LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ; ಆಡಿಯೋ, ವಿಡಿಯೋ ಸಾಕ್ಷ್ಯಗಳಿವೆ: ಸಿಎಂ

ಕಲಬುರಗಿ: ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಘಟನೆಗೆ ಹಲವು ಎಂಎಲ್‌ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

'ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್‌ಸಿಗಳು ಅವರು ಅಂದಿದ್ದನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ?' ಎಂದು ಕೇಳಿದರು.

ಈ ವಿಚಾರದಲ್ಲಿ ಬಿಜೆಪಿಯ ಹಿರಿಯ ನಾಯಕರ ನಡೆ ಅತ್ಯಂತ ಖಂಡನೀಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿಸೆಂಬರ್ 19 ರಂದು ಬೆಳಗಾವಿಯಲ್ಲಿ ನಡೆದ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಮುಕ್ತಾಯದ ದಿನದಂದು ಪರಿಷತ್ತಿನೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ರವಿ ಅವರನ್ನು ಬಂಧಿಸಲಾಯಿತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು