LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತೊರೆಯಲು ಕಾರಣವೇನು?

2025ರ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮುಕ್ತಾಯಗೊಂಡಿದೆ. ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಹರಾಜಿನಲ್ಲಿ ರಿಷಭ್ ಪಂತ್, ಶ್ರೇಯಸ್ ಐಯ್ಯರ್ ಮುಂತಾದ ಆಟಗಾರರು ಭಾರೀ ಮೊತ್ತಕ್ಕೆ ಬಿಡ್ ಆಗಿದ್ದಾರೆ. ಜೊತೆಗೆ, ಹೊಸ ತಂಡದ ಪರವಾಗಿ ಆಡಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸುತ್ತಿದ್ದ ಟೀಮ್ ಇಂಡಿಯಾ ಸ್ಟಾರ್ ಬ್ಯಾಟ್ಸಮ್ಯಾನ್ ಕಮ್ ವಿಕೆಟ್ ಕೀಪರ್, ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚಿನ ಮೊತ್ತಕ್ಕೆ ಹರಾಜಾದ ಆಟಗಾರರಾಗಿದ್ದಾರೆ. ಅವರನ್ನು ಲಕ್ನೋ ತಂಡ 27 ಕೋಟಿ ರೂಪಾಯಿಗೆ ಖರೀದಿಸಿತ್ತು.

ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ಲಕ್ನೋ ತಂಡಕ್ಕೆ ಪೈಪೋಟಿಯನ್ನು ಯಾಕೆ ನೀಡಲಿಲ್ಲ ಎನ್ನುವುದರ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕ ಪರ್ತ್ ಜಿಂದಾಲ್ ಸ್ಪಷ್ಟನೆಯನ್ನು ನೀಡಿದ್ದಾರೆ. ನಮ್ಮೆಲ್ಲಾ ಪ್ರಯತ್ನವನ್ನು ನಾವು ಮಾಡಿದ್ದೆವು ಎಂದು ಹೇಳಿದ್ದಾರೆ.
"ರಿಷಭ್ ಪಂತ್ ಅವರನ್ನು ಉಳಿಸಿಕೊಳ್ಳಲು ನಮ್ಮ ಫ್ರಾಂಚೈಸ್ ಸಾಧ್ಯವಾದ ಎಲ್ಲಾ ಪ್ರಯತ್ನವನ್ನು ಕೊನೆಯ ಕ್ಷಣದವರೆಗೂ ಮಾಡಿತ್ತು. ಆದರೆ, ರಿಷಭ್ ಅವರು ತಂಡವನ್ನು ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎನ್ನುವುದರ ಬಗ್ಗೆ ಬೇರೆ ನಿಲುವನ್ನು ಹೊಂದಿದ್ದರು " ಎಂದು ಪರ್ತ್ ಜಿಂದಾಲ್ ಹೇಳಿದ್ದಾರೆ.

ರಿಷಭ್ ಅವರನ್ನು ಉಳಿಸಿಕೊಳ್ಳಲು ಒಂದು ಹಂತದವರೆಗೆ ಬಿಡ್ ಮಾಡಿದ್ದ ಡೆಲ್ಲಿ ತಂಡ, ಕೊನೆಗೆ 27 ಕೋಟಿಯ ಭಾರೀ ಮೊತ್ತಕ್ಕೆ ಲಕ್ನೋ ಸೂಪರ್ ಜಯಂಟ್ ತಂಡಕ್ಕೆ ಬಿಟ್ಟು ಕೊಡಬೇಕಾಯಿತು. ಹಾಗಾಗಿ, ಮುಂದಿನ ವರ್ಷದ ಮಾರ್ಚ್ ತಿಂಗಳಿನಿಂದ ಆರಂಭವಾಗುವ ಐಪಿಎಲ್ 2025 ಸೀಸನ್ ನಲ್ಲಿ ಪಂತ್, ಲಕ್ನೋ ತಂಡದ ಪರವಾಗಿ ಆಡಲಿದ್ದಾರೆ.

"ರಿಷಭ್ ಪಂತ್ ಅವರನ್ನು ಜಾಸ್ತಿ ಬಿಡ್ ಎನ್ನುವ ಕಾರಣಕ್ಕಾಗಿ ಕೈಬಿಟ್ಟಿಲ್ಲ. ತಂಡವನ್ನು ಮುನ್ನಡೆಸುವ ವಿಚಾರದಲ್ಲಿ, ಫ್ರಾಂಚೈಸ್ ಗಳು ಹೇಗೆ ಇರಬೇಕು, ತಂಡದ ಮಾಲೀಕರು ಹೇಗೆ ಇರಬೇಕು ಎನ್ನುವ ವಿಚಾರದಲ್ಲಿ ರಿಷಭ್ ತಮ್ಮದೇ ಆದ ಫಿಲಾಸಫಿಯನ್ನು ಹೊಂದಿದ್ದರು. ಹಾಗಾಗಿ, ಲಕ್ನೋ ಜೊತೆ ಪೈಪೋಟಿಗೆ ಹೋಗಿಲ್ಲ "ಎಂದು ಪರ್ತ್ ಜಿಂದಾಲ್ ಸ್ಪಷ್ಟನೆಯನ್ನು ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು