LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇಣುಕಾಸ್ವಾಮಿ ಕೊಲೆ ಪ್ರಕರಣ ದೋಷಾರೋಪ ಪಟ್ಟಿ ನಂತರವು ಮುಂದುವರೆದ ತನಿಖೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಕೆ ಬಳಿಕವೂ ವಿವಿಧ ಅಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣದ ಹದಿನೇಳು ಆರೋಪಿಗಳ ಹಣಕಾಸಿನ ಮೂಲಕ್ಕೆ ತನಿಖಾಧಿಕಾರಿಗಳು ಕೈ ಹಾಕಿದ್ದಾರೆ.

ಕೊಲೆ ಪ್ರಕರಣ ಮುಚ್ಚಿ ಹಾಕಲು ನಟ ದರ್ಶನ್ ವ್ಯವಹಾರ ನಡೆಸಿದ್ದಾರೆ, ಆನ್‍ಲೈನ್ ಮೂಲಕವೂ ಹಣದ ವ್ಯವಹಾರ ನಡೆದಿರುವ ಬಗ್ಗೆ ಗುಮಾನಿ ಇದೆ. ಈ ಕಾರಣದಿಂದ ಪೊಲೀಸರು ಈ ವಿಚಾರವಾಗಿ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳು ಬೆಂಗಳೂರಿನ ವಿವಿಧ ಬ್ಯಾಂಕ್‍ನಲ್ಲಿ ಖಾತೆ ಹೊಂದಿದ್ದು, ಅವುಗಳ ಮಾಹಿತಿ ಪಡೆಯಲಾಗಿದೆ.

ಐಡಿಎಫ್‍ಸಿ ಫಸ್ಟ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಚ್‍ಡಿಎಫ್‍ಸಿ ಬ್ಯಾಂಕ್, ಕೋಟಕ್ ಮಹೇಂದ್ರ ಬ್ಯಾಂಕ್, ಕೆನರಾ ಬ್ಯಾಂಕ್, ಎಸ್‍ಬಿಐ ಬ್ಯಾಂಕ್, ಐಸಿಐಸಿಐ ಬ್ಯಾಂಕ್‍ಗಳ ಮ್ಯಾನೇಜರ್‍ನ ಸಂಪರ್ಕಿಸಿ ಪೊಲೀಸರು ಮಾಹಿತಿ ಸಂಗ್ರಹ ಮಾಡಿದ್ದಾರೆ.ಮಾಗಡಿ ರೋಡ್‍ನ ಒಂದು ಬ್ಯಾಂಕ್‍ನಿಂದ 14 ಮಂದಿ ಆರೋಪಿಗಳಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಕೆವೈಸಿ ಮಾಹಿತಿ ಪಡೆದಿದ್ದಾರೆ. ಇ-ಮೇಲ್ ಮೂಲಕ ಮಾಹಿತಿ ಸಂಗ್ರಹ ಆಗಿದೆ.

ಕೊಲೆಯ ಹಿಂದೆ ಅಥವಾ ನಂತರದ ದಿನಗಳಲ್ಲಿ ದೊಡ್ಡ ಮೊತ್ತದ ಹಣದ ವ್ಯವಹಾರ ನಡೆದಿದೆಯೇ ಎನ್ನುವ ಬಗ್ಗೆ ತನಿಖೆ ನಡೆಯಲಿದೆ.ಒಂದೊಮ್ಮೆ ಇದು ನಡೆದಿದ್ದರೆ ದರ್ಶನ್‍ಗೆ ಸಂಕಷ್ಟ ಉಂಟಾಗಲಿದೆ. ದರ್ಶನ್ ಅವರು ಕೊಲೆ ಮುಚ್ಚಿ ಹಾಕಲು ದೊಡ್ಡ ಮೊತ್ತದ ಹಣ ನೀಡಿದ್ದಾರೆ ಎನ್ನುವ ಆರೋಪ ಇದೆ. ಒಂದಷ್ಟು ಹಣದ ವ್ಯವಹಾರ ಕ್ಯಾಶ್ ಮೂಲಕ ಆಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು