LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಲಕ್ಷ್ಮಿ ಹೆಬ್ಬಾಳ್ಕರ್‍ಗೆ ಕ್ಷಮೆಯಾಚಿಸದಿದ್ದರೆ ಕೊಲೆ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ

ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಕ್ಷಮೆ ಕೇಳದಿದ್ದರೆ ಹತ್ಯೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ``ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ'' ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ, ಅಪರಿಚಿತ ವ್ಯಕ್ತಿಗಳಿಂದ ಎಂಎಲ್‍ಸಿ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಬಂದಿದೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿ.ಟಿ.ರವಿ ಅವರಿಗೆ ಹೆಚ್ಚಿನ ಭದ್ರತೆ ನೀಡುತ್ತೇವೆ ಎಂದು ಹೇಳಿದರು.15 ದಿನದೊಳಗೆ ಚಿಕ್ಕಮಗಳೂರಿನಿಂದ ಬಂದು ಬೆಳಗಾವಿ ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲು ಮುರಿದು ಸಾಯಿಸುತ್ತೇವೆ. ನಿನ್ನ ಮಗನನ್ನು ಸಾಯಿಸುತ್ತೇವೆ ಹುಷಾರಾಗಿ ಇರಿ ಎಂಬ ಬೆದರಿಕೆ ಪತ್ರ ಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು