LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ರಾಮುಲು ಅಸಮಾಧಾನ ಶಮನಗೊಳಿಸಿದ ವಿಜಯೇಂದ್ರ

ಬೆಂಗಳೂರು: ಪಕ್ಷದಲ್ಲಿನ ವಿದ್ಯಮಾನದಿಂದ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ಮುಖಂಡ ಬಿಜೆಪಿಯ ಬಿ.ಶ್ರೀರಾಮುಲು ಅವರ ಅಸಮಾಧಾನವನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಮನಗೊಳಿಸಿದ್ದಾರೆ.ಕಳೆದ ಬಾರಿ ರಾಜ್ಯದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ವೇಳೆ ಸಂಡೂರು ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ವಿಚಾರ ಪ್ರಸ್ತಾಪಿಸಿ ರಾಮುಲು ವಿರುದ್ಧ ಪಕ್ಷದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್ ಬೇಸರ ವ್ಯಕ್ತಪಡಿಸಿದ್ದರು.

ರಾಧಾಮೋಹನ್ ದಾಸ್ ಅಗರ್‍ವಾಲ್ ಅವರ ಮಾತಿನಿಂದ ಅಸಮಾಧಾನಗೊಂಡು ಶ್ರೀರಾಮುಲು ಬಂಡಾಯದ ಬಾವುಟ ಹಾರಿಸಿದ್ದು, ಜೊತೆಗೆ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದರು.ರಾಮುಲುಗೆ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಕ್ಕದ ಹಿನ್ನೆಲೆಯಲ್ಲಿ ದೆಹಲಿ ಭೇಟಿಯನ್ನು ಕೈಬಿಟ್ಟಿದ್ದರು.ಈ ಮಧ್ಯೆ ರಾಮುಲು ಬಂಡಾಯ ಶಮನಕ್ಕೆ ಮುಂದಾಗಿದ್ದ ವಿಜಯೇಂದ್ರ ರಾಮುಲು ಅವರನ್ನು ಸಮಾಧಾನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೀಗ ಸಮಾಧಾನಹೊಂದಿರುವ ರಾಮುಲು ಶೀಘ್ರದಲ್ಲಿಯೇ ದೆಹಲಿಗೆ ಭೇಟಿ ನೀಡಿ ಪಕ್ಷದ ಪಕ್ಷದ ರಾಷ್ಟ್ರೀಯಾ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವ ರಾಮುಲು.ಬಿಜೆಪಿಯಲ್ಲಿ ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ನೆಪವಿಟ್ಟುಕೊಂಡು ಹೈಕಮಾಂಡ್ ನಾಯಕರ ಭೇಟಿಗೆ ನಿರ್ಧಾರ. ಬಿಜೆಪಿಯಲ್ಲಿ ಸದ್ಯದ ಮಟ್ಟಿಗೆ ರಾಮುಲು ಬಂಡಾಯ ಶಮನಗೊಂಡಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು