LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಚಕ ಗೆಲುವಿನೊಂದಿಗೆ ಟೂರ್ನಿ ಮುಗಿಸಿದ ಆರ್‍ಸಿಬಿ ಗಲ್ರ್ಸ್

ಸತತ ಐದು ಪಂದ್ಯಗಳಲ್ಲಿ ಪರಾಭವ ಅನುಭವಿಸುವ ಮೂಲಕ ಅಭಿಮಾನಿಗಳನ್ನು ತೀವ್ರ ನಿರಾಸೆಗೊಳಿಸಿದ್ದ ಸ್ಮೃತಿ ಮಂದಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡ ಕೊನೆಗೂ ಗೆಲುವಿನೊಂದಿಗೆ ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ ಅಭಿಯಾನವನ್ನು ಕೊನೆಗೊಳಿಸಿದೆ. ಮುಂಂಬೈನ ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 11 ರನ್ ಗಳಿಂದ ಸೋಲಿಸಿದೆ.

ಹೀಗಾಗಿ ಪ್ರಥಮ ಸ್ಥಾನಿಯಾಗಿ ನೇರವಾಗಿ ಪೈನಲ್ ಪ್ರವೇಶಿಸಬೇಕು ಎಂಬ ಮುಂಬೈ ಇಂಡಿಯನ್ಸ್ ತಂಡದ ಕನಸು ಭಗ್ನಗೊಂಡಿದೆ. ಹೀಗಾಗಿ ಮುಂಬೈ ತಂಡ ಫೈನಲ್ ತಲುಪಲು ಗುರುವಾರ ಗುಜರಾತ್ ಜೈಂಟ್ಸ್ ವಿರುದ್ಧ ನಡೆಯಲಿರುವ ಎಲಿಮಿನೇಟರ್ ಪಂದ್ಯವನ್ನು ಗೆಲ್ಲಲೇ ಬೇಕಿದೆ. ದಿಲ್ಲಿ ಕ್ಯಾಪಿಟಲ್ಸ್ ತಂಡ ಪ್ರಥಮ ಸ್ಥಾನಿಯಾಗಿ ಫೈನಲ್ ಪ್ರವೇಶಿಸಿದೆ.ಗೆಲ್ಲಲು 200 ರನ್ ಗಳ ಕಠಿಣ ಗುರಿ ಪಡೆದ ಮುಂಬೈ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 188 ರನ್ ಗಳನ್ನಷ್ಟೇ ಗಳಿಸಲು ಸಹಾಯಕವಾಯಿತು. ನಾಟ್ ಸಿವಿರ್ ಬ್ರಂಟ್ ಅವರು 35 ಎಸೆತಗಳಿಂದ 8 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದ 69 ರನ್ ಗಳಿಸಿ ಪೆರ್ರಿ ಅವರ ಬೌಲಿಂಗ್ ನಲ್ಲಿ ರಿಟರ್ನ್ ಕ್ಯಾಚ್ ನೀಡಿ ಪೆವಿಲಿಯನ್ ಗೆ ಮರಳಿದರು. ಆ ಬಳಿಕ ರಾಯಲ್ ಚಾಲೆಂಜರ್ಸ್ ನಿರಂತರ ವಿಕೆಟ್ ಉರುಳಿಸುತ್ತಾ ಹೋದ ಕಾರಣ ಮುಂಬೈ ಇಂಡಿಯನ್ಸ್ ತಂಡ ಗುರಿಯ ಸಮೀಪ ತಲುಪಲು ಸಾಧ್ಯವಾಗಲಿಲ್ಲ. ಕಿಮ್ ಗರ್ತ್ ಮತ್ತು ಎಲ್ಸಿ ಪೆರ್ರಿ ತಲಾ 2 ವಿಕೆಟ್ ಕಬಳಿಸಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಆರ್ ಸಿಬಿ ತಂಡ ನಾಯಕಿ ಸ್ಮೃತಿ ಮಂದಾನ(53) ಅವರ ಅರ್ಧಶತಕ ಎಲಿಸ್ ಪೆರ್ರಿ (49) ಮತ್ತು ರಿಚಾ ಘೋಷ್(36) ಮತ್ತು ಜಾರ್ಜಿಯಾ ವಾರೆಹಮ್(31) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 199 ರನ್ ಪೇರಿಸಿತು. ಸ್ಮೃತಿ ಮಂದಾನ ಅವರು 37 ಎಸೆತಗಳಿಂದ 53 ಮತ್ತು ಎಲಿಸ್ ಪೆರ್ರಿ 38 ಎಸೆತಗಳಿಂದ 49 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ನ ಪ್ರಮುಖ ವಿಕೆಟ್ ಗಳನ್ನು ನಿರ್ಣಾಯಕ ಹಂತದಲ್ಲಿ ಕೀಳುವಲ್ಲಿ ಯಶಸ್ವಿಯಾದ ಆಫ್ ಸ್ಪಿನ್ನರ್ ಸ್ನೇಹಾ ರಾಣಾ ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು