LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೈಲ್ವೆ ಪೊಲೀಸರು 1 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ವಶ

ಬೆಂಗಳೂರು: ರೈಲಿನಲ್ಲಿ ಕೆಜಿಗಟ್ಟಲೇ ಗಾಂಜಾ  ಸರಬರಾಜು ಮಾಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರೆ. ಆರೋಪಿಗಳ ಬಳಿ ಇದ್ದ, ಬರೊಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್​ ಆಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಚೆಕ್​​ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ಹೀಗಾಗಿ, ಪೆಡ್ಲರ್​ಗಳು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಪೊಲೀಸ್ ಶ್ವಾನಕ್ಕೂ ವಾಸನೆ ಬಾರದ ರೀತಿ ರೈಲಿನಲ್ಲಿ ಗಾಂಜಾ ಸರಬರಾಜು ಮಾಡುತ್ತಿದ್ದಾರೆ. ಪ್ರಶಾಂತಿ ಮತ್ತು ಹಟಿಯಾ ಎಕ್ಸ್​​​ಪ್ರೆಸ್ ರೈಲಿನಲ್ಲಿ ಆಂದ್ರಪ್ರದೇಶ, ತಮಿಳುನಾಡು, ಓಡಿಶಾಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪೆಡದ ಬೆಂಗಳೂರು ರೈಲ್ವೆ ಪೊಲೀಸರು ದಾಳಿ ಮಾಡಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಇದ್ದ ಟ್ರ್ಯಾಲಿ ಬ್ಯಾಗ್​ಗಳಲ್ಲಿ ಗಾಂಜಾ ಪತ್ತೆಯಾಗಿದೆ. ಕೂಡಲೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಗಾಂಜಾವನ್ನು ಸೀಜ್​ ಮಾಡಿದ್ದಾರೆ.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST