LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರೈತ ಸಂಘಟನೆಗಳ ಉಪವಾಸ ಸತ್ಯಾಗ್ರಹಕ್ಕೆ ಆಪ್ ಬೆಂಬಲ

ಬೆಂಗಳೂರು: ದೇಶದಲ್ಲಿ ಕರಾಳ ಕಪ್ಪು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿತ್ತೇವೆ ಹಾಗೂ ರೈತರಿಗೆ ಎಂ ಎಸ್ ಪಿ ಜಾರಿಗೊಳಿಸಲಾಗುತ್ತದೆ ಎಂದು ಸುಳ್ಳು ಭರವಸೆ ನೀಡಿದ್ದ ಕೇಂದ್ರ ಬಿಜೆಪಿ ಸರ್ಕಾರದ ವಿಶ್ವಾಸದ್ರೋಹ ನೀತಿಯನ್ನು ವಿರೋಧಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಜಗಜಿತ್ ಸಿಂಗ್ ದಲೆವಾಲಾ ರವರ ನಿರಂತರ ಅಮರನಾಂತ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಘೋಷಿಸಿರುವ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಆಮ್ ಆದ್ವಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಿಂದಿಲ್ಲಿ ಘೋಷಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆರಂಭವಾದ ರೈತರ ಉಪವಾಸ ಸತ್ಯಾಗ್ರಹಕ್ಕೆ ಆಗಮಿಸಿದ ಮುಖ್ಯಮಂತ್ರಿ ಚಂದ್ರು. ಪತ್ರಕರ್ತರೊಂದಿಗೆ ಮಾತನಾಡುತ್ತಾ " ರೈತರಿಗೆ ಕನಿಷ್ಠ ಬೆಂಬಲ ಬೆಲೆ ಹಾಗೂ ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಎರಡುವರೆ ವರ್ಷಗಳಾದರೂ ಸಹ ಇಂದಿಗೂ ಜಾರಿಗೊಳಿಸದೆ ದೇಶದ ಕೋಟ್ಯಂತರ ರೈತರುಗಳಿಗೆ ಮಾಡಿರುವ ವಿಶ್ವಾಸದ್ರೋಹವೆಂದು. ಹಾಗೂ ಹೋರಾಟದಲ್ಲಿ ಭಾಗವಹಿಸಿದ್ದ ನೂರಾರು ರೈತರ ಸಾವುಗಳಿಗೆ ಮಾಡಿರುವ ಸಂಪೂರ್ಣ ಅಪಮಾನ" ಎಂದು ಖಂಡನೆ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಕ್ಷವು ಸದಾ ರೈತರ ನಿರಂತರ ಹೋರಾಟಗಳಿಗೆ ಬೆಂಬಲ ನೀಡುತ್ತದೆ ಎಂದು ಘೋಷಿಸಿದರು. ಉಪವಾಸ ಸತ್ಯಾಗ್ರಹದಲ್ಲಿ ರೈತನಾಯಕ ಕುರುಬೂರು ಶಾಂತಕುಮಾರ್ , ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ. ಸತೀಶ್ , ಕಾರ್ಯದರ್ಶಿ ಜಗದೀಶ್ ಚಂದ್ರ ಸೇರಿದಂತೆ ಅನೇಕ ರೈತ ನಾಯಕರುಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು