LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರೈತರ 'ದೆಹಲಿ ಚಲೋ' ಅಶ್ರುವಾಯು ಪ್ರಯೋಗದಿಂದ ಕೆಲವರಿಗೆ ಗಾಯ, ಒಂದು ದಿನದ ಮಟ್ಟಿಗೆ ಸ್ಥಗಿತ!

ನವದೆಹಲಿ: ಹರಿಯಾಣ ಪೊಲೀಸರು ಸಿಡಿಸಿದ ಅಶ್ರುವಾಯು ಪ್ರಯೋಗದಿಂದ ಕೆಲ ಪ್ರತಿಭಟನಾಕಾರರು ಗಾಯಗೊಂಡಿರುವುದರಿಂದ 'ದೆಹಲಿ ಚಲೋ' ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈತ ನಾಯಕರೊಬ್ಬರು ಶುಕ್ರವಾರ ಸಂಜೆ ತಿಳಿಸಿದ್ದಾರೆ. ಕೆಲ ರೈತರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಇಂದು ಜಾಥವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಹರಿಯಾಣ ಭದ್ರತಾ ಸಿಬ್ಬಂದಿ ಸಿಡಿಸಿದ ಅಶ್ರುವಾಯು ಪ್ರಯೋಗದಿಂದ ಐದರಿಂದ ಆರು ರೈತರು ಗಾಯಗೊಂಡಿದ್ದಾರೆ ಎಂದು ರೈತ ನಾಯಕರು ತಿಳಿಸಿದ್ದಾರೆ. 101 ರೈತರು ಶಂಭು ಗಡಿಯಿಂದ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ದೆಹಲಿಯತ್ತ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಆದರೆ, ಸ್ವಲ್ಪ ದೂರ ಸಾಗುತ್ತಿದ್ದಂತೆ ಬ್ಯಾರಿಕೇಡ್ ಸರ್ಪಗಾವಲಿನ ಮೂಲಕ ಅವರನ್ನು ತಡೆಯಲಾಯಿತು.

ರೈತರು ಬ್ಯಾರಿಕೇಡ್‌ಗಳ ಬಳಿ ತಲುಪುತ್ತಿದ್ದಂತೆ ಅವರನ್ನು ಚದುರಿಸಲು ಹರಿಯಾಣ ಭದ್ರತಾ ಸಿಬ್ಬಂದಿ ಅಶ್ರುವಾಯು ಸಿಡಿಸಿದರು. ರೈತರು ವಾಪಸ್ ಹೋಗುವಂತೆ ಒತ್ತಾಯಿಸಿ ಹಲವು ಸುತ್ತು ಅಶ್ರುವಾಯು ಪ್ರಯೋಗ ನಡೆಸಲಾಯಿತು. ಇದರಿಂದ

ಕೆಲವು ರೈತರಿಗೆ ಗಾಯಗಳಾಗಿದ್ದು, ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಪ್ರತಿಭಟನಾಕಾರರು ಹೇಳಿದರು. ರಾಷ್ಟ್ರೀಯ ಹೆದ್ದಾರಿ 44 ರ ಅಡ್ಡಲಾಗಿ ಹಾಕಲಾದ ಪೊಲೀಸ್ ಬ್ಯಾರಿಕೇಡ್‌ನಲ್ಲಿ ಅಸ್ತವ್ಯಸ್ತವಾಗಿರುವ ದೃಶ್ಯಗಳನ್ನು IANS ಸುದ್ದಿಸಂಸ್ಥೆ ಹಂಚಿಕೊಂಡಿದೆ.

ಹರಿಯಾಣ ಸರ್ಕಾರವು ನಿಷೇಧಾಜ್ಞೆಗಳನ್ನು ವಿಧಿಸಿದೆ ಮತ್ತು ಅಂಬಾಲಾ ಜಿಲ್ಲೆಯ 11 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಮುಂದಿನ ವಾರದವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ಹರಿಯಾಣ ಸರ್ಕಾರವು ನಿಷೇಧಾಜ್ಞೆಗಳನ್ನು ವಿಧಿಸಿದೆ ಮತ್ತು ಅಂಬಾಲಾ ಜಿಲ್ಲೆಯ 11 ಹಳ್ಳಿಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬೃಹತ್ SMS ಸೇವೆಗಳನ್ನು ಸ್ಥಗಿತಗೊಳಿಸಿದೆ. ಮುಂದಿನ ವಾರದವರೆಗೆ ನಿರ್ಬಂಧಗಳು ಜಾರಿಯಲ್ಲಿರುತ್ತವೆ.

ಫೆಬ್ರವರಿಯಲ್ಲಿ ದೆಹಲಿ ತಲುಪಲು ಪ್ರಯತ್ನಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ರೈತರನ್ನು ಭದ್ರತಾ ಸಿಬ್ಬಂದಿ ತಡೆದಿದ್ದರು. ಈ ಎರಡು ಪ್ರಯತ್ನಗಳ ನಂತರ ರಾಷ್ಟ್ರ ರಾಜಧಾನಿಯತ್ತ ಪ್ರತಿಭಟನಾ ಮೆರವಣಿಗೆಯನ್ನು ರೈತರು ಮತ್ತೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು