದನದಲ್ಲಿ ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್ ಮೂವರು ಸಚಿವರು, 7 ಕಾಂಗ್ರೆಸ್ ಶಾಸಕರು, 4 ಜೆಡಿಎಸ್ ಶಾಸಕರು, ಓರ್ವ ಬಿಜೆಪಿ ಶಾಸಕ ಮತ್ತು 1 ಪಕ್ಷೇತರ ಶಾಸಕ ಹಾಜರಿದ್ದರು.

ಇದು ದಾಖಲೆಯ ಕಲಾಪ: ಯುಟಿ ಖಾದರ್

ಮಧ್ಯರಾತ್ರಿವರೆಗೂ ನಡೆದ ವಿಧಾನಸಭೆ ಕಲಾಪದ ಕುರಿತು ‘ಟಿವಿ9’ ಜತೆ ಮಾತನಾಡಿದ ಸಭಾಧ್ಯಕ್ಷ ಯುಟಿ ಖಾದರ್, ಇದು ಕಳೆದ 10 ವರ್ಷಗಳಲ್ಲೇ ದಾಖಲೆಯ ಕಲಾಪ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಕೂಡ, ಇದೊಂದು ವಿಶೇಷ ಘಳಿಗೆ ಎಂದು ಬಣ್ಣಿಸಿದ್ದಾರೆ.

ಶಾಸಕಿ ಕರೆಮ್ಮ ಮಧ್ಯರಾತ್ರಿವರೆಗೂ ಉಪಸ್ಥಿತರಿದ್ದು, ಚರ್ಚೆಯಲ್ಲಿ ಪಾಲ್ಗೊಂಡಿದ್ದು ಶ್ಲಾಘನೀಯ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಡ ರಾತ್ರಿವರೆಗೂ ಅಧಿವೇಶನ: ಇದೇ ಮೊದಲಲ್ಲ!

ಅಂದಹಾಗೆ, ಇಷ್ಟೊಂದು ಸುದೀರ್ಘ ಅವಧಿ ಕಲಾಪ ನಡೆದಿದ್ದು ಇದೇ ಮೊದಲು ಏನಲ್ಲ. ಈ ಹಿಂದೆ ಕೆಜಿ ಬೋಪಯ್ಯ ಸ್ಪೀಕರ್ ಆಗಿದ್ದಾಗ ಮಧ್ಯರಾತ್ರಿ 1.45 ರ ವರೆಗೆ ಕಲಾಪ ನಡೆದಿತ್ತು.

ಸುದೀರ್ಘ ಕಲಾಪಕ್ಕೆ ಕಾರಣವೇನು?

ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಿಗದಿಯಾಗಿತ್ತು. ಆದರೆ, ಕನ್ನಡಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ 9 ದಿನಕ್ಕೆ ಮೊಟಕುಗೊಳಿಸಲಾಗಿದೆ. ಏತನ್ಮಧ್ಯೆ, ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ನಿಧನದಿಂದಾಗಿ ಕಳೆದ ಮಂಗಳವಾರ ಇಡೀ ದಿನ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಿತ್ತು. ಅಲ್ಲದೆ ಬುಧವಾರ ಸರ್ಕಾರಿ ರಜೆ ಘೋಷಣೆಯಿಂದಾಗಿ ಕಲಾಪ ನಡೆಯಲಿಲ್ಲ. ಹೀಗಾಗಿ ಅಧಿವೇಶನ 8 ದಿನಕ್ಕೆ ಇಳಿಕೆಯಾಗಿತ್ತು. ಹೀಗಾಗಿ ವಿಧಾನಸಭೆಯ ಕಾರ್ಯಕಲಾಪವನ್ನು ಪೂರ್ಣಗೊಳಿಸುವ ಉದ್ದೇಶದಿಂದ ನಂತರದ ದಿನಗಳ ಕಲಾಪದ ಅವಧಿಯನ್ನು ಹೆಚ್ಚಿಸಲಾಗಿದೆ.

ವಕ್ಫ್ ವಿವಾದ, ಪಂಚಮಸಾಲಿ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ವಿಚಾರಗಳು ಸೋಮವಾರ ಸದನದಲ್ಲಿ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಮುನಿರತ್ನ ನಾಯ್ಡು ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಕೂಡ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಮುನಿರತ್ನ ರಾಜೀನಾಮೆಗೆ ಕಾಂಗ್ರೆಸ್ ಸದಸ್ಯರು ಆಗ್ರಹಿಸಿ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು ಧಿಕ್ಕಾರ ಮೊಳಗಿಸಿ ಘೋಷಣೆಗಳನ್ನು ಕೂಗಿದರು. ಒಟ್ಟಾರೆ 8 ವಿಧೇಯಕಗಳಿಗೆ ಅಂಗೀಕಾರ ಪಡೆಯಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು