LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಸಾಯನಿಕ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆ, ನಾಲ್ವರು ಕಾರ್ಮಿಕರು ಸಾವು

ಭರೂಚ್: ಗುಜರಾತಿನ ಭರೂಚ್ ಜಿಲ್ಲೆಯ ದಹೇಜ್‌ನಲ್ಲಿರುವ ರಾಸಾಯನಿಕ ಘಟಕವೊಂದರಲ್ಲಿ ಸೋರಿಕೆಯಾದ ವಿಷಕಾರಿ ಅನಿಲವನ್ನು ಸೇವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಗುಜರಾತ್ ಫ್ಲೋರೊಕೆಮಿಕಲ್ಸ್ ಲಿಮಿಟೆಡ್ (ಜಿಎಫ್‌ಎಲ್) ಉತ್ಪಾದನಾ ಘಟಕದಲ್ಲಿ ಪೈಪ್‌ನಿಂದ ಸೋರಿಕೆಯಾದ ವಿಷಕಾರಿ ಅನಿಲವನ್ನು ಉಸಿರಾಡಿದ ನಂತರ ಸಂತ್ರಸ್ತರು ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ದಹೇಜ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿಎಂ ಪಾಟಿದಾರ್ ತಿಳಿಸಿದ್ದಾರೆ.

ಅವರನ್ನು ಕೂಡಲೇ ಭರೂಚ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರಲ್ಲಿ ಮೂವರು ಭಾನುವಾರ ಮುಂಜಾನೆ 3 ಗಂಟೆಗೆ ಮೃತಪಟ್ಟರೆ, ಇನ್ನೊಬ್ಬರು ಬೆಳಿಗ್ಗೆ 6 ಗಂಟೆಗೆ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

'ರಾತ್ರಿ 10 ಗಂಟೆ ಸುಮಾರಿಗೆ ಕಂಪನಿಯ ಸಿಎಂಎಸ್ ಸ್ಥಾವರದ ನೆಲ ಅಂತಸ್ತಿನ ಮೂಲಕ ಹಾದುಹೋಗಿರುವ ಪೈಪ್‌ನಿಂದ ಅನಿಲ ಸೋರಿಕೆಯಾಗಿದೆ. ಈ ವೇಳೆ ನಾಲ್ವರು ಕಾರ್ಮಿಕರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ನಾಲ್ವರು ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರನ್ನು ರಾಜೇಶ್ ಕುಮಾರ್ (ಗುಜರಾತ್ ಮೂಲದವರು), ಮುದ್ರಿಕಾ ಯಾದವ್ (ಜಾರ್ಖಂಡ್‌ಗೆ ಸೇರಿದವರು), ಸುಶಿತ್ ಪ್ರಸಾದ್ ಮತ್ತು ಮಹೇಶ್ ನಂದಲಾಲ್ (ಇಬ್ಬರೂ ಉತ್ತರ ಪ್ರದೇಶದವರು) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಎಫ್‌ಎಲ್‌ನ ಡೆಪ್ಯುಟಿ ಜನರಲ್ ಮ್ಯಾನೇಜರ್ ಜಿಗ್ನೇಶ್ ಪರ್ಮಾರ್, ಈ ಬಗ್ಗೆ ತನಿಖೆ ನಡೆಸಲಿದ್ದು, ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು